- Kannada News Photo gallery Cricket photos AUS vs WI David Warner achieves major milestone in his 100th t20i
AUS vs WI: ಶತಕದ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಡೇವಿಡ್ ವಾರ್ನರ್..!
David Warner: ಪ್ರಸ್ತುತ ಆಸ್ಟ್ರೇಲಿಯಾ ತಂಡ ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆಸೀಸ್ ಪರ ಗೆಲುವಿನ ಅರ್ಧಶತಕ ಸಿಡಿಸಿದ ಆರಂಭಿಕ ಡೇವಿಡ್ ವಾರ್ನರ್ ವಿಶ್ವ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ.
Updated on: Feb 09, 2024 | 7:18 PM

ಪ್ರಸ್ತುತ ಆಸ್ಟ್ರೇಲಿಯಾ ತಂಡ ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆಸೀಸ್ ಪರ ಗೆಲುವಿನ ಅರ್ಧಶತಕ ಸಿಡಿಸಿದ ಆರಂಭಿಕ ಡೇವಿಡ್ ವಾರ್ನರ್ ವಿಶ್ವ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ.

ವಾಸ್ತವವಾಗಿ ವೆಸ್ಟ್ ಇಂಡೀಸ್ ವಿರುದ್ಧ ಡೇವಿಡ್ ವಾರ್ನರ್ ತಮ್ಮ ವೃತ್ತಿಜೀವನದ 100 ನೇ ಟಿ20 ಪಂದ್ಯವನ್ನು ಆಡಿದರು. ಈ ಮೂಲಕ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಲ್ಲಿ 100 ಅಥವಾ ಹೆಚ್ಚಿನ ಪಂದ್ಯಗಳನ್ನು ಆಡಿದ ಆಸ್ಟ್ರೇಲಿಯಾದ ಮೊದಲ ಬ್ಯಾಟರ್ ಎನಿಸಿಕೊಂಡರು.

ಇದಲ್ಲದೆ, ವಾರ್ನರ್ ಆಸ್ಟ್ರೇಲಿಯಾ ಪರ 100 ಟಿ20 ಪಂದ್ಯಗಳನ್ನು ಆಡಿದ ಮೂರನೇ ಆಸ್ಟ್ರೇಲಿಯಾದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ 103 ಟಿ20 ಪಂದ್ಯಗಳನ್ನು ಆಡಿರುವ ಆರನ್ ಫಿಂಚ್ ವಾರ್ನರ್‌ಗಿಂತ ಮುಂದಿದ್ದಾರೆ.

ಹಾಗೆಯೇ ವಾರ್ನರ್, ಎಲ್ಲಾ ಮೂರು ಸ್ವರೂಪಗಳಲ್ಲಿ ತಮ್ಮ ದೇಶಕ್ಕಾಗಿ 100 ಅಥವಾ ಹೆಚ್ಚಿನ ಪಂದ್ಯಗಳನ್ನು ಆಡಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ವಾರ್ನರ್ ಜೊತೆಗೆ, ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮತ್ತು ನ್ಯೂಜಿಲೆಂಡ್‌ನ ಲೆಜೆಂಡರಿ ಬ್ಯಾಟ್ಸ್‌ಮನ್ ರಾಸ್ ಟೇಲರ್ ಕೂಡ ಸೇರಿದ್ದಾರೆ.

ಇಂದು ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 70 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ ವಾರ್ನರ್, ಕ್ರಿಕೆಟ್‌ನ ಮೂರು ಮಾದರಿಯ 100ನೇ ಪಂದ್ಯದಲ್ಲಿ 50 ಕ್ಕೂ ಅಧಿಕ ರನ್ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

2017 ರಲ್ಲಿ ಭಾರತದ ವಿರುದ್ಧ 100ನೇ ಏಕದಿನ ಪಂದ್ಯವನ್ನಾಡಿದ್ದ ವಾರ್ನರ್, ಆ ಪಂದ್ಯದಲ್ಲಿ 124 ರನ್ ಕಲೆಹಾಕಿದ್ದರು. ಆ ಬಳಿಕ 2023 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ 100 ನೇ ಟೆಸ್ಟ್ ಪಂದ್ಯವನ್ನಾಡಿದ್ದ ವಾರ್ನರ್ ಆ ಪಂದ್ಯದಲ್ಲಿ 200 ರನ್ಗಳ ದ್ವಿಶತಕದ ಇನ್ನಿಂಗ್ಸ್ ಆಡಿದ್ದರು. ಇದೀಗ ವಿಂಡೀಸ್ ವಿರುದ್ಧ 100ನೇ ಟಿ20 ಪಂದ್ಯವನ್ನಾಡಿದ ವಾರ್ನರ್ ಈ ಪಂದ್ಯದಲ್ಲಿ 70 ರನ್ಗಳ ಇನ್ನಿಂಗ್ಸ್ ಆಡಿದ್ದಾರೆ.

ವಿಂಡೀಸ್ ವಿರುದ್ಧ ವಾರ್ನರ್ ಸಿಡಿಸಿದ ಅರ್ಧಶತಕ ಅಂತಾರಾಷ್ಟ್ರೀಯ ವೃತ್ತಿಬದುಕಿನಲ್ಲಿ 37ನೇ ಅರ್ಧಶತಕವಾಗಿದೆ. ಈ ಮೂಲಕ ವಾರ್ನರ್ ಟಿ20 ಕ್ರಿಕೆಟ್‌ನಲ್ಲಿ 100ಅರ್ಧಶತಕಗಳನ್ನು ಪೂರೈಸಿದ್ದಾರೆ. ವಾರ್ನರ್ ಈಗ ಈ ಮಾದರಿಯಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

ವಾರ್ನರ್ ನಂತರ ಟಿ20 ಮಾದರಿಯಲ್ಲಿ ಅತಿ ಹೆಚ್ಚು ಅರ್ಧಶತಕಗಳ ಇನ್ನಿಂಗ್ಸ್ ಆಡಿದ ದಾಖಲೆ 91 ಅರ್ಧಶತಕ ಸಿಡಿಸಿರುವ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಟಿ20 ಮಾದರಿಯಲ್ಲಿ 88 ಅರ್ಧಶತಕಗಳನ್ನು ಸಿಡಿಸಿದ್ದಾರೆ.



















