Australia: 1000 ಪಂದ್ಯಗಳು: ಹೊಸ ಇತಿಹಾಸ ಬರೆದ ಆಸ್ಟ್ರೇಲಿಯಾ
ODI Records: ಏಕದಿನ ಕ್ರಿಕೆಟ್ನಲ್ಲಿ 1000 ಪಂದ್ಯಗಳನ್ನಾಡಿದ ದಾಖಲೆ ಪಟ್ಟಿಗೆ ಆಸ್ಟ್ರೇಲಿಯಾ ತಂಡ ಕೂಡ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಭಾರತ ತಂಡ ಮಾತ್ರ ಈ ಸಾಧನೆ ಮಾಡಿತ್ತು. ಇದೀಗ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಆಸ್ಟ್ರೇಲಿಯಾ ಕೂಡ 1000ನೇ ಪಂದ್ಯವನ್ನಾಡಿದೆ. ಇನ್ನು ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಪಾಕಿಸ್ತಾನ್ ತಂಡವಿದೆ.
Updated on:Feb 06, 2024 | 3:27 PM

ಕ್ಯಾನ್ಬೆರಾದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಆಸ್ಟ್ರೇಲಿಯಾ ತಂಡವು ಐತಿಹಾಸಿಕ ಸಾಧನೆ ಮಾಡಿದೆ. ಅದು ಕೂಡ 1000 ಏಕದಿನ ಪಂದ್ಯಗಳನ್ನಾಡುವ ಮೂಲಕ ಎಂಬುದು ವಿಶೇಷ.

ಅಂದರೆ ಏಕದಿನ ಇತಿಹಾಸದಲ್ಲೇ ಸಾವಿರ ಪಂದ್ಯಗಳನ್ನಾಡಿದ 2ನೇ ತಂಡ ಎಂಬ ಹೆಗ್ಗಳಿಕೆಗೆ ಆಸ್ಟ್ರೇಲಿಯಾ ತಂಡ ಪಾತ್ರವಾಗಿದೆ. ಇದಕ್ಕೂ ಮುನ್ನ ಈ ಸಾಧನೆ ಮಾಡಿದ್ದು ಟೀಮ್ ಇಂಡಿಯಾ ಎಂಬುದು ವಿಶೇಷ.

2022 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡವು ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 1000 ಪಂದ್ಯಗಳನ್ನಾಡಿದ ಮೊದಲ ತಂಡ ಎನಿಸಿಕೊಂಡಿತು. ಇದೀಗ ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ದ್ವಿತೀಯ ಸ್ಥಾನ ಅಲಂಕರಿಸಿದೆ.

ವಿಶೇಷ ಎಂದರೆ ಭಾರತ (1055 ಪಂದ್ಯಗಳು) ಮತ್ತು ಆಸ್ಟ್ರೇಲಿಯಾ (1000 ಪಂದ್ಯಗಳು) ತಂಡಗಳನ್ನು ಹೊರತುಪಡಿಸಿ ಬೇರೆ ಯಾವುದೇ ಟೀಮ್ ಏಕದಿನ ಕ್ರಿಕೆಟ್ನಲ್ಲಿ ಸಾವಿರ ಪಂದ್ಯಗಳನ್ನಾಡಿಲ್ಲ.

ಈ ಪಟ್ಟಿಯಲ್ಲಿ ಪಾಕಿಸ್ತಾನ್ ತಂಡವು ಮೂರನೇ ಸ್ಥಾನದಲ್ಲಿದೆ. ಪಾಕ್ ತಂಡ ಇದುವರೆಗೆ 970 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದೆ. ಹಾಗೆಯೇ ನಾಲ್ಕನೇ ಸ್ಥಾನದಲ್ಲಿ ಶ್ರೀಲಂಕಾ ಇದ್ದು, ಲಂಕಾ ತಂಡ ಈವರೆಗೆ 912 ಒಡಿಐ ಪಂದ್ಯಗಳನ್ನಾಡಿದೆ.

ಐತಿಹಾಸಿಕ ಜಯ: ವೆಸ್ಟ್ ಇಂಡೀಸ್ ವಿರುದ್ಧ ಸಾವಿರನೇ ಪಂದ್ಯವಾಡಿದ ಆಸ್ಟ್ರೇಲಿಯಾ ತಂಡ ಅಮೋಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 24.1 ಓವರ್ಗಳಲ್ಲಿ 86 ರನ್ಗಳಿಸಿ ಆಲೌಟ್ ಆಗಿತ್ತು. 87 ರನ್ಗಳ ಸುಲಭ ಗುರಿ ಪಡೆದ ಆಸ್ಟ್ರೇಲಿಯಾ ತಂಡವು 6.5 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Published On - 3:24 pm, Tue, 6 February 24
