AUS vs PAK: ವಿದಾಯದ ಟೆಸ್ಟ್​ನಲ್ಲಿ ಲಕ್ಷ್ಮಣ್- ಡಿವಿಲಿಯರ್ಸ್​ ದಾಖಲೆ ಮುರಿದ ವಾರ್ನರ್

|

Updated on: Jan 06, 2024 | 3:10 PM

David Warner: ತಮ್ಮ ಕೊನೆಯ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಇನ್ನಿಂಗ್ಸ್ ಆಡಿದ ವಾರ್ನರ್ ಮೊದಲ ಇನ್ನಿಂಗ್ಸ್​ನಲ್ಲಿ 34 ರನ್ ಸಿಡಿಸಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ 57 ರನ್​ಗಳ ಕೊಡುಗೆ ನೀಡಿದರು. ಇದರೊಂದಿಗೆ ವಾರ್ನರ್, ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರ ದಾಖಲೆಯನ್ನು ಮುರಿದರು.

1 / 8
ಪಾಕಿಸ್ತಾನ ವಿರುದ್ಧದ ಕೊನೆಯ ಟೆಸ್ಟ್ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ವಶಪಡಿಸಿಕೊಂಡಿದೆ. ಇದರೊಂದಿಗೆ ಆಸ್ಟ್ರೇಲಿಯ ತಂಡ ತನ್ನ ಆರಂಭಿಕ ಆಟಗಾರ ಡೇವಿಡ್ ವಾರ್ನರ್‌ಗೆ ಟೆಸ್ಟ್ ಕ್ರಿಕೆಟ್‌ನಿಂದ ಗೆಲುವಿನ ವಿದಾಯ ಹೇಳುವಲ್ಲಿ ಯಶಸ್ವಿಯಾಗಿದೆ.

2 / 8
ವಾಸ್ತವವಾಗಿ ಸಿಡ್ನಿ ಡೇವಿಡ್ ವಾರ್ನರ್ ಅವರ ತವರು ಮೈದಾನವಾಗಿದ್ದು, ಈ ಮೈದಾನದಲ್ಲೇ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ವಿದಾಯ ಹೇಳುವುದಾಗಿ ಬಹಳ ಹಿಂದೆಯೇ ಡೇವಿಡ್ ವಾರ್ನರ್ ಹೇಳಿದ್ದರು. ಇದೀಗ ಅದರಂತೆ ವಾರ್ನರ್ ಕ್ರಿಕೆಟ್​ನ ದೀರ್ಘ ಸ್ವರೂಪಕ್ಕೆ ಗುಡ್​ ಬೈ ಹೇಳಿದ್ದಾರೆ.

3 / 8
ಇನ್ನು ತಮ್ಮ ಕೊನೆಯ ಟೆಸ್ಟ್ ಪಂದ್ಯದಲ್ಲಿ ಗೆಲುವಿನ ಇನ್ನಿಂಗ್ಸ್ ಆಡಿದ ವಾರ್ನರ್ ಮೊದಲ ಇನ್ನಿಂಗ್ಸ್​ನಲ್ಲಿ 34 ರನ್ ಸಿಡಿಸಿದರೆ, ಎರಡನೇ ಇನ್ನಿಂಗ್ಸ್​ನಲ್ಲಿ 57 ರನ್​ಗಳ ಕೊಡುಗೆ ನೀಡಿದರು. ಇದರೊಂದಿಗೆ ವಾರ್ನರ್, ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಅವರ ದಾಖಲೆಯನ್ನು ಮುರಿದರು.

4 / 8
ವಾಸ್ತವವಾಗಿ ವಾರ್ನರ್, ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ವಿಚಾರದಲ್ಲಿ ವಿವಿಎಸ್ ಲಕ್ಷ್ಮಣ್ ಮತ್ತು ಎಬಿ ಡಿವಿಲಿಯರ್ಸ್‌ರನ್ನು ಹಿಂದಿಕ್ಕಿದ್ದಾರೆ. ವಾರ್ನರ್ ಇದುವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ 8786 ರನ್ ಗಳಿಸಿದ್ದು, ಈ ಹಿಂದೆ 8781 ರನ್ ಕಲೆಹಾಕಿದ್ದ ಲಕ್ಷ್ಮಣ್ ಮತ್ತು 8765 ರನ್ ಗಳಿಸಿದ್ದ ಡಿವಿಲಿಯರ್ಸ್ ಅವರನ್ನು ವಾರ್ನರ್ ಹಿಂದಿಕ್ಕಿದ್ದಾರೆ.

5 / 8
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿರುವ ಆಟಗಾರರ ಪೈಕಿ 15921 ರನ್‌ ಬಾರಿಸಿರುವ ಸಚಿನ್ ತೆಂಡೂಲ್ಕರ್ ಅವರ ಹೆಸರು ಅಗ್ರಸ್ಥಾನದಲ್ಲಿದೆ. ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 13378 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ.

6 / 8
ಡೇವಿಡ್ ವಾರ್ನರ್ ಆಸ್ಟ್ರೇಲಿಯಾ ಪರ ಎಲ್ಲಾ ಮೂರು ಸ್ವರೂಪಗಳಲ್ಲಿ ಕ್ರಿಕೆಟ್ ಆಡಿದ್ದಾರೆ. ಆಸ್ಟ್ರೇಲಿಯಾ ಪರ 112 ಟೆಸ್ಟ್ ಪಂದ್ಯಗಳಲ್ಲಿ ವಾರ್ನರ್, 26 ಶತಕ ಸಹಿತ 8695 ರನ್ ಗಳಿಸಿದ್ದಾರೆ. ಇದಲ್ಲದೆ 161 ಏಕದಿನ ಪಂದ್ಯಗಳಲ್ಲಿ 6932 ರನ್ ಮತ್ತು 99 ಟಿ20 ಪಂದ್ಯಗಳಲ್ಲಿ 3894 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ವಾರ್ನರ್ 22 ಶತಕಗಳನ್ನು ಸಿಡಿಸಿದ್ದಾರೆ.

7 / 8
ಇನ್ನು 3 ಪಂದ್ಯಗಳ ಟೆಸ್ಟ್ ಸರಣಿಯ ಬಗ್ಗೆ ಹೇಳುವುದಾದರೆ, ಆಸ್ಟ್ರೇಲಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 360 ರನ್‌ಗಳಿಂದ ಮತ್ತು ಎರಡನೇ ಪಂದ್ಯವನ್ನು 79 ರನ್‌ಗಳಿಂದ ಮತ್ತು ಮೂರನೇ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದುಕೊಂಡಿತು.

8 / 8
ಸತತ ಮೂರು ಪಂದ್ಯಗಳ ಗೆಲುವಿನೊಂದಿಗೆ ಆಸ್ಟ್ರೇಲಿಯ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ವೈಟ್​ವಾಶ್ ಮುಖಭಂಗ ಅನುಭವಿಸಿರುವ ಪಾಕಿಸ್ತಾನ ತಂಡ ಆರನೇ ಸ್ಥಾನದಲ್ಲಿದೆ. ಪಾಕಿಸ್ತಾನದ ಸೋಲಿನೊಂದಿಗೆ ಭಾರತ ತಂಡ ಮೊದಲ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಜಾರಿದೆ.