AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಚಾಂಪಿಯನ್ಸ್​ ಟ್ರೋಫಿಗೆ ಪ್ಯಾಟ್ ಕಮಿನ್ಸ್ ಡೌಟ್

Champions Trophy 2025: ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದ್ದು, ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗುವ ಸಾಧ್ಯತೆಯಿದೆ. ಟೂರ್ನಿ ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಕಮಿನ್ಸ್ ಗಾಯಗೊಂಡಿರುವುದು ಆಸೀಸ್ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡಲಿದೆ.

ಝಾಹಿರ್ ಯೂಸುಫ್
|

Updated on: Jan 09, 2025 | 2:24 PM

Share
ಫೆಬ್ರವರಿ 19 ರಿಂದ ಶುರುವಾಗಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತ ಎದುರಾಗಿದೆ. ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಈ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಅನುಮಾನ. ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಗಾಯಗೊಂಡಿದ್ದ ಕಮಿನ್ಸ್ ಶೀಘ್ರದಲ್ಲೇ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

1 / 6
ಪ್ಯಾಟ್ ಕಮಿನ್ಸ್ ಮುಂಬರುವ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅಲ್ಲದೆ ಶ್ರೀಘ್ರದಲ್ಲೇ ಮೊಣಕಾಲಿನ ಸ್ಕ್ಯಾನಿಂಗ್​ಗೆ ಒಳಗಾಗಲಿದ್ದಾರೆ ಎಂದು ಸ್ಟ್ರೇಲಿಯಾದ ಆಯ್ಕೆಗಾರರ ​​ಅಧ್ಯಕ್ಷ ಜಾರ್ಜ್ ಬೈಲಿ ದೃಢಪಡಿಸಿದ್ದಾರೆ.

2 / 6
ಇನ್ನು ಸ್ಕ್ಯಾನಿಂಗ್ ರಿಪೋರ್ಟ್ ಬಂದ ಬಳಿಕ ಪ್ಯಾಟ್ ಕಮಿನ್ಸ್ ಯಾವ ರೀತಿಯ ಚಿಕಿತ್ಸೆ ಪಡೆಯಬೇಕು ಎಂಬುದು ನಿರ್ಧಾರವಾಗಲಿದೆ. ಆದರೆ ಕಮಿನ್ಸ್ ಕಾಲಿನಲ್ಲಿ ವಿಪರೀತ ನೋವಿದ್ದು, ಹೀಗಾಗಿ ಅವರು ಸರ್ಜರಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ಆಸ್ಟ್ರೇಲಿಯಾ ಮಾಧ್ಯಮಗಳು ವರದಿ ಮಾಡಿದೆ.

3 / 6
ಒಂದು ವೇಳೆ ಪ್ಯಾಟ್ ಕಮಿನ್ಸ್ ಸರ್ಜರಿಗೆ ಒಳಗಾದರೆ, ಒಂದು ತಿಂಗಳೊಳಗೆ ಚೇತರಿಸಿಕೊಳ್ಳುವುದು ಅನುಮಾನ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಗೆ ಅವರು ಅಲಭ್ಯರಾಗಬಹುದು. ಇದು ಆಸ್ಟ್ರೇಲಿಯಾ ತಂಡದ ಪಾಲಿಗೆ ಹಿನ್ನಡೆಯನ್ನು ಉಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

4 / 6
ಏಕೆಂದರೆ ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಕಣಕ್ಕಿಳಿದ ಆಸ್ಟ್ರೇಲಿಯಾ ತಂಡವು ಎಲ್ಲಾ ಟೂರ್ನಿಗಳಲ್ಲೂ ಯಶಸ್ಸು ಸಾಧಿಸಿದೆ. ಅದು ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಫೈನಲ್ ಆಗಿರಬಹುದು ಅಥವಾ ಏಕದಿನ ವಿಶ್ವಕಪ್ ಆಗಿರಬಹುದು. ಇದಲ್ಲದೆ ಇತ್ತೀಚೆಗೆ ಮುಗಿದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಗಿರಬಹುದು. ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡವು ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದೆ.

5 / 6
ಹೀಗಾಗಿಯೇ ಪ್ಯಾಟ್ ಕಮಿನ್ಸ್ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾದರೆ, ಅದು ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹಿನ್ನಡೆಯನ್ನುಂಟು ಮಾಡಲಿದೆ. ಇನ್ನು ಕಮಿನ್ಸ್ ಹೊರಗುಳಿದರೆ ಆಸ್ಟ್ರೇಲಿಯಾ ಏಕದಿನ ತಂಡದ ನಾಯಕನಾಗಿ ಸ್ಟೀವ್ ಸ್ಮಿತ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

6 / 6
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ

‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’

ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ

ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ

ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ

ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​

ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್

ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್