- TV9 Kannada Kannada News Photos Cricket Photos Australia beat South Africa by 276 runs and Creates New Record
ಗೆದ್ದಿದ್ದು ಆಸ್ಟ್ರೇಲಿಯಾ, ಸೋತಿದ್ದು ಸೌತ್ ಆಫ್ರಿಕಾ, ದಾಖಲೆ ಮುರಿದದ್ದು ಟೀಮ್ ಇಂಡಿಯಾದು!
Australia vs South Africa: ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 50 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 431 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡ ಕೇವಲ 155 ರನ್ಗಳಿಗೆ ಆಲೌಟ್ ಆಗಿದೆ.
Updated on:Aug 25, 2025 | 8:01 AM

ಸೌತ್ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಅಮೋಘ ಗೆಲುವು ದಾಖಲಿಸಿದೆ. ಈ ಅಮೋಘ ಗೆಲುವಿನೊಂದಿಗೆ ಆಸೀಸ್ ಪಡೆ ಭರ್ಜರಿ ದಾಖಲೆಯೊಂದನ್ನು ನಿರ್ಮಿಸಿದೆ. ಅದು ಸಹ ಟೀಮ್ ಇಂಡಿಯಾ ದಾಖಲೆ ಮುರಿಯುವ ಮೂಲಕ..!

ಮೆಕೆನ ಗ್ರೇಟ್ ಬಾರಿಯರ್ ಗ್ರೀಫ್ ಅರೆನಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ (142), ಮಿಚೆಲ್ ಮಾರ್ಷ್ (100) ಹಾಗೂ ಕ್ಯಾಮರೋನ್ ಗ್ರೀನ್ (118) ಭರ್ಜರಿ ಶತಕ ಸಿಡಿಸಿದರು. ಈ ಶತಕಗಳ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡ 50 ಓವರ್‌ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 431 ರನ್ ಗಳು.

432 ರನ್ ಗಳ ಕಠಿಣ ಗುರಿ ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 24.5 ಓವರ್‌ಗಳಲ್ಲಿ ಕೇವಲ 155 ರನ್ ಗಳಿಗೆ ಆಲೌಟ್ ಆಯಿತು. ಈ ಮೂಲಕ ಆಸ್ಟ್ರೇಲಿಯಾ ತಂಡವು 276 ರನ್ ಗಳ ಪ್ರಚಂಡ ಗೆಲುವು ದಾಖಲಿಸಿದೆ. ಈ ಅಮೋಘ ಗೆಲುವಿನೊಂದಿಗೆ ಏಕದಿನ ಕ್ರಿಕೆಟ್ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಅತ್ಯಂತ ಹೀನಾಯವಾಗಿ ಸೋಲಿಸಿದ ಹೆಗ್ಗಳಿಕೆಯೊಂದನ್ನು ಆಸ್ಟ್ರೇಲಿಯಾ ತಂಡ ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ ಈ ಕೀರ್ತಿಯು ಟೀಮ್ ಇಂಡಿಯಾದ ಹೆಸರಿನಲ್ಲಿತ್ತು.

ಭಾರತ ತಂಡವು 2023 ರಲ್ಲಿ ಕೊಲ್ಕತ್ತಾದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು 243 ರನ್ಗಳ ಅಂತರದಿಂದ ಸೋಲಿಸಿದ್ದರು. ಈ ಮೂಲಕ ಸೌತ್ ಆಫ್ರಿಕಾ ವಿರುದ್ಧ ಅತ್ಯಧಿಕ ರನ್ಗಳ ಅಂತರದಿಂದ ಗೆದ್ದ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿದ್ದರು.

ಇದೀಗ ಸೌತ್ ಆಫ್ರಿಕಾ ತಂಡವನ್ನು ಬರೋಬ್ಬರಿ 276 ರನ್ಗಳ ಅಂತರದಿಂದ ಆಸ್ಟ್ರೇಲಿಯಾ ಬಗ್ಗು ಬಡಿದಿದೆ. ಈ ಮೂಲಕ ಟೀಮ್ ಇಂಡಿಯಾ ಹೆಸರಿನಲ್ಲಿದ್ದ ದಾಖಲೆ ಮುರಿದು, ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಸೌತ್ ಆಫ್ರಿಕಾ ತಂಡವನ್ನು ಅತೀ ಹೆಚ್ಚು ರನ್ಗಳ ಅಂತರದಿಂದ ಸೋಲಿಸಿದ ಕೀರ್ತಿಯನ್ನು ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ.
Published On - 7:57 am, Mon, 25 August 25

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



