ಪಿಂಕ್ ಬಾಲ್ ಟೆಸ್ಟ್​​ಗೂ ಮುನ್ನ ಆಸ್ಟ್ರೇಲಿಯಾಗೆ ಆಘಾತ: ಪ್ರಮುಖ ವೇಗಿ ಔಟ್

Australia vs India: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​​ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಇದೀಗ ಉಭಯ ತಂಡಗಳು ಅಡಿಲೇಡ್​ನಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಈ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದ್ದು, ಈ ಮ್ಯಾಚ್​​ಗೆ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಅಲಭ್ಯರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 30, 2024 | 10:13 AM

ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​​ವುಡ್ ನೋವಿನ ಸಮಸ್ಯೆಯ ಕಾರಣ ಅಡಿಲೇಡ್ ಟೆಸ್ಟ್​ನಂದ ಹೊರಗುಳಿದಿದ್ದಾರೆ. ಹೀಗಾಗಿ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಹ್ಯಾಝಲ್​​ವುಡ್ ಕಾಣಿಸಿಕೊಳ್ಳುವುದಿಲ್ಲ.

1 / 5
ಜೋಶ್ ಹ್ಯಾಝಲ್​​ವುಡ್ ಅವರ ಪೆಕ್ಕೆಲುಬಿನ ಭಾಗದಲ್ಲಿ ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ವೈದ್ಯರು ಅವರಿಗೆ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಡಿಸೆಂಬರ್ 6 ರಿಂದ ಆರಂಭವಾಗಲಿರುವ ಪಿಂಕ್ ಬಾಲ್ ಟೆಸ್ಟ್​ನಿಂದ ಹೊರಗುಳಿಯಲು ಹ್ಯಾಝಲ್​​ವುಡ್ ನಿರ್ಧರಿಸಿದ್ದಾರೆ.

2 / 5
ಇನ್ನು ಜೋಶ್ ಹ್ಯಾಝಲ್​​ವುಡ್ ಹೊರಗುಳಿದಿರುವ ಕಾರಣ ಬದಲಿಯಾಗಿ ಶಾನ್ ಅಬಾಟ್ ಹಾಗೂ ಬ್ರೆಂಡನ್ ಡಾಗೆಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದಾಗ್ಯೂ ಇವರಿಬ್ಬರಿಗೂ ಪ್ಲೇಯಿಂಗ್ ಇಲೆವೆನ್​​ನಲ್ಲಿ ಚಾನ್ಸ್ ಸಿಗುವುದು ಅನುಮಾನ.

3 / 5
ಏಕೆಂದರೆ ತಂಡದಲ್ಲಿ ಅನುಭವಿ ವೇಗಿಯಾಗಿ ಸ್ಕಾಟ್ ಬೋಲ್ಯಾಂಡ್ ಇದ್ದು, ಪರ್ತ್​ ಟೆಸ್ಟ್​​ನಲ್ಲಿ ಜೋಶ್ ಹ್ಯಾಝಲ್​ವುಡ್ ಕಣಕ್ಕಿಳದಿದ್ದ ಕಾರಣ ಅವರು ಬೆಂಚ್ ಕಾದಿದ್ದರು. ಇದೀಗ ಜೋಶ್ ಹೊರಗುಳಿದಿರುವುದರಿಂದ ಆಸ್ಟ್ರೇಲಿಯಾ ತಂಡದ ಆಡುವ ಬಳಗದಲ್ಲಿ ಬೋಲ್ಯಾಂಡ್​​ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.

4 / 5
ಆಸ್ಟ್ರೇಲಿಯಾ ಟೆಸ್ಟ್​ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖ್ವಾಜಾ, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಮಿಚ್ ಮಾರ್ಷ್, ನಾಥನ್ ಮೆಕ್‌ಸ್ವೀನಿ, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ , ಬ್ಯೂ ವೆಬ್‌ಸ್ಟರ್, ಶಾನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್.

5 / 5

Published On - 10:08 am, Sat, 30 November 24

Follow us