Asian Games: ಧವನ್​ಗೆ ನಾಯಕತ್ವ; ಏಷ್ಯನ್ ಗೇಮ್ಸ್​ಗೆ ಭಾರತ ಸಂಭಾವ್ಯ ತಂಡ ಹೀಗಿದೆ

Asian Games: ಏಷ್ಯನ್ ಗೇಮ್ಸ್​ನಲ್ಲೂ ಅದೇ ಬಿ ತಂಡವನ್ನು ಕಣಕ್ಕಿಳಿಸಲು ಬಿಸಿಸಿಐ ಚಿಂತಿಸಿದೆ. ಸದ್ಯದ ಮಾಹಿತಿ ಪ್ರಕಾರ ಭಾರತದ ಅನುಭವಿ ಬ್ಯಾಟರ್ ಶಿಖರ್ ಧವನ್ ಭಾರತವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on:Jun 26, 2023 | 2:38 PM

ಚೀನಾದ ಹ್ಯಾಂಗ್‌ಝೌ ನಗರದಲ್ಲಿ ಅಕ್ಟೋಬರ್ 23 ರಿಂದ ಅಕ್ಟೋಬರ್ 8 ರವರೆಗೆ ನಡೆಯಲಿರುವ ಏಷ್ಯನ್​ ಗೇಮ್ಸ್​ನಲ್ಲಿ ಟೀಂ ಇಂಡಿಯಾ ಮೊದಲ ಬಾರಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಇಂಡಿಯನ್ ಎಕ್ಸ್‌ಪ್ರೆಸ್ ವರದಿಯ ಪ್ರಕಾರ, ಬಿಸಿಸಿಐ ಈ ಕೀಡ್ರಾಕೂಟಕ್ಕೆ ಪುರುಷರ ಮತ್ತು ಮಹಿಳಾ ತಂಡವನ್ನು ಕಳುಹಿಸಲು ಒಪ್ಪಿಕೊಂಡಿದೆ ಎಂದು ತಿಳಿದುಬಂದಿದೆ.

1 / 6
ವಾಸ್ತವವಾಗಿ 2010 ಮತ್ತು 2014 ರ ಏಷ್ಯನ್ ಗೇಮ್ಸ್​ನ ಆವೃತ್ತಿಯಲ್ಲಿ ಕ್ರಿಕೆಟ್ ಕ್ರೀಡಾಕೂಟದ ಭಾಗವಾಗಿತ್ತು. ಆದರೆ ಈ ಎರಡೂ ಸೀಸನ್​ಗಳಿಗೂ ಭಾರತ ತಂಡವನ್ನು ಕಳುಹಿಸಿರಲಿಲ್ಲ. ಈ ಬಾರಿಯೂ ವಿಶ್ವಕಪ್ ಇರುವ ಕಾರಣ ಟೀಂ ಇಂಡಿಯಾ ಏಷ್ಯನ್ ಗೇಮ್ಸ್ ಆಡುವ ಬಗ್ಗೆ ಅನುಮಾನವಿತ್ತು. ಆದರೆ ಬಿಸಿಸಿಐ ಈ ಕ್ರೀಡಾಕೂಟಕ್ಕೆ ತಂಡವನ್ನು ಕಳುಹಿಸಲು ಗ್ರೀನ್ ಸಿಗ್ನಲ್ ನೀಡಿದೆ.

2 / 6
ಇನ್ನು ಈ ಕ್ರೀಡಾಕೂಟದಲ್ಲಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಪೂರ್ಣ ಭಾರತ ಮಹಿಳಾ ತಂಡ ಕಣಕ್ಕಿಳಿಯುತ್ತಿದೆ. ಆದರೆ ಪುರುಷ ಕ್ರಿಕೆಟ್​ನಲ್ಲಿ ಭಾರತ ಬಿ ತಂಡ ಕಣಕ್ಕಿಳಿಯಲಿದೆ ಎಂದು ವರದಿಯಾಗಿದೆ. ಅಕ್ಟೋಬರ್ ಹಾಗೂ ನವೆಂಬರ್​ನಲ್ಲಿ ವಿಶ್ವಕಪ್ ನಡೆಯುತ್ತಿರುವುದರಿಂದಾಗಿ ಬಿಸಿಸಿಐ ಪುರುಷರ ಬಿ ತಂಡವನ್ನು ಕಳುಹಿಸಲು ಮುಂದಾಗಿದೆ.

3 / 6
ಈ ಹಿಂದೆಯೂ ಬಿಸಿಸಿಐ ಹಲವು ಬಾರಿ ಬಿ ತಂಡವನ್ನು ಕಣಕ್ಕಿಳಿಸಿ ಯಶಸ್ಸು ಕಂಡಿದೆ. ಇದೀಗ ಏಷ್ಯನ್ ಗೇಮ್ಸ್​ನಲ್ಲೂ ಅದೇ ಬಿ ತಂಡವನ್ನು ಕಣಕ್ಕಿಳಿಸಲು ಬಿಸಿಸಿಐ ಚಿಂತಿಸಿದೆ. ಸದ್ಯದ ಮಾಹಿತಿ ಪ್ರಕಾರ ಭಾರತದ ಅನುಭವಿ ಬ್ಯಾಟರ್ ಶಿಖರ್ ಧವನ್ ಭಾರತವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ.

4 / 6
ಉಳಿದಂತೆ ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಜಿತೇಶ್ ಶರ್ಮಾ ಮತ್ತು ತಿಲಕ್ ವರ್ಮಾ ಅವರಂತಹ ಐಪಿಎಲ್​ನ ಸ್ಟಾರ್ ಆಟಗಾರರು ತಂಡದಲ್ಲಿರುವ ಸಾಧ್ಯತೆಗಳಿವೆ. ವಿಶ್ವಕಪ್​ಗೆ ಆಯ್ಕೆಯಾಗುವ 20 ಸದಸ್ಯರ ತಂಡವನ್ನು ಹೊರತುಪಡಿಸಿದರೆ, ಉಳಿದ ಆಟಗಾರರನ್ನು ಏಷ್ಯನ್ ಗೇಮ್ಸ್​ಗೆ ತಂಡದಲ್ಲಿ ಆಯ್ಕೆ ಮಾಡಬಹುದಾಗಿದೆ.

5 / 6
ಏಷ್ಯನ್ ಗೇಮ್ಸ್‌ಗಾಗಿ ಭಾರತ ಸಂಭಾವ್ಯ ತಂಡ: ಶಿಖರ್ ಧವನ್ (ನಾಯಕ), ಯಶಸ್ವಿ ಜೈಸ್ವಾಲ್, ನಿತೀಶ್ ರಾಣಾ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ದೀಪಕ್ ಹೂಡಾ, ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಪ್ರಸಿದ್ಧ್ ಕೃಷ್ಣ ಮತ್ತು ದೀಪಕ್ ಚಹಾರ್.

6 / 6

Published On - 2:36 pm, Mon, 26 June 23

Follow us