- Kannada News Photo gallery Cricket photos Australia squads for the ODI and T20I series against India
ಭಾರತದ ವಿರುದ್ಧದ ಸರಣಿಗೆ 2 ತಂಡಗಳನ್ನು ಪ್ರಕಟಿಸಿದ ಆಸ್ಟ್ರೇಲಿಯಾ
India vs Australia Series: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯು ಅಕ್ಟೋಬರ್ 19 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲು ಮೂರು ಪಂದ್ಯಗಳ ಏಕದಿನ ಸರಣಿ ಆಡಲಾಗುತ್ತದೆ. ಇದಾದ ಬಳಿಕ 5 ಪಂದ್ಯಗಳ ಟಿ20 ಸರಣಿ ಶುರುವಾಗಲಿದೆ. ಇದೀಗ ಈ ಸರಣಿಗಾಗಿ ಉಭಯ ತಂಡಗಳನ್ನು ಘೋಷಿಸಲಾಗಿದೆ.
Updated on: Oct 07, 2025 | 8:54 AM

ಭಾರತದ ವಿರುದ್ಧ ಸರಣಿಗಾಗಿ ಆಸ್ಟ್ರೇಲಿಯಾ ತಂಡಗಳನ್ನು (Australia Squad) ಪ್ರಕಟಿಸಲಾಗಿದೆ. ಈ ಸರಣಿಗೆ ನಾಯಕ ಪ್ಯಾಟ್ ಕಮಿನ್ಸ್ ಅಲಭ್ಯರಾಗಿದ್ದು, ಹೀಗಾಗಿ ಏಕದಿನ ಹಾಗೂ ಟಿ20 ತಂಡಗಳನ್ನು ಆಲ್ರೌಂಡರ್ ಮಿಚೆಲ್ ಮಾರ್ಷ್ ಮುನ್ನಡೆಸಲಿದ್ದಾರೆ. ಇನ್ನು ಈ ಸರಣಿಗಾಗಿ ಆಯ್ಕೆಯಾಗಿರುವ ಆಸ್ಟ್ರೇಲಿಯನ್ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಆಸ್ಟ್ರೇಲಿಯಾ ಏಕದಿನ ತಂಡ: ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ.

ಆಸ್ಟ್ರೇಲಿಯಾ ಟಿ20 ತಂಡ (ಮೊದಲ ಎರಡು ಪಂದ್ಯಗಳಿಗೆ): ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹೇಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.

ಭಾರತ ಏಕದಿನ ತಂಡ : ಶುಭ್ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.
