AUS vs WI: ಕಿಂಗ್ ಕೊಹ್ಲಿಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಡೇವಿಡ್ ವಾರ್ನರ್..!
AUS vs WI: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಡೇವಿಡ್ ವಾರ್ನರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇನಿಂಗ್ಸ್ ಆರಂಭದಿಂದಲೂ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ವಾರ್ನರ್, ಟಿ20 ಮಾದರಿಯಲ್ಲಿ ಕಿಂಗ್ ಕೊಹ್ಲಿಗೂ ಸಾಧಿಸಲು ಸಾಧ್ಯವಾಗದ ದಾಖಲೆಯನ್ನು ಸೃಷ್ಟಿಸಿದರು.
Updated on: Feb 13, 2024 | 7:09 PM

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಡೇವಿಡ್ ವಾರ್ನರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇನಿಂಗ್ಸ್ ಆರಂಭದಿಂದಲೂ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ವಾರ್ನರ್, ಟಿ20 ಮಾದರಿಯಲ್ಲಿ ಕಿಂಗ್ ಕೊಹ್ಲಿಗೂ ಸಾಧಿಸಲು ಸಾಧ್ಯವಾಗದ ದಾಖಲೆಯನ್ನು ಸೃಷ್ಟಿಸಿದರು.

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 48 ರನ್ ಕಲೆಹಾಕಿದ ತಕ್ಷಣ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್‌ನಲ್ಲಿ 12000 ರನ್ ಪೂರೈಸಿದ ಸಾಧನೆ ಮಾಡಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಹನ್ನೆರಡು ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಐದನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

ವಾರ್ನರ್ಗೂ ಮುನ್ನ ಕ್ರಿಸ್ ಗೇಲ್, ಕೀರಾನ್ ಪೊಲಾರ್ಡ್, ಶೋಯೆಬ್ ಮಲಿಕ್ ಮತ್ತು ಅಲೆಕ್ಸ್ ಹೇಲ್ಸ್ ಮಾತ್ರ ಈ ಸಾಧನೆ ಮಾಡಿದ್ದರು. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಟಿ20 ಕ್ರಿಕೆಟ್‌ನಲ್ಲಿ 14562 ರನ್ ಕಲೆಹಾಕಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮಾಜಿ ಬ್ಯಾಟರ್ ಶೋಯೆಬ್ ಮಲಿಕ್ ಈ ಚುಟುಕು ಮಾದರಿಯಲ್ಲಿ 13096 ರನ್ ಬಾರಿಸಿದ್ದರೆ, ವಿಂಡೀಸ್ನ ಮತ್ತೊಬ್ಬ ಬ್ಯಾಟರ್ ಕೀರಾನ್ ಪೊಲಾರ್ಡ್ ಇದುವರೆಗೆ 12625 ರನ್ ಬಾರಿಸಿದ್ದಾರೆ.

ಈ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಮಾದರಿಯಲ್ಲಿ ಇದುವರೆಗೆ 11994 ರನ್ ಕಲೆಹಾಕಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ, ಡೇವಿಡ್ ವಾರ್ನರ್ 9 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಒಳಗೊಂಡ 81 ರನ್‌ಗಳ ಇನ್ನಿಂಗ್ಸ್ ಆಡಿದರು. ವಾರ್ನರ್ ಇದುವರೆಗೆ ಆಡಿರುವ 368 ಟಿ20 ಪಂದ್ಯಗಳಲ್ಲಿ 8 ಶತಕ ಸೇರಿದಂತೆ 12033 ರನ್ ಗಳಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಅವರ ಹೆಸರಿನಲ್ಲಿ 100 ಅರ್ಧಶತಕಗಳೂ ಸೇರಿವೆ.

ವಿರಾಟ್ ಕೊಹ್ಲಿ ತಮ್ಮ ಟಿ20 ವೃತ್ತಿಜೀವನದಲ್ಲಿ ಇನ್ನೂ 12000 ರನ್ ಪೂರೈಸಲು ಸಾಧ್ಯವಾಗಿಲ್ಲ. ಕೊಹ್ಲಿ ಪ್ರಸ್ತುತ ಟಿ20 ಕ್ರಿಕೆಟ್‌ನಲ್ಲಿ 11994 ರನ್ ಗಳಿಸಿದ್ದು, ಹನ್ನೆರಡು ಸಾವಿರ ರನ್‌ಗಳನ್ನು ಪೂರೈಸಲು ಅವರು ಕೇವಲ 6 ರನ್‌ಗಳ ದೂರದಲ್ಲಿದ್ದಾರೆ.




