AUS vs SA: ಮಾರ್ಷ್​- ಡೇವಿಡ್ ಸಿಡಿಲಬ್ಬರಕ್ಕೆ 111 ರನ್​ಗಳ ಸೋಲುಂಡ ದಕ್ಷಿಣ ಆಫ್ರಿಕಾ!

AUS vs SA: ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿರುವ ಆಸ್ಟ್ರೇಲಿಯಾ ತಂಡ, ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆರಂಭಿಸಿದೆ. ಡರ್ಬನ್‌ನಲ್ಲಿರುವ ಕಿಂಗ್ಸ್‌ಮೀಡ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯರನ್ನು ಬರೋಬ್ಬರಿ 111 ರನ್​ಗಳಿಂದ ಮಣಿಸುವಲ್ಲಿ ಕಾಂಗೂರಗಳು ಯಶಸ್ವಿಯಾಗಿದ್ದಾರೆ.

ಪೃಥ್ವಿಶಂಕರ
|

Updated on: Aug 31, 2023 | 7:56 AM

ಪ್ರಸ್ತುತ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿರುವ ಆಸ್ಟ್ರೇಲಿಯಾ ತಂಡ, ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆರಂಭಿಸಿದೆ. ಡರ್ಬನ್‌ನಲ್ಲಿರುವ ಕಿಂಗ್ಸ್‌ಮೀಡ್ ಮೈದಾನದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯರನ್ನು ಬರೋಬ್ಬರಿ 111 ರನ್​ಗಳಿಂದ ಮಣಿಸುವಲ್ಲಿ ಕಾಂಗೂರಗಳು ಯಶಸ್ವಿಯಾಗಿದ್ದಾರೆ.

1 / 8
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ ಕಳೆದುಕೊಂಡು 226 ರನ್ ಕಲೆಹಾಕಿತು. ಆಸೀಸ್ ಪರ ಮಿಚೆಲ್ ಮಾರ್ಷ್​ ಹಾಗೂ ಟಿಮ್ ಡೇವಿಡ್ ಅರ್ಧಶತಕ ಬಾರಿಸಿ ಮಿಂಚಿದರು.

2 / 8
ತಂಡದ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದ ನಾಯಕ ಮಿಚೆಲ್ ಮಾರ್ಷ್​, ಕೇವಲ 49 ಎಸೆತಗಳಲ್ಲಿ 13 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 92 ರನ್ ಬಾರಿಸಿ ಕೇವಲ 8 ರನ್​ಗಳಿಂದ ಶತಕ ವಂಚಿತರಾದರು.

3 / 8
ಇನ್ನು 6ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಆಲ್​ರೌಂಡರ್ ಟಿಮ್ ಡೇವಿಡ್ ಕೇವಲ 28 ಎಸೆತಗಳಲ್ಲಿ 7 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಸಿಡಿಲಬ್ಬರದ 64 ರನ್ ಚಚ್ಚಿದರು.

4 / 8
ದಕ್ಷಿಣ ಆಫ್ರಿಕಾ ಪರ ಬೌಲಿಂಗ್​ನಲ್ಲಿ ಮಿಂಚಿದ ಲಿಜಾಡ್ ವಿಲಿಯಮ್ಸ್ ಮೂರು ವಿಕೆಟ್ ಪಡೆದು ಮಿಂಚಿದರೆ, ಮಾರ್ಕೋ ಯಾನ್ಸನ್, ತಬ್ರೇಜ್ ಶಮ್ಸಿ ತಲಾ 1 ವಿಕೆಟ್ ಪಡೆದರು.

5 / 8
ಆಸೀಸ್ ನೀಡಿದ 226 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಆಫ್ರಿಕಾ ಕಾಂಗರೂಗಳ ದಾಳಿಗೆ ತತ್ತರಿಸಿ ಕೇವಲ 16ನೇ ಓವರ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 115 ರನ್​ ಹಾಕಿತು. ಈ ಮೂಲಕ 111 ರನ್​ಗಳ ಹೀನಾಯ ಸೋಲು ಅನುಭವಿಸಿತು.

6 / 8
ಹರಿಣಗಳ ಪರ ಏಕಾಂಗಿ ಹೋರಾಟ ಮಾಡಿದ ಆರಂಭಿಕ ರೀಜಾ ಹೆಂಡ್ರಿಕ್ಸ್ 43 ಎಸೆತಗಳಲ್ಲಿ 5 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 56 ರನ್ ಸಿಡಿಸಿದರು. ಇವರನ್ನು ಬಿಟ್ಟರೆ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ 21 ರನ್ ಹಾಗೂ ಮಾರ್ಕೊ ಯಾನ್ಸೆನ್ 20 ರನ್​ಗಳ ಕೊಡುಗೆ ನೀಡಿದರು.

7 / 8
ಆಸೀಸ್ ಪರ ಬೌಲಿಂಗ್​ನಲ್ಲಿ ಮಿಂಚಿದ ತನ್ವೀರ್ ಸಂಘ 4 ವಿಕೆಟ್ ಪಡೆದರೆ, ಮಾರ್ಕಸ್ ಸ್ಟೊಯಿನಿಸ್ 3 ವಿಕೆಟ್ ಕಬಳಿಸಿದರು. ಸ್ಪೆನ್ಸರ್ ಜಾನ್ಸನ್ 2 ವಿಕೆಟ್ ಪಡೆದರೆ, ಸೀನ್ ಅಬಾಟ್ 1 ವಿಕೆಟ್ ಪಡೆದರು.

8 / 8
Follow us
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್

ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು

ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ