ಕೇವಲ 58 ಎಸೆತ… ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯ ಚೇಸಿಂಗ್
T20 World Cup 2026: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 16.2 ಓವರ್ಗಳಲ್ಲಿ 104 ರನ್ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಕೇವಲ 9.4 ಓವರ್ಗಳಲ್ಲಿ ಪಂದ್ಯ ಮುಗಿಸಿದ್ದಾರೆ. ಈ ಮೂಲಕ ಆಸೀಸ್ ಪಡೆ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Updated on: Feb 21, 2026 | 7:48 AM

T20 World Cup 2026: ಟಿ20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ 9.4 ಓವರ್ಗಳಲ್ಲಿ ಪಂದ್ಯ ಮುಗಿಸುವ ಮೂಲಕ. ಹೀಗೆ ಪಂದ್ಯ ಮುಗಿಸಿ ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಬಾಲ್ಗಳನ್ನು ಬಾಕಿಯಿರಿಸಿ 100+ ಸ್ಕೋರ್ ಚೇಸ್ ಮಾಡಿದ ದಾಖಲೆ ಬರೆದಿದೆ.

ಪಲ್ಲೆಕಲೆ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಕೊನೆಯ ಲೀಗ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಒಮಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ 16.2 ಓವರ್ಗಳಲ್ಲಿ 104 ರನ್ಗಳಿಸಿ ಆಲೌಟ್ ಆಯಿತು.

ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 32 ರನ್ ಬಾರಿಸಿ ಔಟಾದರೆ, ಮಿಚೆಲ್ ಮಾರ್ಷ್ 33 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ ಅಜೇಯ 64 ರನ್ ಬಾರಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡ 9.4 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 108 ರನ್ ಬಾರಿಸಿ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 100+ ಸ್ಕೋರ್ ಚೇಸ್ ಮಾಡಿದ ವಿಶ್ವ ದಾಖಲೆಯೊಂದನ್ನು ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ಹೆಸರಿನಲ್ಲಿತ್ತು.

2024ರ ಟಿ20 ವಿಶ್ವಕಪ್ನಲ್ಲಿ ವೆಸ್ಟ್ ಇಂಡೀಸ್ ತಂಡವು ಯುಎಸ್ಎ ವಿರುದ್ಧ 55 ಎಸೆತಗಳನ್ನು ಬಾಕಿಯಿರಿಸಿ 124 ರನ್ಗಳನ್ನು ಚೇಸ್ ಮಾಡಿದ್ದರು. ಈ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಬಾಲ್ಗಳನ್ನು ಬಾಕಿಯಿರಿಸಿ 100+ ರನ್ ಚೇಸ್ ಮಾಡಿದ ತಂಡ ಎನಿಸಿಕೊಂಡಿತ್ತು.

ಇದೀಗ 9.4 ಓವರ್ಗಳಲ್ಲಿ ಪಂದ್ಯ ಮುಗಿಸಿ ಆಸ್ಟ್ರೇಲಿಯಾ ತಂಡ ಬರೋಬ್ಬರಿ 62 ಎಸೆತಗಳನ್ನು ಬಾಕಿಯಿರಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ನಲ್ಲಿ ಅತೀ ಹೆಚ್ಚು ಬಾಲ್ಗಳನ್ನು ಉಳಿಸಿ 100+ ರನ್ ಚೇಸ್ ಮಾಡಿದ ತಂಡವೆಂಬ ವಿಶ್ವ ದಾಖಲೆಯನ್ನು ಆಸೀಸ್ ಪಡೆ ತಮ್ಮದಾಗಿಸಿಕೊಂಡಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



