ವಿದಾಯ ಪಂದ್ಯವಿಲ್ಲದ ಅಶ್ವಿನ್ಗೆ ಓಡಿ ಬಂದು ವಿಶೇಷ ಗಿಫ್ಟ್ ನೀಡಿದ ಆಸ್ಟ್ರೇಲಿಯಾ ಆಟಗಾರರು
R Ashwin: ಭಾರತ ತಂಡದ ಪರ 379 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ರವಿಚಂದ್ರನ್ ಅಶ್ವಿನ್ ಒಟ್ಟು 5833.3 ಓವರ್ಗಳನ್ನು ಎಸೆದಿದ್ದಾರೆ. ಈ ವೇಳೆ 35001 ಎಸೆತಗಳಲ್ಲಿ 19743 ರನ್ ನೀಡಿರುವ ಅವರು ಒಟ್ಟು 765 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಕಬಳಿಸಿದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.
1 / 5
ಭಾರತ ಕಂಡಂತಹ ಶ್ರೇಷ್ಠ ಸ್ಪಿನ್ನರ್ಗಳಲ್ಲಿ ಒಬ್ಬರೆನಿಸಿಕೊಂಡಿರುವ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಬುಧವಾರ (ಡಿ.18) ಮುಕ್ತಾಯಗೊಂಡ ಗಾಬಾ ಟೆಸ್ಟ್ ಪಂದ್ಯದ ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಜೊತೆ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿದರು.
2 / 5
ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಸೇರಿದಂತೆ ಬಹುತೇಕ ಆಟಗಾರರಿಗೆ ರವಿಚಂದ್ರನ್ ಅಶ್ವಿನ್ ಅವರ ನಿವೃತ್ತಿ ವಿಚಾರ ಗೊತ್ತೇ ಇರಲಿಲ್ಲ. ಇತ್ತ ಅಶ್ವಿನ್ ಅವರ ಈ ನಿರ್ಧಾರ ಆಸ್ಟ್ರೇಲಿಯಾ ಆಟಗಾರರಿಗೂ ಸರ್ಪ್ರೈಸ್ ಆಗಿತ್ತು. ಇದಾಗ್ಯೂ ವಿದಾಯ ಪಂದ್ಯವಿಲ್ಲದ ಟೀಮ್ ಇಂಡಿಯಾ ಆಟಗಾರನಿಗೆ ವಿಶೇಷ ಉಡುಗೊರೆ ನೀಡಲು ಆಸ್ಟ್ರೇಲಿಯನ್ನರು ಮರೆಯಲಿಲ್ಲ.
3 / 5
ರವಿಚಂದ್ರನ್ ಅಶ್ವಿನ್ ಸುದ್ದಿಗೋಷ್ಠಿ ಮುಗಿಸಿ ಹೊರಬರುತ್ತಿದ್ದಂತೆ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ನಾಥನ್ ಲಿಯಾನ್ ಓಡಿ ಬಂದಿದ್ದರು. ಅಷ್ಟೇ ಅಲ್ಲದೆ ಅಶ್ವಿನ್ ಅವರಿಗೆ ಆಸ್ಟ್ರೇಲಿಯಾ ಆಟಗಾರರ ಸಹಿ ಹೊಂದಿರುವ ಜೆರ್ಸಿಯನ್ನು ನೆನಪಿನ ಕಾಣಿಕೆಯಾಗಿ ನೀಡಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಆಟಗಾರನಿಗೆ ಗೌರವಾಯುತವಾಗಿ ಬೀಳ್ಕೊಡುಗೆ ನೀಡಿದ್ದಾರೆ.
4 / 5
ಇದೀಗ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ನಾಥನ್ ಲಿಯಾನ್ ಅವರ ನಡೆಗೆ ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಅಲ್ಲದೆ ಕೊನೆಯ ಪಂದ್ಯದಲ್ಲಿ ಕಣಕ್ಕಿಳಿಯದ ಆಟಗಾರನನ್ನು ಆಸ್ಟ್ರೇಲಿಯಾ ಕ್ರಿಕೆಟಿಗರು ಗೌರವಾಯುತವಾಗಿ ನಡೆಸಿಕೊಂಡ ಪರಿಯನ್ನು ಅನೇಕರು ಪ್ರಶಂಸಿದ್ದಾರೆ.
5 / 5
ಟೀಮ್ ಇಂಡಿಯಾ ಪರ 106 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ ಒಟ್ಟು 200 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 27246 ಎಸೆತಗಳನ್ನು ಎಸೆದಿರುವ ಅವರು 537 ವಿಕೆಟ್ ಕಬಳಿಸಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿರುವ ಅಶ್ವಿನ್ ಮುಂಬರುವ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ.