- Kannada News Photo gallery Cricket photos AUS vs ENG: Australia drops spinner for first time in 138 years at SCG
138 ವರ್ಷಗಳ ಬಳಿಕ ವಿಭಿನ್ನ ಪ್ಲೇಯಿಂಗ್ ಇಲೆವೆನ್ ರೂಪಿಸಿದ ಆಸ್ಟ್ರೇಲಿಯಾ
Australia vs England, 5th Test: ಆಸ್ಟ್ರೇಲಿಯಾ ವಿರುದ್ಧದ ಆ್ಯಶಸ್ ಸರಣಿಯ ಐದನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇತ್ತ ಮೊದಲು ಬೌಲಿಂಗ್ ಮಾಡುತ್ತಿರುವ ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಸ್ಪಿನ್ನರ್ ಇಲ್ಲದಿರುವುದು ವಿಶೇಷ.
Updated on:Jan 04, 2026 | 9:00 AM

ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಣ ಪ್ರತಿಷ್ಠಿತ ಆ್ಯಶಸ್ ಸರಣಿಯ ಕೊನೆಯ ಪಂದ್ಯ ಶುರುವಾಗಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ವಿಭಿನ್ನ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸುವ ಮೂಲಕ ಆಸ್ಟ್ರೇಲಿಯಾ ತಂಡ ಹೊಸ ಇತಿಹಾಸ ನಿರ್ಮಿಸಿದೆ.

ಅಂದರೆ ಆಸ್ಟ್ರೇಲಿಯಾ ತಂಡವು 138 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಪ್ರಮುಖ ಸ್ಪಿನ್ನರ್ ಇಲ್ಲದೆ ಕಣಕ್ಕಿಳಿದಿದೆ. ಅಂದರೆ ಕಳೆದೊಂದು ಶತಮಾನದಲ್ಲಿ ಆಸ್ಟ್ರೇಲಿಯಾ ತಂಡವು ಸ್ಪಿನ್ನರ್ ಇಲ್ಲದೆ ಒಮ್ಮೆಯೂ ಎಸ್ಸಿಜಿ ಮೈದಾನದಲ್ಲಿ ಪಂದ್ಯವಾಡಿರಲಿಲ್ಲ.

ಆದರೆ ಈ ಬಾರಿ ಸ್ಪಿನ್ನರ್ನನ್ನು ಹೊರಗಿಟ್ಟು ಆಲ್ರೌಂಡರ್ ಬ್ಯೂ ವೆಬ್ಸ್ಟರ್ಗೆ ಪ್ಲೇಯಿಂಗ್ ಇಲೆವೆನ್ನಲ್ಲಿ ಅವಕಾಶ ನೀಡಲಾಗಿದೆ. ಈ ಮೂಲಕ 138 ವರ್ಷಗಳ ನಂತರ ಪರಿಪೂರ್ಣ ಸ್ಪಿನ್ ಬೌಲರ್ ಇಲ್ಲದೆ ಆಸ್ಟ್ರೇಲಿಯಾ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಕಣಕ್ಕಿಳಿದಿದೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಸ್ಟೀವ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಜೇಕ್ ವೆದರಾಲ್ಡ್, ಮಾರ್ನಸ್ ಲ್ಯಾಬುಶೇನ್, ಉಸ್ಮಾನ್ ಖ್ವಾಜಾ, ಅಲೆಕ್ಸ್ ಕ್ಯಾರಿ, ಕ್ಯಾಮರೂನ್ ಗ್ರೀನ್, ಬ್ಯೂ ವೆಬ್‌ಸ್ಟರ್, ಮೈಕೆಲ್ ನೇಸರ್, ಮಿಚೆಲ್ ಸ್ಟಾರ್ಕ್, ಸ್ಕಾಟ್ ಬೋಲ್ಯಾಂಡ್.

ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಜೇಕಬ್ ಬೆಥೆಲ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಬ್ರೈಡನ್ ಕಾರ್ಸ್, ಮ್ಯಾಥ್ಯೂ ಪಾಟ್ಸ್, ಜೋಶ್ ಟಂಗ್.
Published On - 9:00 am, Sun, 4 January 26
