- Kannada News Photo gallery Cricket photos Australia Bateer Jake Fraser McGurk surpasses AB de Villiers to hit fastest odi century
29 ಎಸೆತಗಳಲ್ಲಿ ಸ್ಫೋಟಕ ಶತಕ; ಗಿಲ್, ಡಿವಿಲಿಯರ್ಸ್ ಹಳೆಯ ವಿಶ್ವ ದಾಖಲೆ ಉಡೀಸ್..!
World Record: ಟ್ಯಾಸ್ಮೆನಿಯಾ ವಿರುದ್ಧ ಅಡಿಲೇಡ್ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಕಾರ್ನೇಜ್ ತಂಡವನ್ನು ಪ್ರತಿನಿಧಿಸಿದ್ದ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಕೇವಲ 29 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಟಿ20 ಹಾಗೂ ಏಕದಿನದಲ್ಲಿ ಅತಿ ಕಡಿಮೆ ಎಸೆತಗಳಲ್ಲಿ ಶತಕ ಪೂರೈಸಿದ್ದ ಕ್ರಿಸ್ ಗೇಲ್ ಹಾಗೂ ಎಬಿ ಡಿವಿಲಿಯರ್ಸ್ ಅವರ ದಾಖಲೆಯನ್ನು ಮುರಿದಿದ್ದಾರೆ.
Updated on: Oct 08, 2023 | 5:02 PM

21 ವರ್ಷದ ಅನ್‌ಕ್ಯಾಪ್ಡ್ ಆಸ್ಟ್ರೇಲಿಯನ್ ಬ್ಯಾಟರ್ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಅವರು ಮಾರ್ಷ್ ಕಪ್‌ನಲ್ಲಿ ಕೇವಲ 29 ಎಸೆತಗಳಲ್ಲಿ ವೇಗದ ಶತಕ ಸಿಡಿಸಿ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಟ್ಯಾಸ್ಮೆನಿಯಾ ವಿರುದ್ಧ ಅಡಿಲೇಡ್ ಓವಲ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಕಾರ್ನೇಜ್ ತಂಡವನ್ನು ಪ್ರತಿನಿಧಿಸಿದ್ದ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಕೇವಲ 29 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಟಿ20 ಹಾಗೂ ಏಕದಿನದಲ್ಲಿ ಅತಿ ಕಡಿಮೆ ಎಸೆತಗಳಲ್ಲಿ ಶತಕ ಪೂರೈಸಿದ್ದ ಕ್ರಿಸ್ ಗೇಲ್ ಹಾಗೂ ಎಬಿ ಡಿವಿಲಿಯರ್ಸ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಜೇಕ್ ಆ ನಂತರ ಉಳಿದ ಅರ್ಧಶತಕವನ್ನು ಕೇವಲ 11 ಎಸೆತಗಳಲ್ಲಿ ಪೂರೈಸಿದರು. ಈ ಮೂಲಕ ಲಿಸ್ಟ್-ಎ ಅಥವಾ ಟಿ20 ಕ್ರಿಕೆಟ್‌ನಲ್ಲಿ ವೇಗದ ಶತಕ ಸಿಡಿಸಿದ ಮೊದಲ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದರು. ಇನ್ನು ಲಿಸ್ಟ್- ಎ ಕ್ರಿಕೆಟ್‌ನಲ್ಲಿ ವೇಗದ ಶತಕ ಸಿಡಿಸಿರುವ ಬ್ಯಾಟರ್ಗಳನ್ನು ನೋಡುವುದಾದರೆ..

ಕೇವಲ 29 ಎಸೆತಗಳಲ್ಲಿ ಶತಕ ಸಿಡಿಸಿರುವ ಜೇಕ್ ಈ ಪಟ್ಟಿಯಲ್ಲಿ ಪ್ರಸ್ತುತ ಮೊದಲ ಸ್ಥಾನದಲ್ಲಿದ್ದರೆ, 2015 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೇವಲ 31 ಎಸೆತಗಳಲ್ಲಿ ಶತಕ ಪೂರೈಸಿದ್ದ ಎಬಿ ಡಿವಿಲಿಯರ್ಸ್ ಎರಡನೇ ಸ್ಥಾನದಲ್ಲಿದ್ದಾರೆ.

ಮೂರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ನ ಕೋರಿ ಆಂಡರ್ಸನ್, 2014 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೇವಲ 36 ಎಸೆತಗಳಲ್ಲಿ ಶತಕ ಪೂರೈಸಿದ್ದರು.

1990 ರಲ್ಲಿ ಡೆವೊನ್ ತಂಡದ ವಿರುದ್ಧ 36 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ್ದ ಸೋಮರ್‌ಸೆಟ್ ತಂಡದ ಗ್ರಹಾಂ ರೋಸ್ ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

1996 ರಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನದ ಶಾಹಿದ್ ಅಫ್ರಿದಿ 37 ಎಸೆತಗಳಲ್ಲಿ ಶತಕ ಸಿಡಿಸಿದ್ದು, ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ.




