T20 World Cup 2024: ಭಾರತದ ವಿಶ್ವ ದಾಖಲೆ ಮುರಿದ ಆಸ್ಟ್ರೇಲಿಯಾ
T20 World Cup 2024: ಟಿ20 ವಿಶ್ವಕಪ್ನ 44ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 140 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ 11.2 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕಿತ್ತು. ಈ ವೇಳೆ ಮಳೆ ಬಂದಿದ್ದರಿಂದ ಡಕ್ವರ್ತ್ ಲೂಯಿಸ್ ನಿಯಮದ ಪ್ರಕಾರ ಭಾರತ ತಂಡವು ವಿಜಯಿ ಎಂದು ಘೋಷಿಸಲಾಗಿದೆ.