AUS vs SA: ಮಾರ್ಷ್ ಸಿಡಿಲಬ್ಬರಕ್ಕೆ ಟಿ20 ಸರಣಿ ಸೋತ ಸೌತ್ ಆಫ್ರಿಕಾ
AUS vs SA: ಆಸ್ಟ್ರೇಲಿಯಾ ಟಿ20 ತಂಡಕ್ಕೆ ನೂತನ ನಾಯಕನಾಗಿ ಆಯ್ಕೆಯಾಗಿರುವ ಮಿಚ್ ಮಾರ್ಷ್ ಮತ್ತೊಂದು ಅಜೇಯ ಅರ್ಧಶತಕ ಬಾರಿಸುವ ಮೂಲಕ ನಾಯಕತ್ವವಹಿಸಿದ್ದ ಮೊದಲ ಸರಣಿಯಲ್ಲೇ ತಂಡವನ್ನು ಚಾಂಪಿಯನ್ ಮಾಡಿದ್ದಾರೆ. ಶುಕ್ರವಾರ ನಡೆದ ದಕ್ಷಿಣ ಆಫ್ರಿಕಾದ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಎಂಟು ವಿಕೆಟ್‌ಗಳಿಂದ ಗೆದ್ದು ಬೀಗಿದ ಕಾಂಗರೂ ಪಡೆ ಮೂರು ಪಂದ್ಯಗಳ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದಲ್ಲದೆ, ಸರಣಿಯನ್ನು ತನ್ನದಾಗಿಸಿಕೊಂಡಿದೆ.
1 / 7
ಆಸ್ಟ್ರೇಲಿಯಾ ಟಿ20 ತಂಡಕ್ಕೆ ನೂತನ ನಾಯಕನಾಗಿ ಆಯ್ಕೆಯಾಗಿರುವ ಮಿಚ್ ಮಾರ್ಷ್ ಮತ್ತೊಂದು ಅಜೇಯ ಅರ್ಧಶತಕ ಬಾರಿಸುವ ಮೂಲಕ ನಾಯಕತ್ವವಹಿಸಿದ್ದ ಮೊದಲ ಸರಣಿಯಲ್ಲೇ ತಂಡವನ್ನು ಚಾಂಪಿಯನ್ ಮಾಡಿದ್ದಾರೆ.
2 / 7
ಶುಕ್ರವಾರ ನಡೆದ ದಕ್ಷಿಣ ಆಫ್ರಿಕಾದ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಎಂಟು ವಿಕೆಟ್‌ಗಳಿಂದ ಗೆದ್ದು ಬೀಗಿದ ಕಾಂಗರೂ ಪಡೆ ಮೂರು ಪಂದ್ಯಗಳ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದಲ್ಲದೆ, ಸರಣಿಯನ್ನು ತನ್ನದಾಗಿಸಿಕೊಂಡಿದೆ.
3 / 7
ಡರ್ಬನ್‌ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯ ದಕ್ಷಿಣ ಆಫ್ರಿಕಾ ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು ಒಟ್ಟು 164 ರನ್ ಕಲೆಹಾಕಿತು.
4 / 7
ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ ನಾಯಕ ಮಿಚೆಲ್ ಮಾರ್ಷ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಕೇವಲ ಕೇವಲ 14.5 ಓವರ್‌ಗಳಲ್ಲಿ ಗೆಲುವಿನ ದಡ ಸೇರಿತು. ಹಿಂದಿನ ಪಂದ್ಯದಲ್ಲಿಯೂ ಅಜೇಯ 92 ರನ್ ಸಿಡಿಸಿದ್ದ ಮಾರ್ಷ್ ಈ ಪಂದ್ಯದಲ್ಲಿಯೂ ಕೇವಲ 39 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ಆರು ಸಿಕ್ಸರ್‌ಗಳನ್ನು ಒಳಗೊಂಡ ಅಜೇಯ 79 ರನ್ ಸಿಡಿಸಿದರು.
5 / 7
ಮಾರ್ಷ್ಗೆ ಉತ್ತಮ ಸಾಥ್ ನೀಡಿದ ಆರಂಭಿಕ ಆಟಗಾರ ಮ್ಯಾಥ್ಯೂ ಶಾರ್ಟ್ ಎರಡನೇ ವಿಕೆಟ್‌ಗೆ ಕೇವಲ 45 ಎಸೆತಗಳಲ್ಲಿ 100 ರನ್‌ಗಳ ಅದ್ಭುತ ಜೊತೆಯಾಟವನ್ನು ಹಂಚಿಕೊಂಡರು. ಸರಣಿಯ ಮೊದಲ ಪಂದ್ಯದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಶಾರ್ಟ್ 30 ಎಸೆತಗಳಲ್ಲಿ 66 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು.
6 / 7
ಇನ್ನು ಸತತ ಎರಡನೇ ಟಿ20 ಪಂದ್ಯ ಸೋತ ದಕ್ಷಿಣ ಆಫ್ರಿಕಾ ಪರ ಆರಂಭಿಕ ಆಟಗಾರ ತೆಂಬಾ ಬವುಮಾ 17 ಎಸೆತಗಳಲ್ಲಿ 35 ರನ್ ಗಳಿಸಿ ಔಟಾದರೆ, ಆತಿಥೇಯ ನಾಯಕ ಏಡೆನ್ ಮಾರ್ಕ್ರಾಮ್ 38 ಎಸೆತಗಳಲ್ಲಿ 49 ರನ್ ಗಳಿಸಿ ದಕ್ಷಿಣ ಆಫ್ರಿಕಾದ ಇನ್ನಿಂಗ್ಸ್‌ನಲ್ಲಿ ಅಗ್ರ ಸ್ಕೋರರ್ ಎನಿಸಿಕೊಂಡರು.
7 / 7
ಇನ್ನು ಸರಣಿಯ ಅಂತಿಮ ಪಂದ್ಯ ಇದೇ ಭಾನುವಾರದಂದು ಅದೇ ಮೈದಾದನಲ್ಲಿ ನಡೆಯಲ್ಲಿದೆ. ಆ ಬಳಿಕ ಉಭಯ ತಂಡಗಳು ಮುಂದಿನ ತಿಂಗಳು ಭಾರತದಲ್ಲಿ ಪ್ರಾರಂಭವಾಗುವ ವಿಶ್ವಕಪ್‌ಗೆ ಮುನ್ನ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿವೆ.