ಪವರ್​ಪ್ಲೇನಲ್ಲೇ ಶತಕ… ಆಸ್ಟ್ರೇಲಿಯನ್ನರ ಅಬ್ಬರಕ್ಕೆ ಹೊಸ ವಿಶ್ವ ದಾಖಲೆ ನಿರ್ಮಾಣ

|

Updated on: Sep 05, 2024 | 8:30 AM

Scotland vs Australia: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್​ 154 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ ಕೇವಲ 25 ಎಸೆತಗಳಲ್ಲಿ 80 ರನ್ ಬಾರಿಸಿದರು. ಈ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ತಂಡವು 9.4 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ 7 ವಿಕೆಟ್​ಗಳ ಜಯ ಸಾಧಿಸಿದೆ.

1 / 6
ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಸಹ ಮೊದಲ 6 ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕುವ ಮೂಲಕ ಎಂಬುದೇ ವಿಶೇಷ. ಅಂದರೆ ಪವರ್​ಪ್ಲೇನಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವ ದಾಖಲೆ ಇದೀಗ ಆಸ್ಟ್ರೇಲಿಯಾ ತಂಡದ ಪಾಲಾಗಿದೆ.

2 / 6
ಎಡಿನ್‌ಬರ್ಗ್​ನಲ್ಲಿ ನಡೆದ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಈ ವಿಶ್ವ ದಾಖಲೆ ನಿರ್ಮಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸ್ಕಾಟ್ಲೆಂಡ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಟ್ರಾವಿಸ್ ಹೆಡ್ ವಿಸ್ಪೋಟಕ ಆರಂಭ ಒದಗಿಸಿದ್ದರು.

3 / 6
ಮೊದಲ ಓವರ್​ನಲ್ಲೇ ಆಸ್ಟ್ರೇಲಿಯಾ ತಂಡವು ಜೇಕ್ ಫ್ರೇಸರ್ ಮೆಕ್​ಗುರ್ಕ್ ವಿಕೆಟ್ ಕಳೆದುಕೊಂಡಿತು. ಈ ವೇಳೆ ಕಣಕ್ಕಿಳಿದ ಮಿಚೆಲ್ ಮಾರ್ಷ್ ಜೊತೆಗೂಡಿ ಟ್ರಾವಿಸ್ ಹೆಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಸ್ಕಾಟ್ಲೆಂಡ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದ ಈ ಜೋಡಿ ಮೈದಾನದ ಮೂಲೆ ಮೂಲೆಗೂ ಸಿಕ್ಸ್​ಫೋರ್​ಗಳನ್ನು ಸಿಡಿಸಿದರು.

4 / 6
ಅದರಲ್ಲೂ ಜಾಕ್ ಜಾರ್ವಿಸ್ ಎಸೆದ 5ನೇ ಓವರ್​ನಲ್ಲಿ ಮಿಚೆಲ್ ಮಾರ್ಷ್ 6 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 30 ರನ್ ಚಚ್ಚಿದ್ದರು. ಇನ್ನು ಬ್ರಾಡ್ ವೀಲ್ ಎಸೆದ 6ನೇ ಓವರ್​ನಲ್ಲಿ ಟ್ರಾವಿಸ್ ಹೆಡ್ 5 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 26 ರನ್ ಬಾರಿಸಿದರು. ಈ ಮೂಲಕ ಮೊದಲ 6 ಓವರ್​ಗಳಲ್ಲಿ 113 ರನ್​ ಸಿಡಿಸಿ ಹೊಸ ವಿಶ್ವ ದಾಖಲೆ ಬರೆದರು.

5 / 6
ಇದಕ್ಕೂ ಮುನ್ನ ಪವರ್​ಪ್ಲೇನಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ ವಿಶ್ವ ದಾಖಲೆ ಸೌತ್ ಆಫ್ರಿಕಾ ತಂಡದ ಹೆಸರಿನಲ್ಲಿತ್ತು. 2023 ರಲ್ಲಿ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಮೊದಲ 6 ಓವರ್​ಗಳಲ್ಲಿ 102 ರನ್ ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಆಸ್ಟ್ರೇಲಿಯನ್ನರು ಅಳಿಸಿ ಹಾಕಿದ್ದಾರೆ.

6 / 6
ಇನ್ನು ಈ ಪಂದ್ಯದಲ್ಲಿ ಸ್ಕಾಟ್ಲೆಂಡ್ ನೀಡಿದ 155 ರನ್​ಗಳ ಗುರಿಯನ್ನು ಆಸ್ಟ್ರೇಲಿಯಾ ತಂಡವು ಕೇವಲ 9.4 ಓವರ್​ಗಳಲ್ಲಿ ಚೇಸ್ ಮಾಡಿರುವುದು ವಿಶೇಷ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ತಂಡವು 7 ವಿಕೆಟ್​ಗಳಿಂದ ಗೆದ್ದುಕೊಂಡಿದೆ.