ವಿಶ್ವ ದಾಖಲೆಯ ಚೇಸಿಂಗ್ ಮಾಡಿದ ಆಸ್ಟ್ರೇಲಿಯಾ

Updated on: Oct 13, 2025 | 7:35 AM

India Women vs Australia Women: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 48.5 ಓವರ್​ಗಳಲ್ಲಿ 330 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಆಸ್ಟ್ರೇಲಿಯಾ ತಂಡವು 49 ಓವರ್​ಗಳಲ್ಲಿ ಚೇಸ್ ಮಾಡಿ 3 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಪಡೆ ಹೊಸ ವಿಶ್ವ ದಾಖಲೆಯನ್ನು ಸಹ ನಿರ್ಮಿಸಿದೆ.

1 / 5
ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ (Australia) ತಂಡವು ಐತಿಹಾಸಿಕ ಜಯ ಸಾಧಿಸಿದೆ. ಅದು ಕೂಡ ಬಲಿಷ್ಠ ಭಾರತ ತಂಡ ನೀಡಿದ ಬೃಹತ್ ಮೊತ್ತದ ಗುರಿಯನ್ನು ಬೆನ್ನತ್ತಿ ಗೆಲ್ಲುವ ಮೂಲಕ. ಅಂದರೆ ಮಹಿಳಾ ಏಕದಿನ ಇತಿಹಾಸದಲ್ಲೇ ಗರಿಷ್ಠ ಮೊತ್ತ ಚೇಸ್ ಮಾಡಿ ಗೆದ್ದ ವಿಶ್ವ ದಾಖಲೆ ಇದೀಗ ಆಸ್ಟ್ರೇಲಿಯಾ ತಂಡದ ಪಾಲಾಗಿದೆ.

2 / 5
ವಿಶಾಖಪಟ್ಟಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಈ ಬ್ಯಾಟಿಂಗ್​​ನೊಂದಿಗೆ ಭಾರತೀಯ ವನಿತೆಯರು ಕಲೆಹಾಕಿದ್ದು ಬರೋಬ್ಬರಿ 330 ರನ್​ಗಳು.

3 / 5
331 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಪರ ನಾಯಕಿ ಅಲಿಸ್ಸಾ ಹೀಲಿ (142) ಭರ್ಜರಿ ಶತಕ ಸಿಡಿಸಿದರು. ಈ ಶತಕದ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡವು 49 ಓವರ್​​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 331 ರನ್​ಗಳಿಸಿದೆ. ಈ ಮೂಲಕ ಭಾರತ ತಂಡವನ್ನು 3 ವಿಕೆಟ್​ಗಳಿಂದ ಸೋಲಿಸುವಲ್ಲಿ ಯಶಸ್ವಿಯಾಗಿದೆ.

4 / 5
ಈ ಗೆಲುವಿನೊಂದಿಗೆ ಮಹಿಳಾ ಏಕದಿನ ಇತಿಹಾಸದಲ್ಲೇ ಗರಿಷ್ಠ ಸ್ಕೋರ್ ಬೆನ್ನತ್ತಿ ಗೆದ್ದ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು. ಲಂಕಾ ಪಡೆಯು 2024 ರಲ್ಲಿ ಸೌತ್ ಆಫ್ರಿಕಾ ವಿರುದ್ಧ 302 ರನ್​ಗಳು ಬೆನ್ನತ್ತಿ ಗೆದ್ದಿರುವುದು ಈವರೆಗಿನ ದಾಖಲೆಯಾಗಿತ್ತು.

5 / 5
ಇದೀಗ ಟೀಮ್ ಇಂಡಿಯಾ ನೀಡಿದ 331 ರನ್​ಗಳ ಟಾರ್ಗೆಟ್ ಅನ್ನು ಚೇಸ್ ಮಾಡಿ ಆಸ್ಟ್ರೇಲಿಯಾ ವನಿತೆಯರು ಮಹಿಳಾ ಏಕದಿನ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅಮೋಘ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಮಹಿಳಾ ಏಕದಿನ ವಿಶ್ವಕಪ್​ನ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ.