ಪಿಂಕ್​ ಬಾಲ್​​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಆಸ್ಟ್ರೇಲಿಯಾ

Updated on: Dec 06, 2025 | 10:28 AM

Australia vs England, 2nd Test: ಆ್ಯಶಸ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 334 ರನ್ ಪೇರಿಸಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಆಸ್ಟ್ರೇಲಿಯಾ ತಂಡವು ಎರಡನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 378 ರನ್​ ಕಲೆಹಾಕಿದೆ.

1 / 5
ಬ್ರಿಸ್ಬೇನ್​ನ ಗಬ್ಬಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಪಿಂಕ್ ಬಾಲ್​ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ 378 ರನ್​ ಕಲೆಹಾಕುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಬ್ರಿಸ್ಬೇನ್​ನ ಗಬ್ಬಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಪಿಂಕ್ ಬಾಲ್​ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಅದು ಕೂಡ 378 ರನ್​ ಕಲೆಹಾಕುವ ಮೂಲಕ ಎಂಬುದು ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

2 / 5

ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 334 ರನ್​ಗಳನ್ನು ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ಪರ ಜಾಕ್ ವೆದರಾಲ್ಡ್ (72) ಮಾರ್ನಸ್ ಲಾಬುಶೇನ್ (65) ಸ್ಟೀವ್ ಸ್ಮಿತ್ (61) ಹಾಗೂ ಅಲೆಕ್ಸ್ ಕ್ಯಾರಿ (63) ಅರ್ಧಶತಕ ಬಾರಿಸಿದರು.

3 / 5

ಈ ಅರ್ಧಶತಕಗಳ ನೆರವಿನೊಂದಿಗೆ ಆಸ್ಟ್ರೇಲಿಯಾ ತಂಡವು  ಎರಡನೇ ದಿನದಾಟದ ಅಂತ್ಯದ ವೇಳೆಗೆ ಕಲೆಹಾಕಿದ್ದು ಬರೋಬ್ಬರಿ 378 ರನ್​​ಗಳು. ಈ ಮೂಲಕ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ದಿನದಾಟವೊಂದರಲ್ಲಿ ಅತ್ಯಧಿಕ ರನ್​ಗಳಿಸಿದ ವಿಶ್ವ ದಾಖಲೆ ನಿರ್ಮಿಸಿತು

4 / 5

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ಇಂಗ್ಲೆಂಡ್​ ತಂಡದ ಹೆಸರಿನಲ್ಲಿತ್ತು. 2017 ರಲ್ಲಿ ಎಡ್ಜ್​ಬಾಸ್ಟನ್​ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಿಂಕ್ ಬಾಲ್​ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಇಂಗ್ಲೆಂಡ್​ ಬರೋಬ್ಬರಿ 348 ರನ್​ಗಳಿಸಿ ದಾಖಲೆ ನಿರ್ಮಿಸಿದ್ದರು.

5 / 5

ಇದೀಗ ಆಂಗ್ಲರ ವಿರುದ್ಧವೇ ಅಬ್ಬರಿಸುವ ಮೂಲಕ ಆಸ್ಟ್ರೇಲಿಯಾ ತಂಡ ಒಂದೇ ದಿನದಾಟದಲ್ಲಿ ಬರೋಬ್ಬರಿ 378 ರನ್ ಕಲೆಹಾಕಿದೆ. ಈ ಮೂಲಕ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ದಿನದಾಟವೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ನಿರ್ಮಿಸಿದೆ.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us