ಭಾರತದ ವಿರುದ್ಧದ ಸರಣಿಗೆ ನಾಯಕನೇ ಅಲಭ್ಯ..!

Updated on: Oct 05, 2025 | 1:54 PM

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂ ನಾಡಿನಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಒಟ್ಟು 8 ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ.

1 / 5
ಆಸ್ಟ್ರೇಲಿಯಾ ಏಕದಿನ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins) ಭಾರತದ ವಿರುದ್ಧ ಸರಣಿಯಿಂದ ಹೊರಗುಳಿಯುವುದು ಖಚಿತವಾಗಿದೆ. ಸೊಂಟದ ಮೂಳೆಯ ನೋವಿನಿಂದ ಬಳಲುತ್ತಿರುವ ಕಮಿನ್ಸ್ ಅವರಿಗೆ ವೈದ್ಯರು ಹೆಚ್ಚಿನ ವಿಶ್ರಾಂತಿ ಸೂಚಿಸಿದ್ದಾರೆ. ಇದೇ ಕಾರಣದಿಂದ ಕಮಿನ್ಸ್ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದರು.

2 / 5
ಇದೀಗ ಭಾರತದ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಳಿಗೂ ಅವರು ಅಲಭ್ಯರಾಗಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಿಂದ ಕಮಿನ್ಸ್ ಹೊರಗುಳಿಯುತ್ತಿರುವ ಕಾರಣ ಮಿಚೆಲ್ ಮಾರ್ಷ್ ತಂಡವನ್ನು ಮುನ್ನಡೆಸುವ ಸಾಧ್ಯತೆಯಿದೆ.

3 / 5
ಇನ್ನು ನವೆಂಬರ್ ವೇಳೆಗೆ ಸಂಪೂರ್ಣವಾಗಿ ಗುಣಮುಖರಾದರೆ ಮಾತ್ರ ಪ್ಯಾಟ್ ಕಮಿನ್ಸ್ ಆ್ಯಶಸ್ ಸರಣಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಟೆಸ್ಟ್ ಸರಣಿಯು ನವೆಂಬರ್ 21 ರಿಂದ ಶುರುವಾಗಲಿದೆ.

4 / 5
ಈ ಸರಣಿಯು ಆಸ್ಟ್ರೇಲಿಯಾ ಪಾಲಿಗೆ ಮಹತ್ವದ್ದಾಗಿದ್ದು, ಹೀಗಾಗಿ ಪ್ಯಾಟ್ ಕಮಿನ್ಸ್ ಅವರ ಗಾಯದ ಬಗ್ಗೆ ನಿಗಾವಹಿಸಲು ಕ್ರಿಕೆಟ್ ಆಸ್ಟ್ರೇಲಿಯಾ ವೈದ್ಯರುಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಅದರಂತೆ ಕಮಿನ್ಸ್ ಮುಂದಿನ ಒಂದೆರಡು ತಿಂಗಳುಗಳು ಕಾಲ ಮೈದಾನದಿಂದ ಹೊರಗುಳಿಯುವುದು ಖಚಿತ ಎಂದೇ ಹೇಳಬಹುದು.

5 / 5
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಮೂರು ಏಕದಿನ ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಅಕ್ಟೋಬರ್ 29 ರಿಂದ ಟಿ20 ಸರಣಿ ಆರಂಭವಾಗಲಿದೆ. 