AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 58 ​ಎಸೆತ… ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯ ಚೇಸಿಂಗ್

T20 World Cup 2026: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ ತಂಡವು 16.2 ಓವರ್​ಗಳಲ್ಲಿ 104 ರನ್​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಕೇವಲ 9.4 ಓವರ್​ಗಳಲ್ಲಿ ಪಂದ್ಯ ಮುಗಿಸಿದ್ದಾರೆ. ಈ ಮೂಲಕ ಆಸೀಸ್ ಪಡೆ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Feb 21, 2026 | 7:48 AM

Share
T20 World Cup 2026: ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ 9.4 ಓವರ್​ಗಳಲ್ಲಿ ಪಂದ್ಯ ಮುಗಿಸುವ ಮೂಲಕ. ಹೀಗೆ ಪಂದ್ಯ ಮುಗಿಸಿ ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಬಾಲ್​ಗಳನ್ನು ಬಾಕಿಯಿರಿಸಿ 100+ ಸ್ಕೋರ್​ ಚೇಸ್ ಮಾಡಿದ ದಾಖಲೆ ಬರೆದಿದೆ.

1 / 6
ಪಲ್ಲೆಕಲೆ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಒಮಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಒಮಾನ್ 16.2 ಓವರ್​ಗಳಲ್ಲಿ 104 ರನ್​ಗಳಿಸಿ ಆಲೌಟ್ ಆಯಿತು.

2 / 6
ಈ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 32 ರನ್ ಬಾರಿಸಿ ಔಟಾದರೆ, ಮಿಚೆಲ್ ಮಾರ್ಷ್ 33 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 64 ರನ್ ಬಾರಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡ 9.4 ಓವರ್​ಗಳಲ್ಲಿ 1 ವಿಕೆಟ್​ ನಷ್ಟಕ್ಕೆ 108 ರನ್​​ ಬಾರಿಸಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

3 / 6
ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 100+ ಸ್ಕೋರ್ ಚೇಸ್ ಮಾಡಿದ ವಿಶ್ವ ದಾಖಲೆಯೊಂದನ್ನು ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ತಂಡದ ಹೆಸರಿನಲ್ಲಿತ್ತು.

4 / 6
2024ರ ಟಿ20 ವಿಶ್ವಕಪ್​ನಲ್ಲಿ ವೆಸ್ಟ್ ಇಂಡೀಸ್ ತಂಡವು ಯುಎಸ್​ಎ ವಿರುದ್ಧ 55 ಎಸೆತಗಳನ್ನು ಬಾಕಿಯಿರಿಸಿ 124 ರನ್​ಗಳನ್ನು ಚೇಸ್ ಮಾಡಿದ್ದರು. ಈ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಬಾಲ್​ಗಳನ್ನು ಬಾಕಿಯಿರಿಸಿ 100+ ರನ್​ ಚೇಸ್ ಮಾಡಿದ ತಂಡ ಎನಿಸಿಕೊಂಡಿತ್ತು.

5 / 6
ಇದೀಗ 9.4 ಓವರ್​ಗಳಲ್ಲಿ ಪಂದ್ಯ ಮುಗಿಸಿ ಆಸ್ಟ್ರೇಲಿಯಾ ತಂಡ ಬರೋಬ್ಬರಿ 62 ಎಸೆತಗಳನ್ನು ಬಾಕಿಯಿರಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾಲ್​ಗಳನ್ನು ಉಳಿಸಿ 100+ ರನ್ ಚೇಸ್ ಮಾಡಿದ ತಂಡವೆಂಬ ವಿಶ್ವ ದಾಖಲೆಯನ್ನು ಆಸೀಸ್ ಪಡೆ ತಮ್ಮದಾಗಿಸಿಕೊಂಡಿದೆ.

6 / 6
Follow Us
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು

‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ

ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ

‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ

ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?

Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ

ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ

ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ

ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ

ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!