- Kannada News Photo gallery Cricket photos US vs NZ australia beat new zealand by 72 runs in 2nd t20i and clinch the series
AUS vs NZ: ಮತ್ತೆ ಮುಗ್ಗರಿಸಿದ ಕಿವೀಸ್; ಟಿ20 ಸರಣಿ ಆಸೀಸ್ ಕೈವಶ
AUS vs NZ: ಇಂದು ನಡೆದ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಪ್ರವಾಸಿ ಕಾಂಗರೂ ತಂಡ ಆತಿಥೇಯ ಕಿವೀಸ್ ತಂಡವನ್ನು 72 ರನ್‌ಗಳಿಂದ ಸೋಲಿಸಿ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.
Updated on: Feb 23, 2024 | 7:02 PM

ಇಂದು ನಡೆದ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಪ್ರವಾಸಿ ಕಾಂಗರೂ ತಂಡ ಆತಿಥೇಯ ಕಿವೀಸ್ ತಂಡವನ್ನು 72 ರನ್‌ಗಳಿಂದ ಸೋಲಿಸಿ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 174 ರನ್ ಗಳಿಸಿ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 17 ಓವರ್ಗಳಿಗೆ ತನ್ನೇಲ್ಲ ವಿಕೆಟ್ ಕಳೆದುಕೊಂಡು ಕೇವಲ 102 ರನ್‌ಗಳಿಸಲಷ್ಟೇ ಶಕ್ತವಾಯಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಪರ ಆರಂಭಿಕ ಟ್ರಾವಿಸ್ ಹೆಡ್ ಗರಿಷ್ಠ 45 ರನ್ ಗಳಿಸಿದರೆ, ನಾಯಕ ಮಿಚೆಲ್ ಮಾರ್ಷ್ 26 ರನ್ ಸಿಡಿಸಿದರೆ, ಪ್ಯಾಟ್ ಕಮ್ಮಿನ್ಸ್ 28 ರನ್‌ಗಳ ಇನ್ನಿಂಗ್ಸ್ ಆಡಿದರು. ಉಳಿದಂತೆ ತಂಡದ ಮತ್ತ್ಯಾವ ಆಟಗಾರನೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.

ನ್ಯೂಜಿಲೆಂಡ್ ಪರ ಬೌಲಿಂಗ್ನಲ್ಲಿ ಮಿಂಚಿದ ವೇಗದ ಬೌಲರ್ ಲಾಕಿ ಫರ್ಗುಸನ್ ಗರಿಷ್ಠ 4 ವಿಕೆಟ್ ಪಡೆದರೆ, ಅವರ ಹೊರತಾಗಿ ಆಡಮ್ ಮಿಲ್ನೆ, ಬೆನ್ ಸಿಯರ್ಸ್ ಮತ್ತು ಮಿಚೆಲ್ ಸ್ಯಾಂಟ್ನರ್ ತಲಾ 2 ವಿಕೆಟ್ ಪಡೆದರು.

175 ರನ್‌ಗಳ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ಪರ ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಫಿಲಿಫ್ಸ್ 42 ರನ್‌ಗಳ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ಉಳಿದವರಿಂದ ಯಾವುದೇ ಕೊಡುಗೆ ಸಿಗಲಿಲ್ಲ. ಹೀಗಾಗಿ ಕಿವೀಸ್ ತಂಡವು ಪೂರ್ಣ 20 ಓವರ್‌ಗಳನ್ನು ಸಹ ಆಡಲು ಸಾಧ್ಯವಾಗದೆ 17 ಓವರ್‌ಗಳಲ್ಲಿ 102 ರನ್‌ಗಳಿಗೆ ಆಲೌಟ್ ಆಯಿತು.

ಆಸ್ಟ್ರೇಲಿಯಾ ಪರ ಲೆಗ್ ಸ್ಪಿನ್ನರ್ ಆಡಮ್ ಝಂಪಾ 4 ಓವರ್‌ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದರೆ, ನಾಥನ್ ಎಲ್ಲಿಸ್ 2 ವಿಕೆಟ್, ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್ ಮತ್ತು ಮಿಚೆಲ್ ಮಾರ್ಷ್ ತಲಾ ಒಂದೊಂದು ವಿಕೆಟ್ ಪಡೆದರು.




