AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಬುಮ್ರಾ ಬಳಿ ಇದ್ದ ನಂ.1 ಬೌಲರ್ ಕಿರೀಟವನ್ನು ಕಸಿದುಕೊಂಡ ಆಫ್ರಿಕಾ ವೇಗಿ

ICC Test Rankings: ಇತ್ತೀಚಿನ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಭಾರತದ ಆಟಗಾರರು ಭಾರೀ ನಷ್ಟ ಅನುಭವಿಸಿದ್ದಾರೆ. ಜಸ್ಪ್ರೀತ್ ಬುಮ್ರಾ ನಂ.1 ಬೌಲರ್ ಸ್ಥಾನವನ್ನು ಕಳೆದುಕೊಂಡು ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಅವರ ಸ್ಥಾನವನ್ನು ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಪಡೆದಿದ್ದಾರೆ. ಬ್ಯಾಟ್ಸ್‌ಮನ್ ಶ್ರೇಯಾಂಕದಲ್ಲಿ ಯಶಸ್ವಿ ಜೈಸ್ವಾಲ್ 3ನೇ ಸ್ಥಾನದಲ್ಲಿದ್ದರೆ, ರಿಷಬ್ ಪಂತ್ ಮತ್ತು ವಿರಾಟ್ ಕೊಹ್ಲಿ ಕ್ರಮವಾಗಿ 11ನೇ ಮತ್ತು 14ನೇ ಸ್ಥಾನಕ್ಕೆ ಕುಸಿದಿದ್ದಾರೆ. ರೋಹಿತ್ ಶರ್ಮಾ 24ನೇ ಸ್ಥಾನಕ್ಕೆ ತಲುಪಿದ್ದಾರೆ.

ಪೃಥ್ವಿಶಂಕರ
|

Updated on: Oct 30, 2024 | 4:57 PM

Share
ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಟೆಸ್ಟ್ ಸರಣಿ ನಡೆಯುತ್ತಿರುವ ಮಧ್ಯೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಇತ್ತೀಚಿನ ಟೆಸ್ಟ್ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಈ ಶ್ರೇಯಾಂಕದಲ್ಲಿ ಭಾರತದ ಆಟಗಾರರು ಭಾರೀ ನಷ್ಟವನ್ನು ಎದುರಿಸಿದ್ದು, ಅದರಲ್ಲೂ ಇಷ್ಟು ದಿನ ಬೌಲರ್​ಗಳ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಟೆಸ್ಟ್‌ನಲ್ಲಿ ನಂಬರ್ 1 ಬೌಲರ್ ಕಿರೀಟದಿಂದ ವಂಚಿತರಾಗಿದ್ದಾರೆ.

1 / 6
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬುಮ್ರಾ ಅವರ ಪ್ರದರ್ಶನವು ಇಲ್ಲಿಯವರೆಗೆ ವಿಶೇಷವಾದದ್ದೇನೂ ಆಗಿಲ್ಲ. ಈ ಕಾರಣದಿಂದಾಗಿ ನಂಬರ್ 1 ಸ್ಥಾನದಿಂದ ಬುಮ್ರಾ ಕೆಳಗಿಳಿದರೆ, ಅವರ ಸ್ಥಾನಕ್ಕೆ ದಕ್ಷಿಣ ಆಫ್ರಿಕಾದ ಬೌಲರ್ ಕಗಿಸೊ ರಬಾಡ ಬಂದಿದ್ದಾರೆ. ರಬಾಡ ಇತ್ತೀಚೆಗೆ ನಡೆದ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು.

2 / 6
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಒಂದೇ ಒಂದು ವಿಕೆಟ್ ಪಡೆಯಲಿಲ್ಲ. ಇದರ ಪರಿಣಾಮವನ್ನು ಟೆಸ್ಟ್ ರ್ಯಾಂಕಿಂಗ್​ನಲ್ಲಿ ಅನುಭವಿಸಿರುವ ಬುಮ್ರಾ, ನಂಬರ್ 1 ಸ್ಥಾನದಿಂದ ಇದೀಗ ನೇರವಾಗಿ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಇತ್ತ ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಈಗ ಟೆಸ್ಟ್‌ನ ಹೊಸ ನಂಬರ್-1 ಬೌಲರ್ ಎನಿಸಿಕೊಂಡಿದ್ದಾರೆ.

3 / 6
ಕಗಿಸೊ ರಬಾಡ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 300 ವಿಕೆಟ್‌ಗಳನ್ನು ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ನಿರ್ಮಿಸಿದ್ದರು. ಇದೀಗ ಐಸಿಸಿಯಿಂದ ಬಂಪರ್ ಗಿಫ್ಟ್ ಪಡೆದಿರುವ ರಬಾಡ, ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

4 / 6
ಸದ್ಯ ದಕ್ಷಿಣ ಆಫ್ರಿಕಾ ತಂಡ ಬಾಂಗ್ಲಾದೇಶ ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ಕಗಿಸೊ ರಬಾಡ ಒಟ್ಟು 9 ವಿಕೆಟ್ ಪಡೆದಿದ್ದರು. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಒಟ್ಟು 3 ವಿಕೆಟ್ ಉರುಳಿಸಿದ್ದ ರಬಾಡ, ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗಳನ್ನು ಪಡೆದರು.

5 / 6
ಇತ್ತ ಬ್ಯಾಟ್ಸ್​ಮನ್​ಗಳ ರ್ಯಾಂಕಿಂಗ್​ನಲ್ಲಿ ಟೀಂ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 3 ನೇ ಸ್ಥಾನದಲ್ಲಿದ್ದರೆ, ರಿಷಬ್ ಪಂತ್ 5 ಸ್ಥಾನ ಕಳೆದುಕೊಂಡಿದ್ದು, ಇದೀಗ 11ನೇ ಸ್ಥಾನಕ್ಕೆ ತಲುಪಿದ್ದಾರೆ. ವಿರಾಟ್ ಕೊಹ್ಲಿ ಕೂಡ 6 ಸ್ಥಾನ ಕುಸಿದು 14ನೇ ಸ್ಥಾನಕ್ಕೆ ತಲುಪಿದ್ದಾರೆ. ರೋಹಿತ್ ಶರ್ಮಾ ಭಾರೀ ಹೊಡೆತ ಅನುಭವಿಸಿದ್ದು, ಇದೀಗ 9 ಸ್ಥಾನಗಳನ್ನು ಕಳೆದುಕೊಂಡಿದ್ದು 24ನೇ ಸ್ಥಾನಕ್ಕೆ ಜಾರಿದ್ದಾರೆ. ಇದಲ್ಲದೇ ಶುಭ್​ಮನ್ ಗಿಲ್ ಕೂಡ 19ನೇ ಸ್ಥಾನದಿಂದ 20ನೇ ಸ್ಥಾನಕ್ಕೆ ಇಳಿದಿದ್ದಾರೆ.

6 / 6
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?