Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಫಾಲೋಆನ್ ಭೀತಿಯಲ್ಲಿ ಟೀಮ್ ಇಂಡಿಯಾ

Australia vs India, 3rd Test: ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 445 ರನ್ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ 180 ರನ್​​ಗಳಿಗೆ 6 ವಿಕೆಟ್ ಕಳೆದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Dec 17, 2024 | 10:34 AM

ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 51.5 ಓವರ್​ಗಳ ಮುಕ್ತಾಯದ ವೇಳೆಗೆ 180 ರನ್​​ಗಳಿಗೆ 6 ವಿಕೆಟ್ ಕಳೆದುಕೊಂಡಿದೆ. ಆಸ್ಟ್ರೇಲಿಯಾ ಕಲೆಹಾಕಿದ 445 ರನ್​ಗಳಿಗೆ ಉತ್ತರವಾಗಿ ಇನಿಂಗ್ಸ್ ಆರಂಭಿಸಿದ ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

1 / 6
ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 4 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ಶುಭ್​ಮನ್ ಗಿಲ್ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ವಿರಾಟ್ ಕೊಹ್ಲಿ ಕೇವಲ 3 ರನ್ ಬಾರಿಸಿ ನಿರ್ಗಮಿಸಿದರು. ರಿಷಭ್ ಪಂತ್ ಇನಿಂಗ್ಸ್ ಕೇವಲ 9 ರನ್​​ಗಳಿಗೆ ಸೀಮಿತವಾಯಿತು. ಇದರ ಬೆನ್ನಲ್ಲೇ ರೋಹಿತ್ ಶರ್ಮಾ (10) ಕೂಡ ಔಟಾದರು.

2 / 6
ಇದಾಗ್ಯೂ ಏಕಾಂಕಿ ಹೋರಾಟ ಮುಂದುವರೆಸಿದ ಕೆಎಲ್ ರಾಹುಲ್ 139 ಎಸೆತಗಳಲ್ಲಿ 84 ರನ್​ಗಳ ಕೊಡುಗೆ ನೀಡಿದರು. ಆದರೆ ಶತಕದತ್ತ ಸಾಗಿದ್ದ ರಾಹುಲ್ ಇನಿಂಗ್ಸ್ ನಾಲ್ಕನೇ ದಿನದಾಟದಲ್ಲಿ ಅಂತ್ಯಗೊಂಡಿತು. ಈ ವೇಳೆ ಕಣಕ್ಕಿಳಿದ ರವೀಂದ್ರ ಜಡೇಜಾ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು.

3 / 6
ಆಸ್ಟ್ರೇಲಿಯಾ ವೇಗಿಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ರವೀಂದ್ರ ಜಡೇಜಾ 82 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದೀಗ ರವೀಂದ್ರ ಜಡೇಜಾ (52) ಹಾಗೂ ನಿತೀಶ್ ರೆಡ್ಡಿ (9) ಬ್ಯಾಟಿಂಗ್ ಮಾಡುತ್ತಿದ್ದು, ಟೀಮ್ ಇಂಡಿಯಾ 51.5 ಓವರ್​​ಗಳ ಮುಕ್ತಾಯದ ವೇಳೆಗೆ 180 ರನ್ ಕಲೆಹಾಕಿದೆ.

4 / 6
ಇತ್ತ ಫಾಲೋಆನ್​ ತಪ್ಪಿಸಲು ಭಾರತ ತಂಡವು ಇನ್ನೂ 66 ರನ್​​ಗಳನ್ನು ಕಲೆಹಾಕಿಬೇಕಿದೆ. ಅಂದರೆ ಟೀಮ್ ಇಂಡಿಯಾ 246 ರನ್​​ಗಳ ಒಳಗೆ ಆಲೌಟ್ ಆದರೆ, ಆಸ್ಟ್ರೇಲಿಯಾ ತಂಡವು ಫಾಲೋಆನ್ ಹೇರಲಿದೆ. ಇದರಿಂದ ಟೀಮ್ ಇಂಡಿಯಾ ಮತ್ತೆ ದ್ವಿತೀಯ ಇನಿಂಗ್ಸ್ ಆರಂಭಿಸಬೇಕಾಗುತ್ತದೆ.

5 / 6
ಅತ್ತ ಕೊನೆಯ ದಿನದಾಟ ಮಾತ್ರ ಇರುವುದರಿಂದ ಟೀಮ್ ಇಂಡಿಯಾಗೆ ಫಾಲೋ ಆನ್​ ತಪ್ಪಿಸಿಕೊಳ್ಳುವುದು ಅನಿವಾರ್ಯ. ಇಲ್ಲದಿದ್ದರೆ ಫಾಲೋಆನ್ ಹೇರಿ ಅಂತಿಮ ದಿನದಾಟದಲ್ಲಿ ಭಾರತ ತಂಡವನ್ನು ಬೇಗನೆ ಆಲೌಟ್ ಮಾಡಿ, ಆಸ್ಟ್ರೇಲಿಯಾ ಇನಿಂಗ್ಸ್ ಅಥವಾ ಕಡಿಮೆ ಮೊತ್ತದ ಗುರಿಯೊಂದಿಗೆ ಜಯ ಸಾಧಿಸಬಹುದು.

6 / 6
Follow us
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ

ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ

ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್

ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!

ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್

ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ