AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ವಿಶ್ವ ದಾಖಲೆ ಸರಿಗಟ್ಟಿದ ಆಸ್ಟ್ರೇಲಿಯಾ

WI vs AUS: ಆಸ್ಟ್ರೇಲಿಯಾ ವಿರುದ್ಧ ನಡೆದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವೆಸ್ಟ್ ಇಂಡೀಸ್ ಒಂದೇ ಒಂದು ಮ್ಯಾಚ್ ಗೆದ್ದಿಲ್ಲ. ತವರಿನಲ್ಲಿ ನಡೆದ ಈ ಸರಣಿಯನ್ನು 5-0 ಅಂತರದಿಂದ ಸೋಲುವ ಮೂಲಕ ವಿಂಡೀಸ್ ಪಡೆ ಭಾರೀ ಮುಖಭಂಗ ಅನುಭವಿಸಿದೆ. ಅತ್ತ ಅಮೋಘ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಭರ್ಜರಿ ವಿಶ್ವ ದಾಖಲೆ ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Jul 30, 2025 | 8:31 AM

Share
ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ದಾಖಲೆ ನಿರ್ಮಿಸಿದೆ. ಅದು ಕೂಡ ಟೀಮ್ ಇಂಡಿಯಾದ ವಿಶ್ವ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ. ಅಂದರೆ ಟಿ20 ಇತಿಹಾಸದಲ್ಲಿ 5 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ಭರ್ಜರಿ ದಾಖಲೆಯೊಂದು ಭಾರತ ತಂಡದ ಹೆಸರಿನಲ್ಲಿತ್ತು.

1 / 5
2020 ರಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ತಂಡ 5-0 ಅಂತರದಿಂದ ಗೆದ್ದುಕೊಂಡಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ 5-0 ಅಂತರದಿಂದ ಸರಣಿ ಗೆದ್ದ ವಿಶ್ವದ ಮೊದಲ ತಂಡವೆಂಬ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿತ್ತು. ಇದಾದ ಬಳಿಕ ಯಾವುದೇ ತಂಡಕ್ಕೂ 5 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ಸಾದ್ಯವಾಗಿರಲಿಲ್ಲ.

2 / 5
ಆದರೆ ಈ ಬಾರಿ ಹೊಸ ಇತಿಹಾಸ ಬರೆಯುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಆಸೀಸ್ ಪಡೆ 5-0 ಅಂತರದಿಂದ ಗೆದ್ದುಕೊಂಡಿದ್ದಾರೆ. ಈ ಮೂಲಕ 5 ವರ್ಷಗಳ ಹಿಂದೆ ಭಾರತ ತಂಡ ಬರೆದಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟುವಲ್ಲಿ ಆಸ್ಟ್ರೇಲಿಯಾ ಯಶಸ್ವಿಯಾಗಿದ್ದಾರೆ.

3 / 5
ಅಷ್ಟೇ ಅಲ್ಲದೆ ವೆಸ್ಟ್ ಇಂಡೀಸ್ ತಂಡವನ್ನು ಟಿ20 ಸರಣಿಯಲ್ಲಿ 5-0 ಅಂತರದಿಂದ ಸೋಲಿಸಿದ ವಿಶ್ವದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ಕೂಡ ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ. ಕಳೆದ 20 ವರ್ಷಗಳಲ್ಲಿ ವೆಸ್ಟ್ ಇಂಡೀಸ್ 7 ಬಾರಿ 5 ಪಂದ್ಯಗಳ ಟಿ20 ಸರಣಿ ಆಡಿದೆ. ಈ ವೇಳೆ ಒಮ್ಮೆಯೂ ಐದು ಮ್ಯಾಚ್​ಗಳಲ್ಲೂ ಪರಾಜಯಗೊಂಡಿರಲಿಲ್ಲ.

4 / 5
ಆದರೆ ಬಾರಿ ವಿಂಡೀಸ್ ಪಡೆಯನ್ನು ಮಕಾಡೆ ಮಲಗಿಸಿ ಆಸ್ಟ್ರೇಲಿಯಾ ತಂಡ ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 5-0 ಅಂತರದಿಂದ ಸರಣಿ ಗೆದ್ದ ವಿಶ್ವದ 2ನೇ ತಂಡವೆಂಬ ಹೆಗ್ಗಳಿಕೆಯನ್ನು ಆಸ್ಟ್ರೇಲಿಯಾ ತಂಡ ತನ್ನದಾಗಿಸಿಕೊಂಡಿದೆ. ಈ ದಾಖಲೆಯೊಂದಿಗೆ ಇದೀಗ ಆಸ್ಟ್ರೇಲಿಯಾ ತಂಡ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಸಜ್ಜಾಗುತ್ತಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us