AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದಿದ್ದು ಆಸ್ಟ್ರೇಲಿಯಾ, ಸೋತಿದ್ದು ಸೌತ್ ಆಫ್ರಿಕಾ, ದಾಖಲೆ ಮುರಿದದ್ದು ಟೀಮ್ ಇಂಡಿಯಾದು!

Australia vs South Africa: ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 50 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 431 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ ಕೇವಲ 155 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on:Aug 25, 2025 | 8:01 AM

Share
ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಅಮೋಘ ಗೆಲುವಿನೊಂದಿಗೆ ಆಸೀಸ್ ಪಡೆ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದೆ. ಅದು ಸಹ ಟೀಮ್ ಇಂಡಿಯಾ ದಾಖಲೆ ಮುರಿಯುವ ಮೂಲಕ..!

1 / 5
ಮೆಕೆನ ಗ್ರೇಟ್ ಬಾರಿಯರ್ ಗ್ರೀಫ್ ಅರೆನಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (142), ಮಿಚೆಲ್ ಮಾರ್ಷ್ (100) ಹಾಗೂ ಕ್ಯಾಮರೋನ್ ಗ್ರೀನ್ (118) ಭರ್ಜರಿ ಶತಕ ಸಿಡಿಸಿದರು. ಈ ಶತಕಗಳ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡ 50 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 431 ರನ್ ಗಳು.

2 / 5
432 ರನ್ ಗಳ ಕಠಿಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 24.5 ಓವರ್‌ಗಳಲ್ಲಿ ಕೇವಲ 155 ರನ್ ಗಳಿಗೆ ಆಲೌಟ್ ಆಯಿತು. ಈ ಮೂಲಕ ಆಸ್ಟ್ರೇಲಿಯಾ ತಂಡವು 276 ರನ್ ಗಳ ಪ್ರಚಂಡ ಗೆಲುವು ದಾಖಲಿಸಿದೆ. ಈ ಅಮೋಘ ಗೆಲುವಿನೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಅತ್ಯಂತ ಹೀನಾಯವಾಗಿ ಸೋಲಿಸಿದ ಹೆಗ್ಗಳಿಕೆಯೊಂದನ್ನು ಆಸ್ಟ್ರೇಲಿಯಾ ತಂಡ ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ ಈ ಕೀರ್ತಿಯು ಟೀಮ್ ಇಂಡಿಯಾದ ಹೆಸರಿನಲ್ಲಿತ್ತು.

3 / 5
ಭಾರತ ತಂಡವು 2023 ರಲ್ಲಿ ಕೊಲ್ಕತ್ತಾದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು 243 ರನ್​ಗಳ ಅಂತರದಿಂದ ಸೋಲಿಸಿದ್ದರು. ಈ ಮೂಲಕ ಸೌತ್ ಆಫ್ರಿಕಾ ವಿರುದ್ಧ ಅತ್ಯಧಿಕ ರನ್​ಗಳ ಅಂತರದಿಂದ ಗೆದ್ದ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿದ್ದರು.

4 / 5
ಇದೀಗ ಸೌತ್ ಆಫ್ರಿಕಾ ತಂಡವನ್ನು ಬರೋಬ್ಬರಿ 276 ರನ್​ಗಳ ಅಂತರದಿಂದ ಆಸ್ಟ್ರೇಲಿಯಾ ಬಗ್ಗು ಬಡಿದಿದೆ. ಈ ಮೂಲಕ ಟೀಮ್ ಇಂಡಿಯಾ ಹೆಸರಿನಲ್ಲಿದ್ದ ದಾಖಲೆ ಮುರಿದು, ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಸೌತ್ ಆಫ್ರಿಕಾ ತಂಡವನ್ನು ಅತೀ ಹೆಚ್ಚು ರನ್​ಗಳ ಅಂತರದಿಂದ ಸೋಲಿಸಿದ ಕೀರ್ತಿಯನ್ನು ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ.

5 / 5

Published On - 7:57 am, Mon, 25 August 25

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ

ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!

‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ

ಕೆಆರ್​ಎಸ್​ನಲ್ಲಿ ಕುಸಿದ ನೀರಿನ ಮಟ್ಟ; ಸಂಪೂರ್ಣ ಗೋಚರಿಸುತ್ತಿರುವ ದೇಗುಲ!

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ನಿರ್ಮಲಾ ಸೀತಾರಾಮನ್ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಕಾಕ್ಸ್​

ರಾಮ್ ಚರಣ್ ಬಾಡಿಗಾರ್ಡ್ ಕೆವಿನ್ ಭರ್ಜರಿ ಕಸರತ್ತು; ವಿಡಿಯೋ ವೈರಲ್

ಬಿಡದಿ ಟೌನ್‌ಶಿಪ್ ಯೋಜನೆ: ಜೂನ್ 20ಕ್ಕೆ ರೈತರ ಬೃಹತ್ ಪ್ರತಿಭಟನೆ

ಬೆಂಗಳೂರು: ಮುಂಗಾರು ಮಳೆಯ ಅಬ್ಬರಕ್ಕೆ ಕೆರೆಯಂತಾದ ರಸ್ತೆಗಳು