AUS vs SA: 20 ರನ್​ಗೆ 4 ವಿಕೆಟ್; 19 ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಮೊದಲ ಆಫ್ರಿಕಾ ವೇಗಿ ಎಂಫಾಕಾ

Updated on: Aug 10, 2025 | 8:17 PM

Kwena Maphaka: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 17 ರನ್‌ಗಳಿಂದ ಸೋಲುಂಡಿದೆ. ಆದರೆ 19 ವರ್ಷದ ವೇಗಿ ಕ್ವೇನಾ ಎಂಫಕಾ ಅವರ ಅದ್ಭುತ ಬೌಲಿಂಗ್ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ. ಅವರು 4 ವಿಕೆಟ್‌ಗಳನ್ನು ಪಡೆದು ತಮ್ಮ ಮೊದಲ ಅಂತರರಾಷ್ಟ್ರೀಯ ಪಂದ್ಯದಲ್ಲಿಯೇ ದೊಡ್ಡ ದಾಖಲೆ ನಿರ್ಮಿಸಿದರು.

1 / 7
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 17 ರನ್‌ಗಳಿಂದ ಸೋಲನ್ನು ಎದುರಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಆಸೀಸ್ ಪರ ಆಲ್‌ರೌಂಡರ್ ಟಿಮ್ ಡೇವಿಡ್ 83 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರೆ, ಇತ್ತ ಆಫ್ರಿಕಾ ಪರ 19 ವರ್ಷದ ವೇಗಿ ಕ್ವೇನಾ ಎಂಫಾಕಾ ಕೂಡ ಗಮನಾರ್ಹ ಪ್ರದರ್ಶನ ನೀಡಿದರು.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 17 ರನ್‌ಗಳಿಂದ ಸೋಲನ್ನು ಎದುರಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಸ್ಟ್ರೇಲಿಯಾ 1-0 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ. ಈ ಪಂದ್ಯದಲ್ಲಿ ಆಸೀಸ್ ಪರ ಆಲ್‌ರೌಂಡರ್ ಟಿಮ್ ಡೇವಿಡ್ 83 ರನ್​ಗಳ ಗೆಲುವಿನ ಇನ್ನಿಂಗ್ಸ್ ಆಡಿದರೆ, ಇತ್ತ ಆಫ್ರಿಕಾ ಪರ 19 ವರ್ಷದ ವೇಗಿ ಕ್ವೇನಾ ಎಂಫಾಕಾ ಕೂಡ ಗಮನಾರ್ಹ ಪ್ರದರ್ಶನ ನೀಡಿದರು.

2 / 7

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಆದಾಗ್ಯೂ ಕ್ಯಾಮರೂನ್ ಗ್ರೀನ್ ಹಾಗೂ ಟಿಮ್ ಡೇವಿಡ್ ತಮ್ಮ ಹೊಡಿಬಡಿ ಆಟದ ಮೂಲಕ ತಂಡವನ್ನು ಸುಸ್ಥಿತಿಗೆ ತಂದರು. ಈ ವೇಳೆ ದಾಳಿಗಿಳಿದ ಎಂಫಾಕಾ ಆಸೀಸ್ ಮಧ್ಯಮ ಕ್ರಮಾಂಕವನ್ನು ಕಾಡುವಲ್ಲಿ ಯಶಸ್ವಿಯಾದರು.

3 / 7

ಆಸ್ಟ್ರೇಲಿಯಾದಲ್ಲಿ ಮೊದಲ ಬಾರಿಗೆ ಆಡುತ್ತಿರುವ ದಕ್ಷಿಣ ಆಫ್ರಿಕಾದ 19 ವರ್ಷದ ಎಡಗೈ ವೇಗಿ ಕ್ವೇನಾ ಎಂಫಾಕಾ, ತಮ್ಮ ಮೊದಲ ಪಂದ್ಯದಲ್ಲೇ ದೊಡ್ಡ ದಾಖಲೆಯನ್ನು ಮಾಡಿದರು. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಕ್ವೇನಾ ಒಟ್ಟು 4 ವಿಕೆಟ್‌ಗಳನ್ನು ಕಬಳಿಸಿದರು.

4 / 7

ಕೇವಲ 19 ವರ್ಷ 124 ದಿನಗಳ ವಯಸ್ಸಿನ ಕ್ವೇನಾ ಎಂಫಕಾ, ಇದುವರೆಗೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಿರೀಕ್ಷೆಯಂತೆ ಪ್ರದರ್ಶನ ನೀಡಿದ್ದಾರೆ. ಡಾರ್ವಿನ್ ಮೈದಾನದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ, ಕ್ವೇನಾ ತಮ್ಮ 4 ಓವರ್‌ಗಳಲ್ಲಿ ಕೇವಲ 20 ರನ್‌ಗಳನ್ನು ನೀಡಿ ಒಟ್ಟು 4 ವಿಕೆಟ್‌ಗಳನ್ನು ಕಬಳಿಸಿದರು.

5 / 7

ಇದರೊಂದಿಗೆ, ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದಲ್ಲಿ 4 ವಿಕೆಟ್‌ಗಳನ್ನು ಪಡೆದ ದಕ್ಷಿಣ ಆಫ್ರಿಕಾದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಕ್ವೇನಾ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು, ದಕ್ಷಿಣ ಆಫ್ರಿಕಾದ ಯಾವುದೇ ಆಟಗಾರ ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೂರು ಅಥವಾ ಹೆಚ್ಚಿನ ವಿಕೆಟ್‌ಗಳನ್ನು ಪಡೆಯಲು ಸಾಧ್ಯವಾಗಿರಲಿಲ್ಲ.

6 / 7

ಕ್ವೆನಾ ಎಂಫಕಾ 19 ವರ್ಷ 124 ದಿನಗಳಲ್ಲಿ ಟಿ20 ಪಂದ್ಯದಲ್ಲಿ 4 ವಿಕೆಟ್ ಪಡೆಯುವ ಮೂಲಕ ಮತ್ತೊಂದು ದೊಡ್ಡ ದಾಖಲೆಯನ್ನು ಮಾಡಿದ್ದಾರೆ. ಕ್ವೆನಾ ಈಗ ಪೂರ್ಣ ಸದಸ್ಯರ ತಂಡದಲ್ಲಿ ವೇಗದ ಬೌಲರ್ ಆಗಿ ಟಿ20 ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದ ವಿಶ್ವ ಕ್ರಿಕೆಟ್‌ನ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

7 / 7

ಕ್ವೆನಾ ಇದುವರೆಗೆ ತಮ್ಮ ವೃತ್ತಿಜೀವನದಲ್ಲಿ ಒಟ್ಟು 9 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ ಅವರು 28 ಸರಾಸರಿಯಲ್ಲಿ 10 ವಿಕೆಟ್‌ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕ್ವೆನಾ ಜೊತೆಗೆ, ಕಗಿಸೊ ರಬಾಡ ದಕ್ಷಿಣ ಆಫ್ರಿಕಾ ಪರ ಮೊದಲ ಟಿ20 ಪಂದ್ಯದಲ್ಲಿ 2 ವಿಕೆಟ್‌ಗಳನ್ನು ಕಬಳಿಸಿದರು.

Loading...
Unable to load recommendations.
Follow Us