- TV9 Kannada Photo gallery Cricket photos Australia Record: Most consecutive T20I wins against Pakistan
ಪಾಕಿಸ್ತಾನ್ ವಿರುದ್ಧ ಆಸ್ಟ್ರೇಲಿಯಾಗೆ ದಾಖಲೆ ವಿಜಯ
Australia vs Pakistan: ಹೋಬಾರ್ಟ್ನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ್ 117 ರನ್ಗಳಿಸಿ ಆಲೌಟ್ ಆದರೆ, ಆಸ್ಟ್ರೇಲಿಯಾ ತಂಡವು 11.2 ಓವರ್ಗಳಲ್ಲಿ 118 ರನ್ ಬಾರಿಸಿ ಅಮೋಘ ಗೆಲುವು ದಾಖಲಿಸಿದೆ.
Updated on: Nov 19, 2024 | 8:37 AM

ಪಾಕಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ 3-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿ ಗೆಲುವಿನೊಂದಿಗೆ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಪಾಕ್ ವಿರುದ್ಧ ಸತತ ಗೆಲುವು ದಾಖಲಿಸಿದ ವಿಶೇಷ ದಾಖಲೆಯೊಂದು ಆಸ್ಟ್ರೇಲಿಯಾ ಪಾಲಾಗಿದೆ.

ಅಂದರೆ 2019 ರಿಂದ ಆಸ್ಟ್ರೇಲಿಯಾ ತಂಡವು ಪಾಕಿಸ್ತಾನ್ ವಿರುದ್ಧ ಒಂದೇ ಒಂದು ಟಿ20 ಪಂದ್ಯವನ್ನು ಸೋತಿಲ್ಲ. ಈ ಮೂಲಕ ಪಾಕ್ ವಿರುದ್ಧ ಸತತವಾಗಿ ಅತ್ಯಧಿಕ ಗೆಲುವು ದಾಖಲಿಸಿದ ತಂಡವೆಂಬ ರೆಕಾರ್ಡ್ ಅನ್ನು ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ.

ಇದಕ್ಕೂ ಮುನ್ನ ಈ ದಾಖಲೆ ನ್ಯೂಝಿಲೆಂಡ್ ತಂಡದ ಹೆಸರಿನಲ್ಲಿತ್ತು. ಕಿವೀಸ್ ಪಡೆ 2023 ರಿಂದ 2024 ರವರೆಗೆ ಪಾಕಿಸ್ತಾನ್ ವಿರುದ್ಧದ ಸತತ 6 ಟಿ20 ಪಂದ್ಯಗಳನ್ನು ಗೆದ್ದುಕೊಂಡಿದ್ದರು. ಇದೀಗ ಈ ದಾಖಲೆ ಮುರಿಯುವಲ್ಲಿ ಆಸ್ಟ್ರೇಲಿಯಾ ಯಶಸ್ವಿಯಾಗಿದೆ.

ಪಾಕ್ ವಿರುದ್ಧ 2019 ರಿಂದ ಶುರುವಾದ ಆಸ್ಟ್ರೇಲಿಯಾ ತಂಡದ ಗೆಲುವಿನ ನಾಗಾಲೋಟ ಇದೀಗ 7 ಪಂದ್ಯಕ್ಕೆ ಬಂದು ನಿಂತಿದೆ. ಇದರೊಂದಿಗೆ ಪಾಕಿಸ್ತಾನ್ ತಂಡವನ್ನು ಟಿ20 ಕ್ರಿಕೆಟ್ನಲ್ಲಿ ಅತೀ ಹೆಚ್ಚು ಪಂದ್ಯಗಳಲ್ಲಿ ಸತತವಾಗಿ ಸೋಲಿಸಿದ ಕೀರ್ತಿ ಆಸ್ಟ್ರೇಲಿಯಾ ಪಾಲಾಗಿದೆ.

ಇನ್ನು ಈ ಬಾರಿಯ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 29 ರನ್ಗಳ ಜಯ ಸಾಧಿಸಿತ್ತು. ಎರಡನೇ ಪಂದ್ಯದಲ್ಲಿ 13 ರನ್ಗಳಿಂದ ಪಾಕಿಸ್ತಾನ್ ಸೋಲನುಭವಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ 7 ವಿಕೆಟ್ಗಳ ಗೆಲುವು ದಾಖಲಿಸಿ ಆಸ್ಟ್ರೇಲಿಯಾ 3-0 ಅಂತರದಿಂದ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



