AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs WI: ಕಿಂಗ್ ಕೊಹ್ಲಿಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಡೇವಿಡ್ ವಾರ್ನರ್..!

AUS vs WI: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಡೇವಿಡ್ ವಾರ್ನರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇನಿಂಗ್ಸ್ ಆರಂಭದಿಂದಲೂ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ವಾರ್ನರ್, ಟಿ20 ಮಾದರಿಯಲ್ಲಿ ಕಿಂಗ್ ಕೊಹ್ಲಿಗೂ ಸಾಧಿಸಲು ಸಾಧ್ಯವಾಗದ ದಾಖಲೆಯನ್ನು ಸೃಷ್ಟಿಸಿದರು.

ಪೃಥ್ವಿಶಂಕರ
|

Updated on: Feb 13, 2024 | 7:09 PM

Share
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ 20 ಪಂದ್ಯದಲ್ಲಿ ಡೇವಿಡ್ ವಾರ್ನರ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಇನಿಂಗ್ಸ್ ಆರಂಭದಿಂದಲೂ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದ ವಾರ್ನರ್, ಟಿ20 ಮಾದರಿಯಲ್ಲಿ ಕಿಂಗ್ ಕೊಹ್ಲಿಗೂ ಸಾಧಿಸಲು ಸಾಧ್ಯವಾಗದ ದಾಖಲೆಯನ್ನು ಸೃಷ್ಟಿಸಿದರು.

1 / 7
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 48 ರನ್ ಕಲೆಹಾಕಿದ ತಕ್ಷಣ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್‌ನಲ್ಲಿ 12000 ರನ್ ಪೂರೈಸಿದ ಸಾಧನೆ ಮಾಡಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಹನ್ನೆರಡು ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಐದನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

2 / 7
ವಾರ್ನರ್​ಗೂ ಮುನ್ನ ಕ್ರಿಸ್ ಗೇಲ್, ಕೀರಾನ್ ಪೊಲಾರ್ಡ್, ಶೋಯೆಬ್ ಮಲಿಕ್ ಮತ್ತು ಅಲೆಕ್ಸ್ ಹೇಲ್ಸ್ ಮಾತ್ರ ಈ ಸಾಧನೆ ಮಾಡಿದ್ದರು. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಟಿ20 ಕ್ರಿಕೆಟ್​ನಲ್ಲಿ 14562 ರನ್‌ ಕಲೆಹಾಕಿದ್ದಾರೆ.

3 / 7
ಎರಡನೇ ಸ್ಥಾನದಲ್ಲಿರುವ ಪಾಕಿಸ್ತಾನದ ಮಾಜಿ ಬ್ಯಾಟರ್ ಶೋಯೆಬ್ ಮಲಿಕ್ ಈ ಚುಟುಕು ಮಾದರಿಯಲ್ಲಿ 13096 ರನ್ ಬಾರಿಸಿದ್ದರೆ, ವಿಂಡೀಸ್​ನ ಮತ್ತೊಬ್ಬ ಬ್ಯಾಟರ್ ಕೀರಾನ್ ಪೊಲಾರ್ಡ್ ಇದುವರೆಗೆ 12625 ರನ್ ಬಾರಿಸಿದ್ದಾರೆ.

4 / 7
ಈ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಮಾದರಿಯಲ್ಲಿ ಇದುವರೆಗೆ 11994 ರನ್ ಕಲೆಹಾಕಿದ್ದಾರೆ.

5 / 7
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ, ಡೇವಿಡ್ ವಾರ್ನರ್ 9 ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಒಳಗೊಂಡ 81 ರನ್‌ಗಳ ಇನ್ನಿಂಗ್ಸ್‌ ಆಡಿದರು. ವಾರ್ನರ್ ಇದುವರೆಗೆ ಆಡಿರುವ 368 ಟಿ20 ಪಂದ್ಯಗಳಲ್ಲಿ 8 ಶತಕ ಸೇರಿದಂತೆ 12033 ರನ್ ಗಳಿಸಿದ್ದಾರೆ. ಟಿ20 ಕ್ರಿಕೆಟ್‌ನಲ್ಲಿ ಅವರ ಹೆಸರಿನಲ್ಲಿ 100 ಅರ್ಧಶತಕಗಳೂ ಸೇರಿವೆ.

6 / 7
ವಿರಾಟ್ ಕೊಹ್ಲಿ ತಮ್ಮ ಟಿ20 ವೃತ್ತಿಜೀವನದಲ್ಲಿ ಇನ್ನೂ 12000 ರನ್ ಪೂರೈಸಲು ಸಾಧ್ಯವಾಗಿಲ್ಲ. ಕೊಹ್ಲಿ ಪ್ರಸ್ತುತ ಟಿ20 ಕ್ರಿಕೆಟ್‌ನಲ್ಲಿ 11994 ರನ್ ಗಳಿಸಿದ್ದು, ಹನ್ನೆರಡು ಸಾವಿರ ರನ್‌ಗಳನ್ನು ಪೂರೈಸಲು ಅವರು ಕೇವಲ 6 ರನ್‌ಗಳ ದೂರದಲ್ಲಿದ್ದಾರೆ.

7 / 7
ಪೃಥ್ವಿಶಂಕರ
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
Follow Us
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ

ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು

ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ

ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ

ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ

ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ

ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ

ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು

ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ

'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'