AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup: ಏಷ್ಯಾಕಪ್​ನಲ್ಲಿ ಬಿಗ್ ಇನ್ನಿಂಗ್ಸ್ ಆಡಿದ ಟಾಪ್ 5 ಆಟಗಾರರು; ಕಿಂಗ್ ಕೊಹ್ಲಿಗೆ ಅಗ್ರಸ್ಥಾನ

Asia Cup's Biggest Innings: ಏಷ್ಯಾಕಪ್ ಟಿ20 ಆವೃತ್ತಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಏಷ್ಯಾಕಪ್‌ನ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಇನ್ನಿಂಗ್ಸ್‌ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 183 ರನ್‌ಗಳ ಇನ್ನಿಂಗ್ಸ್‌ನೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಬಾಬರ್ ಆಝಂ, ಯೂನಿಸ್ ಖಾನ್, ಮುಷ್ಫಿಕರ್ ರಹೀಮ್ ಮತ್ತು ಶೋಯೆಬ್ ಮಲಿಕ್ ಅವರ ಇನ್ನಿಂಗ್ಸ್‌ಗಳು ಕೂಡ ಈ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಪೃಥ್ವಿಶಂಕರ
|

Updated on: Aug 18, 2025 | 10:45 PM

Share
17ನೇ ಆವೃತ್ತಿಯ ಏಷ್ಯಾಕಪ್ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿಯ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆಯುತ್ತಿರುವುದರಿಂದ ರನ್ ಮೆಷಿನ್ ವಿರಾಟ್ ಕೊಹ್ಲಿ ಆಡುವುದನ್ನು ನಾವು ಕಾಣಲಾಗುವುದಿಲ್ಲ. ಆದಾಗ್ಯೂ ಈ ಟೂರ್ನಿಯಲ್ಲಿ ಕೊಹ್ಲಿ ಮಾಡಿರುವ ದಾಖಲೆಯನ್ನು ಯಾರಿಂದಲೂ ಮುರಿಯಲು ಸಾಧ್ಯವಾಗಿಲ್ಲ. ಇದೀಗ ನಾವು ಈ ಟೂರ್ನಿಯಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ಟಾಪ್ 5 ಆಟಗಾರರನ್ನು ಪಟ್ಟಿ ಮಾಡಿದ್ದೇವೆ. ಅದರಲ್ಲಿ ಕಿಂಗ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ.

1 / 6
ಮೇಲೆ ಹೇಳಿದಂತೆ ಈ ಟೂರ್ನಿಯಲ್ಲಿ ಅತ್ಯಧಿಕ ರನ್​ಗಳ ಇನ್ನಿಂಗ್ಸ್ ಆಡಿದ ದಾಖಲೆ ಕೊಹ್ಲಿ ಹೆಸರಿನಲ್ಲಿದೆ. 2012ರ ಏಷ್ಯಾಕಪ್‌ನಲ್ಲಿ ವಿರಾಟ್ ಕೊಹ್ಲಿ ಪಾಕಿಸ್ತಾನ ವಿರುದ್ಧ ಮಿರ್ಪುರದಲ್ಲಿ ನಡೆದಿದ್ದ ಪಂದ್ಯದಲ್ಲಿ 183 ರನ್​ಗಳ ಇನ್ನಿಂಗ್ಸ್ ಆಡಿದ್ದರು. ತಮ್ಮ ಇನ್ನಿಂಗ್ಸ್​ನಲ್ಲಿ 148 ಎಸೆತಗಳನ್ನು ಎದುರಿಸಿದ್ದ ವಿರಾಟ್ 22 ಬೌಂಡರಿ ಮತ್ತು 1 ಸಿಕ್ಸರ್ ಕೂಡ ಬಾರಿಸಿದ್ದರು.

2 / 6
ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ 2023 ರ ಏಷ್ಯಾಕಪ್‌ನ ಆರಂಭಿಕ ಪಂದ್ಯದಲ್ಲಿ ನೇಪಾಳ ವಿರುದ್ಧ 131 ಎಸೆತಗಳಲ್ಲಿ 151 ರನ್ ಬಾರಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ ಅವರು 14 ಬೌಂಡರಿ ಮತ್ತು 4 ಸಿಕ್ಸರ್‌ಗಳನ್ನು ಬಾರಿಸಿದ್ದರಯ.

3 / 6
ಕೊಲಂಬೊದ ಎಸ್‌ಎಸ್‌ಸಿ ಮೈದಾನದಲ್ಲಿ 2004 ರಲ್ಲಿ ನಡೆದಿದ್ದ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನದ ಯೂನಿಸ್ ಖಾನ್ 122 ಎಸೆತಗಳಲ್ಲಿ 144 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಈ ಇನ್ನಿಂಗ್ಸ್‌ನಲ್ಲಿ ಅವರು 8 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಬಾರಿಸಿದ್ದರು.

4 / 6
ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶ್ರೀಲಂಕಾ ವಿರುದ್ಧ 2018 ರಲ್ಲಿ ನಡೆದಿದ್ದ ಪಂದ್ಯದಲ್ಲಿ ಬಾಂಗ್ಲಾದೇಶದ ಮುಷ್ಫಿಕರ್ ರಹೀಮ್ 150 ಎಸೆತಗಳಲ್ಲಿ 144 ರನ್ ಬಾರಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ ಅವರು 11 ಬೌಂಡರಿಗಳು ಮತ್ತು 4 ಸಿಕ್ಸರ್‌ಗಳನ್ನು ಸಿಡಿಸಿದ್ದರು.

5 / 6
ಭಾರತದ ವಿರುದ್ಧ 2004 ರಲ್ಲಿ ನಡೆದಿದ್ದ ಪಂದ್ಯದಲ್ಲಿ ಪಾಕಿಸ್ತಾನದ ಶೋಯೆಬ್ ಮಲಿಕ್ 127 ಎಸೆತಗಳಲ್ಲಿ 143 ರನ್ ಸಿಡಿಸಿದ್ದರು. ಅವರ ಈ ಇನ್ನಿಂಗ್ಸ್‌ನಲ್ಲಿ 18 ಬೌಂಡರಿಗಳು ಮತ್ತು 1 ಸಿಕ್ಸರ್ ಸೇರಿದ್ದವು. ಈ ಇನ್ನಿಂಗ್ಸ್ ಪಾಕಿಸ್ತಾನದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತು.

6 / 6
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌

ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?

ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?

ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ

ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ

Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!