AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಸ್ಟರಿ… ಹಿಸ್ಟರಿ… ಹಿಸ್ಟರಿ… ಕ್ಯಾಚ್ ಕೈಚೆಲ್ಲಿ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

India vs Bangladesh: ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ದುಬೈನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 168 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ಪರ ಸೈಫ್ ಹಸನ್ 51 ಎಸೆತಗಳಲ್ಲಿ 69 ರನ್ ಬಾರಿಸಿದರು. ಇದಾಗ್ಯೂ ಬಾಂಗ್ಲಾದೇಶ್ ತಂಡ 127 ರನ್​ಗಳಿಗೆ ಆಲೌಟ್ ಆಗುವ ಮೂಲಕ 41 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಝಾಹಿರ್ ಯೂಸುಫ್
|

Updated on: Sep 25, 2025 | 7:54 AM

Share
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ (Team India) ಹೊಸ ದಾಖಲೆ ಬರೆದಿದೆ. ಅದು ಸಹ ಕ್ಯಾಚ್ ಕೈ ಚೆಲ್ಲುವ ಮೂಲಕ..! ಅಂದರೆ ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಒಬ್ಬ ಬ್ಯಾಟರ್​ಗೆ ಅತ್ಯಧಿಕ ಬಾರಿ ಜೀವದಾನ ನೀಡಿದ ಅಪಕೀರ್ತಿ ಭಾರತ ತಂಡದ ಪಾಲಾಗಿದೆ.

1 / 5
ದುಬೈನಲ್ಲಿ ನಡೆದ ಏಷ್ಯಾಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು 20 ಓವರ್‌ಗಳಲ್ಲಿ 168 ರನ್ ಕಲೆಹಾಕಿದ್ದರು. ಈ ಗುರಿ ಬೆನ್ನತ್ತಲು ಬಾಂಗ್ಲಾದೇಶ್ ಪರ ಆರಂಭಿಕರಾಗಿ ಸೈಫ್ ಹಸನ್ ಹಾಗೂ ತಂಝಿದ್ ಹಸನ್ ಕಣಕ್ಕಿಳಿದಿದ್ದರು.

2 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಸೈಫ್ ಹಸನ್​ಗೆ ಟೀಮ್ ಇಂಡಿಯಾ ಫೀಲ್ಡರ್ ಗಳು ನೀಡಿದ ಜೀವದಾನಗಳ ಸಂಖ್ಯೆ ಬರೋಬ್ಬರಿ ನಾಲ್ಕು.  40 ರನ್ ಗಳಿಸಿದ್ದಾಗ ಅಕ್ಷರ್ ಪಟೇಲ್ ಬಾಂಗ್ಲಾದೇಶ್ ಆರಂಭಿಕನಿಗೆ ಮೊದಲ ಜೀವದಾನ ನೀಡಿದ್ದರು. ಈ ಅವಕಾಶವನ್ನು ಬಳಸಿಕೊಂಡ ಸೈಫ್ ಹಸನ್ ಅರ್ಧಶತಕ ಪೂರೈಸಿದರು.

3 / 5
ಇದಾದ ಬಳಿಕ 65, 67 ರನ್ ಗಳಿಸಿದ್ದ ವೇಳೆ ಶಿವಂ ದುಬೆ ಎರಡು ಬಾರಿ ಕ್ಯಾಚ್ ಕೈಬಿಟ್ಟರು. ಇನ್ನು 67 ರನ್ ಗಳಿಸಿದ್ದಾಗ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಕೂಡ ಕ್ಯಾಚ್ ಕೈಚೆಲ್ಲಿದರು. ಈ ಮೂಲಕ ಟೀಮ್ ಇಂಡಿಯಾ ಫೀಲ್ಡರ್​ಗಳು ಸೈಫ್ ಹಸನ್​ಗೆ ಬರೋಬ್ಬರಿ 4 ಜೀವದಾನಗಳನ್ನು ನೀಡಿದ್ದಾರೆ.

4 / 5
ಇದರೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಬಾರಿ ಜೀವದಾನ ಪಡೆದ ಬ್ಯಾಟರ್ ಎಂಬ ದಾಖಲೆ ಸೈಫ್ ಹಸನ್ ಹೆಸರಿಗೆ ಸೇರ್ಪಡೆಯಾಗಿದೆ. ಇತ್ತ ಇನಿಂಗ್ಸ್​ವೊಂದರಲ್ಲಿ ಒಬ್ಬನೇ ಬ್ಯಾಟರ್​ನ ಅತೀ ಹೆಚ್ಚು ಕ್ಯಾಚ್ ಕೈಚೆಲ್ಲಿದ ಕಳಪೆ ದಾಖಲೆಯೊಂದು ಟೀಮ್ ಇಂಡಿಯಾ ಪಾಲಾಗಿದೆ.

5 / 5
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ

ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ

ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ

ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್

ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ

ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ

ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!

ಮುಚ್ಚಿದ್ದ ತರಕಾರಿ ಗಾಡಿಯಿಂದ ಒಂದು ಈರುಳ್ಳಿ ತೆಗೆದುಕೊಂಡು ಹಣವಿಟ್ಟ ಯುವಕರು

ಬೆಂಗಳೂರು: ಅಕ್ಷಯನಗರ ಸ್ಕ್ರಾಪ್​ ಗೋಡೌನ್​ನಲ್ಲಿ ಭಾರಿ ಅಗ್ನಿ ಅವಘಡ

ಮಕರ ಸಂಕ್ರಾಂತಿ ಆಚರಣೆಯ ಸರಿಯಾದ ದಿನಾಂಕ, ಮಹತ್ವ ಏನು?