- Kannada News Photo gallery Cricket photos Asia Cup 2025: Jitesh Sharma is likely to be picked in Team India's Squad
Asia Cup 2025: ಭಾರತ ತಂಡದ ಫಿನಿಶರ್ RCB ಆಟಗಾರ..!
Asia Cup 2025: ಏಷ್ಯಾಕಪ್ 2025 ವೇಳಾಪಟ್ಟಿ ಬಿಡುಗಡೆಯಾಗಿದೆ. ಬಿಸಿಸಿಐ ಆಯೋಜಿಸುತ್ತಿರುವ ಈ ಬಾರಿಯ ಏಷ್ಯಾಕಪ್ಗೆ ಯುಎಇ ಆತಿಥ್ಯವಹಿಸಲಿದೆ. ಅದರಂತೆ ಸೆಪ್ಟೆಂಬರ್ 9 ರಿಂದ ಏಷ್ಯಾಕಪ್ ಟೂರ್ನಿಗೆ ಚಾಲನೆ ಸಿಗಲಿದ್ದು, ಸೆಪ್ಟೆಂಬರ್ 28 ರಂದು ಫೈನಲ್ ಪಂದ್ಯ ನಡೆಯಲಿದೆ. ಈ ಟೂರ್ನಿಗಾಗಿ ಶೀಘ್ರದಲ್ಲೇ ಭಾರತ ತಂಡವನ್ನು ಪ್ರಕಟಿಸಲಾಗುತ್ತದೆ.
Updated on: Aug 16, 2025 | 9:54 AM

Asia Cup 2025: ಏಷ್ಯಾಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 9 ರಿಂದ ಆರಂಭವಾಗಲಿರುವ ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನಕ್ಕಾಗಿ ಮುಂದಿನ ವಾರ ಟೀಮ್ ಇಂಡಿಯಾವನ್ನು ಪ್ರಕಟಿಸಲಿದ್ದಾರೆ. 15 ಸದಸ್ಯರ ಈ ತಂಡದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಜಿತೇಶ್ ಶರ್ಮಾ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಏಷ್ಯಾಕಪ್ಗಾಗಿ 2ನೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ಜಿತೇಶ್ ಅವರನ್ನು ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಆಸಕ್ತಿ ತೋರಿದೆ ಎಂದು ಪಿಟಿಐ ವರದಿ ಮಾಡಿದೆ.

ಐಪಿಎಲ್ ಸೀಸನ್-18 ರಲ್ಲಿ ಆರ್ಸಿಬಿ ಪರ ಫಿನಿಶರ್ ಪಾತ್ರದಲ್ಲಿ ಕಣಕ್ಕಿಳಿದಿದ್ದ ಜಿತೇಶ್ ಶರ್ಮಾ 15 ಪಂದ್ಯಗಳಿಂದ 261 ರನ್ ಕಲೆಹಾಕಿದ್ದರು. ಅದು ಕೂಡ ಕೇವಲ 148 ಎಸೆತಗಳಲ್ಲಿ. ತನ್ನ ಸ್ಫೋಟಕ ಬ್ಯಾಟಿಂಗ್ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಜಿತೇಶ್ ಶರ್ಮಾ ಪ್ರಮುಖ ಪಾತ್ರವಹಿಸಿದ್ದರು.

ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ ಜಿತೇಶ್ ಶರ್ಮಾ ಅವರನ್ನು ಟೀಮ್ ಇಂಡಿಯಾದ 2ನೇ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ. ಇನ್ನು ಏಷ್ಯಾಕಪ್ನಿಂದ ರಿಷಭ್ ಪಂತ್ ಹೊರಗುಳಿಯುವುದು ಖಚಿತವಾಗಿದ್ದು, ಹೀಗಾಗಿ ತಂಡದ ಪ್ರಮುಖ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳಲಿದ್ದಾರೆ.

ಅಂದಹಾಗೆ ಜಿತೇಶ್ ಶರ್ಮಾ ಈಗಾಗಲೇ ಟೀಮ್ ಇಂಡಿಯಾ ಪರ 9 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 7 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ಧ ಅವರು 68 ಎಸೆತಗಳಲ್ಲಿ ಒಟ್ಟು 100 ರನ್ ಕಲೆಹಾಕಿದ್ದರು. ಇದೀಗ ಒಂದು ವರ್ಷದ ಬಳಿಕ ಜಿತೇಶ್ ಶರ್ಮಾ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ.
