T20 World Cup 2024: ಭಾರತದ ವಿಶ್ವ ದಾಖಲೆ ಮುರಿದ ಆಸ್ಟ್ರೇಲಿಯಾ

T20 World Cup 2024: ಟಿ20 ವಿಶ್ವಕಪ್​ನ 44ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 140 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ 11.2 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿತ್ತು. ಈ ವೇಳೆ ಮಳೆ ಬಂದಿದ್ದರಿಂದ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಭಾರತ ತಂಡವು ವಿಜಯಿ ಎಂದು ಘೋಷಿಸಲಾಗಿದೆ.

ಝಾಹಿರ್ ಯೂಸುಫ್
|

Updated on: Jun 22, 2024 | 8:54 AM

T20 World Cup 2024: ಟಿ20 ವಿಶ್ವಕಪ್​ನ ಸೂಪರ್-8 ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಬಗ್ಗು ಬಡಿದು ಆಸ್ಟ್ರೇಲಿಯಾ ಶುಭಾರಂಭ ಮಾಡಿದೆ. ಈ ಗೆಲುವಿನೊಂದಿಗೆ ಆಸೀಸ್ ಪಡೆ ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ. ಅದು ಸಹ ಟೀಮ್ ಇಂಡಿಯಾದ ವಿಶ್ವ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 5
ಅಂದರೆ ಟಿ20 ವಿಶ್ವಕಪ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಸತತ ಗೆಲುವು ದಾಖಲಿಸಿದ ದಾಖಲೆಯನ್ನು ಆಸ್ಟ್ರೇಲಿಯಾ ತಂಡ ತನ್ನದಾಗಿಸಿಕೊಂಡಿದೆ. 2022 ರಿಂದ ಶುರುವಾದ ಆಸೀಸ್ ಪಡೆಯ ಗೆಲುವಿನ ನಾಗಾಲೋಟ ಈ ಬಾರಿ ಕೂಡ ಮುಂದುವರೆದಿದೆ. ಈ ಮೂಲಕ ಭಾರತ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದೆ.

2 / 5
ಭಾರತ ತಂಡವು 2012-2014 ರ ಟಿ20 ವಿಶ್ವಕಪ್​ನಲ್ಲಿ ಸತತ 7 ಪಂದ್ಯಗಳಲ್ಲಿ ಜಯ ಸಾಧಿಸಿತ್ತು. ಈ ಮೂಲಕ ಎರಡು ವಿಶ್ವಕಪ್​ನಲ್ಲಿ ಸತತ ಏಳು ಗೆಲುವು ದಾಖಲಿಸಿ ಟೀಮ್ ಇಂಡಿಯಾ ವಿಶ್ವ ದಾಖಲೆ ನಿರ್ಮಿಸಿತ್ತು.

3 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. 2022 - 2024 ರ ಟಿ20 ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ಸತತ 8 ಗೆಲುವು ದಾಖಲಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಅತೀ ಹೆಚ್ಚು ಸತತ ಜಯ ಸಾಧಿಸಿದ ತಂಡ ಎನಿಸಿಕೊಂಡಿದೆ.

4 / 5
ಇನ್ನು ಆಸ್ಟ್ರೇಲಿಯಾ ತಂಡದ ಈ ಸತತ ಗೆಲುವುಗಳ ನಾಗಾಲೋಟಕ್ಕೆ ಬ್ರೇಕ್ ಹಾಕಲು ಟೀಮ್ ಇಂಡಿಯಾಗೆ ಉತ್ತಮ ಅವಕಾಶವಿದೆ. ಜೂನ್ 24 ರಂದು ನಡೆಯಲಿರುವ ಸೂಪರ್-8 ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಆಸೀಸ್ ಪಡೆಯ ಸತತ ಗೆಲುವಿನ ಓಟಕ್ಕೆ ಬ್ರೇಕ್ ಬೀಳಲಿದೆ.

5 / 5
Follow us
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!

ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ

ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?

ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ

ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ

ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ

ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ

ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ