AUS vs WI: ಶತಕದ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಡೇವಿಡ್ ವಾರ್ನರ್..!

|

Updated on: Feb 09, 2024 | 7:18 PM

David Warner: ಪ್ರಸ್ತುತ ಆಸ್ಟ್ರೇಲಿಯಾ ತಂಡ ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆಸೀಸ್ ಪರ ಗೆಲುವಿನ ಅರ್ಧಶತಕ ಸಿಡಿಸಿದ ಆರಂಭಿಕ ಡೇವಿಡ್ ವಾರ್ನರ್ ವಿಶ್ವ ಕ್ರಿಕೆಟ್​ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ.

1 / 8
ಪ್ರಸ್ತುತ ಆಸ್ಟ್ರೇಲಿಯಾ ತಂಡ ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆಸೀಸ್ ಪರ ಗೆಲುವಿನ ಅರ್ಧಶತಕ ಸಿಡಿಸಿದ ಆರಂಭಿಕ ಡೇವಿಡ್ ವಾರ್ನರ್ ವಿಶ್ವ ಕ್ರಿಕೆಟ್​ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ.

2 / 8
ವಾಸ್ತವವಾಗಿ ವೆಸ್ಟ್ ಇಂಡೀಸ್ ವಿರುದ್ಧ ಡೇವಿಡ್ ವಾರ್ನರ್ ತಮ್ಮ ವೃತ್ತಿಜೀವನದ 100 ನೇ ಟಿ20 ಪಂದ್ಯವನ್ನು ಆಡಿದರು. ಈ ಮೂಲಕ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಲ್ಲಿ 100 ಅಥವಾ ಹೆಚ್ಚಿನ ಪಂದ್ಯಗಳನ್ನು ಆಡಿದ ಆಸ್ಟ್ರೇಲಿಯಾದ ಮೊದಲ ಬ್ಯಾಟರ್ ಎನಿಸಿಕೊಂಡರು.

3 / 8
ಇದಲ್ಲದೆ, ವಾರ್ನರ್ ಆಸ್ಟ್ರೇಲಿಯಾ ಪರ 100 ಟಿ20 ಪಂದ್ಯಗಳನ್ನು ಆಡಿದ ಮೂರನೇ ಆಸ್ಟ್ರೇಲಿಯಾದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ 103 ಟಿ20 ಪಂದ್ಯಗಳನ್ನು ಆಡಿರುವ ಆರನ್ ಫಿಂಚ್ ವಾರ್ನರ್‌ಗಿಂತ ಮುಂದಿದ್ದಾರೆ.

4 / 8
ಹಾಗೆಯೇ ವಾರ್ನರ್, ಎಲ್ಲಾ ಮೂರು ಸ್ವರೂಪಗಳಲ್ಲಿ ತಮ್ಮ ದೇಶಕ್ಕಾಗಿ 100 ಅಥವಾ ಹೆಚ್ಚಿನ ಪಂದ್ಯಗಳನ್ನು ಆಡಿದ ವಿಶ್ವದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ವಾರ್ನರ್ ಜೊತೆಗೆ, ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮತ್ತು ನ್ಯೂಜಿಲೆಂಡ್‌ನ ಲೆಜೆಂಡರಿ ಬ್ಯಾಟ್ಸ್‌ಮನ್ ರಾಸ್ ಟೇಲರ್ ಕೂಡ ಸೇರಿದ್ದಾರೆ.

5 / 8
ಇಂದು ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 70 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ ವಾರ್ನರ್, ಕ್ರಿಕೆಟ್​ನ ಮೂರು ಮಾದರಿಯ 100ನೇ ಪಂದ್ಯದಲ್ಲಿ 50 ಕ್ಕೂ ಅಧಿಕ ರನ್ ಸಿಡಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

6 / 8
2017 ರಲ್ಲಿ ಭಾರತದ ವಿರುದ್ಧ 100ನೇ ಏಕದಿನ ಪಂದ್ಯವನ್ನಾಡಿದ್ದ ವಾರ್ನರ್, ಆ ಪಂದ್ಯದಲ್ಲಿ 124 ರನ್ ಕಲೆಹಾಕಿದ್ದರು. ಆ ಬಳಿಕ 2023 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ 100 ನೇ ಟೆಸ್ಟ್ ಪಂದ್ಯವನ್ನಾಡಿದ್ದ ವಾರ್ನರ್ ಆ ಪಂದ್ಯದಲ್ಲಿ 200 ರನ್​ಗಳ ದ್ವಿಶತಕದ ಇನ್ನಿಂಗ್ಸ್ ಆಡಿದ್ದರು. ಇದೀಗ ವಿಂಡೀಸ್ ವಿರುದ್ಧ 100ನೇ ಟಿ20 ಪಂದ್ಯವನ್ನಾಡಿದ ವಾರ್ನರ್ ಈ ಪಂದ್ಯದಲ್ಲಿ 70 ರನ್​ಗಳ ಇನ್ನಿಂಗ್ಸ್ ಆಡಿದ್ದಾರೆ.

7 / 8
ವಿಂಡೀಸ್ ವಿರುದ್ಧ ವಾರ್ನರ್ ಸಿಡಿಸಿದ ಅರ್ಧಶತಕ ಅಂತಾರಾಷ್ಟ್ರೀಯ ವೃತ್ತಿಬದುಕಿನಲ್ಲಿ 37ನೇ ಅರ್ಧಶತಕವಾಗಿದೆ. ಈ ಮೂಲಕ ವಾರ್ನರ್ ಟಿ20 ಕ್ರಿಕೆಟ್‌ನಲ್ಲಿ 100ಅರ್ಧಶತಕಗಳನ್ನು ಪೂರೈಸಿದ್ದಾರೆ. ವಾರ್ನರ್ ಈಗ ಈ ಮಾದರಿಯಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ.

8 / 8
ವಾರ್ನರ್ ನಂತರ ಟಿ20 ಮಾದರಿಯಲ್ಲಿ ಅತಿ ಹೆಚ್ಚು ಅರ್ಧಶತಕಗಳ ಇನ್ನಿಂಗ್ಸ್ ಆಡಿದ ದಾಖಲೆ 91 ಅರ್ಧಶತಕ ಸಿಡಿಸಿರುವ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಟಿ20 ಮಾದರಿಯಲ್ಲಿ 88 ಅರ್ಧಶತಕಗಳನ್ನು ಸಿಡಿಸಿದ್ದಾರೆ.