AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರನ್​ಗೆ 5 ವಿಕೆಟ್: ಭರ್ಜರಿ ದಾಖಲೆ ಬರೆದ ಕಾಶ್ಮೀರಿ ವೇಗಿ

Auqib Nabi: ಜಮ್ಮು ಕಾಶ್ಮೀರದ ವೇಗಿ ಆಖಿಬ್ ನಬಿ ಕಳೆದ ಬಾರಿಯ ದುಲೀಪ್ ಟ್ರೋಫಿ ಟೂರ್ನಿಯಲ್ಲಿ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸಿ ಭರ್ಜರಿ ದಾಖಲೆ ನಿರ್ಮಿಸಿದ್ದರು. ದುಲೀಪ್ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಉತ್ತರ ವಲಯ ಪರ ಕಣಕ್ಕಿಳಿದಿದ್ದ ಆಖಿಬ್ ಪೂರ್ವ ವಲಯ ವಿರುದ್ಧದ ಪಂದ್ಯದಲ್ಲಿ ಈ ಸಾಧನೆ ಮಾಡಿದ್ದರು. ಇದೀಗ ರಣಜಿ ಪಂದ್ಯದಲ್ಲಿ 5 ರನ್ ಗೆ ಐದು ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 27, 2025 | 8:23 AM

Share
ರಣಜಿ ಟೂರ್ನಿಯಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಜಮ್ಮು-ಕಾಶ್ಮೀರ್ ವೇಗಿ ಆಖಿಬ್ ನಬಿ (Auqib nabi) ಸಂಚಲನ ಸೃಷ್ಟಿಸಿದ್ದಾರೆ. ಅದು ಸಹ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಎಂಬುದು ಮತ್ತೊಂದು ವಿಶೇಷ. ಅಂದರೆ ಹಾಫ್ ಸೆಂಚುರಿ ಸಿಡಿಸಿದ ಬೆನ್ನಲ್ಲೇ ಆಖಿಬ್ ಐದು ವಿಕೆಟ್​ಗಳನ್ನು ಸಹ ಕಬಳಿಸಿದ್ದಾರೆ.

1 / 5
ಶ್ರೀನಗರದ ಶೇರ್ ಐ ಕಾಶ್ಮೀರ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಜಮ್ಮು ಕಾಶ್ಮೀರ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ತಂಡವು ಕೇವಲ 152 ರನ್ ಗಳಿಗೆ ಆಲೌಟ್ ಆಗಿತ್ತು. ಜಮ್ಮು ಕಾಶ್ಮೀರ ಪರ ಆಖಿಬ್ ನಬಿ 29 ರನ್ ನೀಡಿ 3 ವಿಕೆಟ್ ಪಡೆದರೆ, ಸುನಿಲ್ ಕುಮಾರ್ 32 ರನ್ ಗೆ 4 ವಿಕೆಟ್ ಕಬಳಿಸಿದರು.

2 / 5
ಆ ಬಳಿಕ ಮೊದಲ ಇನಿಂಗ್ಸ್ ಶುರು ಮಾಡಿದ ಜಮ್ಮು ಕಾಶ್ಮೀರ ಪರ ಅಬ್ದುಲ್‌ ಸಮದ್ 76 ರನ್ ಬಾರಿಸಿದರು. ಇನ್ನು 9ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಆಖಿಬ್ ನಬಿ 65 ಎಸೆತಗಳಲ್ಲಿ 55 ರನ್ ಚಚ್ಚಿದರು. ಈ ಮೂಲಕ ಜಮ್ಮು ಕಾಶ್ಮೀರ ತಂಡವು ಮೊದಲ ಇನಿಂಗ್ಸ್ ನಲ್ಲಿ 282 ರನ್ ಗಳಿಸಿ ಆಲೌಟ್ ಆಯಿತು.

3 / 5
ಇದರ ಬೆನ್ನಲ್ಲೇ ದ್ವಿತೀಯ ಆರಂಭಿಸಿದ ರಾಜಸ್ಥಾನ್ ತಂಡಕ್ಕೆ ಆಖಿಬ್ ನಬಿ ಆಘಾತದ ಮೇಲೆ ಆಘಾತ ನೀಡಿದರು. ದ್ವಿತೀಯ ದಿನದಾಟದ ಅಂತ್ಯದಲ್ಲಿ 6 ಓವರ್‌ಗಳನ್ನು ಎಸೆದ ಆಖಿಬ್ ಕೇವಲ 5 ವಿಕೆಟ್ ಕಬಳಿಸಿದರು. ವಿಶೇಷ ಎಂದರೆ ಆಖಿಬ್ ನಬಿ ಕಬಳಿಸಿರುವುದು ರಾಜಸ್ಥಾನ್ ತಂಡ ಟಾಪ್-5 ಬ್ಯಾಟರ್ ಗಳ ವಿಕೆಟ್ ಗಳನ್ನು. ಅಂದರೆ ಸತತವಾಗಿ ಐವರನ್ನು ಔಟ್ ಮಾಡಿದ್ದಾರೆ.

4 / 5
ಈ ಮೂಲಕ ರಣಜಿ ಕ್ರಿಕೆಟ್ ಇತಿಹಾಸದಲ್ಲೇ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಅತೀ ಕಡಿಮೆ ಅವಧಿಯಲ್ಲಿ 5 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಅಂದಹಾಗೆ ಆಖಿಬ್ ನಬಿ ಈ ವಿಶೇಷ ದಾಖಲೆ ಬರೆಯುವ ಮುನ್ನ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದ್ದರು. ಅದು ಸಹ ಸತತ 4 ಎಸೆತಗಳಲ್ಲಿ 4 ವಿಕೆಟ್ ಕಬಳಿಸುವ ಮೂಲಕ. ಇದೀಗ ರಣಜಿ ಪಂದ್ಯದಲ್ಲಿ ಕೇವಲ 5 ರನ್ ನೀಡಿ 5 ವಿಕೆಟ್ ಉರುಳಿಸಿ ಸಂಚಲನ ಸೃಷ್ಟಿಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ