ಅಂದಹಾಗೆ ಆಥಿಯಾ ಶೆಟ್ಟಿ ಬಾಲಿವುಡ್ನ ಖ್ಯಾತ ನಟ ಸುನೀಲ್ ಶೆಟ್ಟಿ ಅವರ ಮಗಳು ಎಂಬುದು ವಿಶೇಷ. ಅಲ್ಲದೆ ಸಲ್ಮಾನ್ ಖಾನ್ ಅವರ ಪ್ರೊಡಕ್ಷನ್ ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾದ ಹೀರೋ ಚಿತ್ರದ ಮೂಲಕ ಬಾಲಿವುಡ್ಗೆ ಪದಾರ್ಪಣೆ ಮಾಡಿದ್ದರು. ಇದಾದ ಬಳಿಕ ಮುಬಾರಕನ್ ಸೇರಿದಂತೆ ಕೆಲ ಸಿನಿಮಾಗಳಲ್ಲಿ ಕಾಣಿಸಿಕೊಂಡರೂ, ಅಭಿನೇತ್ರಿಯಾಗಿ ಛಾಪು ಮೂಡಿಸುವಲ್ಲಿ ವಿಫಲರಾಗಿದ್ದರು.