AUS vs NZ: ಮತ್ತೆ ಮುಗ್ಗರಿಸಿದ ಕಿವೀಸ್; ಟಿ20 ಸರಣಿ ಆಸೀಸ್ ಕೈವಶ

Updated on: Feb 23, 2024 | 7:02 PM

AUS vs NZ: ಇಂದು ನಡೆದ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಪ್ರವಾಸಿ ಕಾಂಗರೂ ತಂಡ ಆತಿಥೇಯ ಕಿವೀಸ್ ತಂಡವನ್ನು 72 ರನ್‌ಗಳಿಂದ ಸೋಲಿಸಿ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.

1 / 6
ಇಂದು ನಡೆದ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಪ್ರವಾಸಿ ಕಾಂಗರೂ ತಂಡ ಆತಿಥೇಯ ಕಿವೀಸ್ ತಂಡವನ್ನು 72 ರನ್‌ಗಳಿಂದ ಸೋಲಿಸಿ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.

ಇಂದು ನಡೆದ ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಪ್ರವಾಸಿ ಕಾಂಗರೂ ತಂಡ ಆತಿಥೇಯ ಕಿವೀಸ್ ತಂಡವನ್ನು 72 ರನ್‌ಗಳಿಂದ ಸೋಲಿಸಿ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ.

2 / 6

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 174 ರನ್ ಗಳಿಸಿ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ 17 ಓವರ್​ಗಳಿಗೆ ತನ್ನೇಲ್ಲ ವಿಕೆಟ್ ಕಳೆದುಕೊಂಡು ಕೇವಲ 102 ರನ್‌ಗಳಿಸಲಷ್ಟೇ ಶಕ್ತವಾಯಿತು.

3 / 6

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಪರ ಆರಂಭಿಕ ಟ್ರಾವಿಸ್ ಹೆಡ್ ಗರಿಷ್ಠ 45 ರನ್ ಗಳಿಸಿದರೆ, ನಾಯಕ ಮಿಚೆಲ್ ಮಾರ್ಷ್​ 26 ರನ್ ಸಿಡಿಸಿದರೆ, ಪ್ಯಾಟ್ ಕಮ್ಮಿನ್ಸ್ 28 ರನ್​ಗಳ ಇನ್ನಿಂಗ್ಸ್ ಆಡಿದರು. ಉಳಿದಂತೆ ತಂಡದ ಮತ್ತ್ಯಾವ ಆಟಗಾರನೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.

4 / 6

ನ್ಯೂಜಿಲೆಂಡ್ ಪರ ಬೌಲಿಂಗ್​ನಲ್ಲಿ ಮಿಂಚಿದ ವೇಗದ ಬೌಲರ್ ಲಾಕಿ ಫರ್ಗುಸನ್ ಗರಿಷ್ಠ 4 ವಿಕೆಟ್ ಪಡೆದರೆ, ಅವರ ಹೊರತಾಗಿ ಆಡಮ್ ಮಿಲ್ನೆ, ಬೆನ್ ಸಿಯರ್ಸ್ ಮತ್ತು ಮಿಚೆಲ್ ಸ್ಯಾಂಟ್ನರ್ ತಲಾ 2 ವಿಕೆಟ್ ಪಡೆದರು.

5 / 6

175 ರನ್‌ಗಳ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ಪರ ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಫಿಲಿಫ್ಸ್ 42 ರನ್​ಗಳ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ಉಳಿದವರಿಂದ ಯಾವುದೇ ಕೊಡುಗೆ ಸಿಗಲಿಲ್ಲ. ಹೀಗಾಗಿ ಕಿವೀಸ್ ತಂಡವು ಪೂರ್ಣ 20 ಓವರ್‌ಗಳನ್ನು ಸಹ ಆಡಲು ಸಾಧ್ಯವಾಗದೆ 17 ಓವರ್‌ಗಳಲ್ಲಿ 102 ರನ್‌ಗಳಿಗೆ ಆಲೌಟ್ ಆಯಿತು.

6 / 6

ಆಸ್ಟ್ರೇಲಿಯಾ ಪರ ಲೆಗ್ ಸ್ಪಿನ್ನರ್ ಆಡಮ್ ಝಂಪಾ 4 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಪಡೆದರೆ, ನಾಥನ್ ಎಲ್ಲಿಸ್ 2 ವಿಕೆಟ್, ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್ ಮತ್ತು ಮಿಚೆಲ್ ಮಾರ್ಷ್ ತಲಾ ಒಂದೊಂದು ವಿಕೆಟ್ ಪಡೆದರು.

Loading...
Unable to load recommendations.
Follow Us