AUS vs PAK: ಪಾಕ್ ವಿರುದ್ಧ ಸರಣಿ ಸೋತು ಅವಮಾನಕರ ದಾಖಲೆ ಬರೆದ ಆಸ್ಟ್ರೇಲಿಯಾ

AUS vs PAK: ಪಾಕಿಸ್ತಾನ ತಂಡವು ಆಸ್ಟ್ರೇಲಿಯಾದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಗೆದ್ದು ಐತಿಹಾಸಿಕ ಗೆಲುವು ಸಾಧಿಸಿದೆ. ಮೊಹಮ್ಮದ್ ರಿಜ್ವಾನ್ ನಾಯಕತ್ವದಲ್ಲಿ ಅದ್ಭುತ ಪ್ರದರ್ಶನ ನೀಡಿದ ಪಾಕಿಸ್ತಾನ, ಆಸ್ಟ್ರೇಲಿಯಾ ತಂಡವನ್ನು ಅದರ ತವರು ನೆಲದಲ್ಲಿಯೇ ಸೋಲಿಸಿದೆ. ಇತ್ತ ಆಸ್ಟ್ರೇಲಿಯಾ ಈ ಸರಣಿ ಸೋಲಿನೊಂದಿಗೆ ಅನೇಕ ಅವಮಾನಕರ ದಾಖಲೆಗಳಿಗೆ ಕೊರಳ್ಳೊಡಿದೆ.

ಪೃಥ್ವಿಶಂಕರ
|

Updated on: Nov 10, 2024 | 5:22 PM

ಆಸ್ಟ್ರೇಲಿಯಾ ನೆಲದಲ್ಲಿ ಪಾಕಿಸ್ತಾನ ಇತಿಹಾಸ ಸೃಷ್ಟಿಸಿದೆ. ಮೊಹಮ್ಮದ್ ರಿಜ್ವಾನ್ ನಾಯಕತ್ವದಲ್ಲಿ ಪಾಕಿಸ್ತಾನ ಅದ್ಭುತ ಪ್ರದರ್ಶನ ನೀಡಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಲ್ಲಿ ಗೆದ್ದುಕೊಂಡಿದೆ. ಇತ್ತ ತವರು ನೆಲದಲ್ಲಿ ಏಕದಿನ ಸರಣಿ ಸೋತಿರುವ ಆಸ್ಟ್ರೇಲಿಯಾ ತಂಡ ಹಲವು ಅವಮಾನಕರ ದಾಖಲೆಗೆ ಕೊರಳ್ಳೊಡಿದೆ.

1 / 5
ಆಸ್ಟ್ರೇಲಿಯಾದ ಏಕದಿನ ಕ್ರಿಕೆಟ್‌ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತಂಡದ ಯಾವುದೇ ಬ್ಯಾಟ್ಸ್‌ಮನ್‌ಗಳು ಈ ಸರಣಿಯಲ್ಲಿ 50 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. ಪಾಕಿಸ್ತಾನ ವಿರುದ್ಧದ ಈ ಮೂರು ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯದ ಯಾವೊಬ್ಬ ಬ್ಯಾಟ್ಸ್‌ಮನ್ ಕೂಡ ಅರ್ಧಶತಕ ಬಾರಿಸಲಿಲ್ಲ. ಆಸೀಸ್ ಪರ ಜೋಶ್ ಇಂಗ್ಲಿಸ್ ಮಾತ್ರ ಗರಿಷ್ಠ 49 ರನ್‌ಗಳ ಇನ್ನಿಂಗ್ಸ್‌ ಆಡಿದರು.

2 / 5
ಇದಲ್ಲದೆ ಮೂರನೇ ಏಕದಿನ ಪಂದ್ಯದಲ್ಲಿ ಕೇವಲ 140 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಆಸೀಸ್ ಪಡೆ, ಪಾಕಿಸ್ತಾನ ವಿರುದ್ಧ ಏಕದಿನ ಸರಣಿಯಲ್ಲಿ ಇದೇ ಮೊದಲ ಬಾರಿಗೆ ಅತ್ಯಂತ ಕಡಿಮೆ ಸ್ಕೋರ್ ದಾಖಲಿಸಿದ ಬೇಡದ ದಾಖಲೆಗೆ ಕೊರಳ್ಳೊಡಿದೆ. ಅಷ್ಟೇ ಅಲ್ಲ, ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ತಂಡ 163 ರನ್‌ಗಳಿಗೆ ಆಲೌಟ್ ಆಗಿದ್ದು, ಪಾಕಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾದ ಎರಡನೇ ಅತಿ ಕಡಿಮೆ ಸ್ಕೋರ್ ಇದಾಗಿದೆ.

3 / 5
ಇನ್ನು ಪಾಕಿಸ್ತಾನ ವಿರುದ್ಧದ ಈ ಸರಣಿಯಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್‌ಗಳ ಬ್ಯಾಟಿಂಗ್ ಸರಾಸರಿ 18.77 ಆಗಿತ್ತು. ಇದು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಪಾಕಿಸ್ತಾನದ ವಿರುದ್ಧದ ಏಕದಿನ ಸರಣಿಯಲ್ಲಿ ಆಸೀಸ್ ತಂಡದ ಅತ್ಯಂತ ಕಡಿಮೆ ಸರಾಸರಿಯಾಗಿದೆ. ಇದಕ್ಕೂ ಮುನ್ನ 2002ರಲ್ಲಿ ಪಾಕಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ 22.12 ರ ಸರಾಸರಿಯಲ್ಲಿ ರನ್ ಗಳಿಸಿತ್ತು.

4 / 5
ಇದರ ಜೊತೆಗೆ ಆಸ್ಟ್ರೇಲಿಯಾ ವಿರುದ್ಧದ ಈ ಸರಣಿಯಲ್ಲಿ ಪಾಕಿಸ್ತಾನದ ಬೌಲರ್‌ಗಳು ಪರಾಕ್ರಮ ಮೆರೆದರು. ಈ ಸರಣಿಯಲ್ಲಿ ಪಾಕ್ ವೇಗಿಗಳು ಒಟ್ಟು 26 ವಿಕೆಟ್‌ಗಳನ್ನು ಕಬಳಿಸಿದರು. ಈ ಮೂಲಕ ಮೂರು ಅಥವಾ ಅದಕ್ಕಿಂತ ಕಡಿಮೆ ಪಂದ್ಯಗಳ ಏಕದಿನ ಸರಣಿಯಲ್ಲಿ ವೇಗದ ಬೌಲರ್‌ಗಳ ಎರಡನೇ ಅತ್ಯುತ್ತಮ ಪ್ರದರ್ಶನ ಇದಾಗಿದೆ. ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ಹೆಸರು ಅಗ್ರಸ್ಥಾನದಲ್ಲಿದ್ದ್ದು, 2007 ರಲ್ಲಿ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ವೇಗದ ಬೌಲರ್‌ಗಳು 27 ವಿಕೆಟ್‌ಗಳನ್ನು ಪಡೆದಿದ್ದರು.

5 / 5
Follow us
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ

Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ

Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್