AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಯಿಂದ ಆಸ್ಟ್ರೇಲಿಯಾ ತಂಡದ 5 ಸ್ಟಾರ್ ಆಟಗಾರರು ಔಟ್

Champions Trophy 2025: ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದ್ದು, ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಆಸ್ಟ್ರೇಲಿಯಾ ತಂಡದ ಐವರು ಸ್ಟಾರ್​ ಅಲಭ್ಯರಾಗಿದ್ದಾರೆ. ಇದೀಗ ಬದಲಿ ಆಟಗಾರರೊಂದಿಗೆ ಕ್ರಿಕೆಟ್ ಆಸ್ಟ್ರೇಲಿಯಾ ಪರಿಷ್ಕೃತ ತಂಡವನ್ನು ಪ್ರಕಟಿಸಿದೆ.

ಝಾಹಿರ್ ಯೂಸುಫ್
|

Updated on: Feb 12, 2025 | 9:59 AM

Share
ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಆಘಾತದ ಮೇಲೆ ಆಘಾತ ಎದುರಾಗಿದೆ. ಈ ಬಾರಿಯ ಟೂರ್ನಿಗೆ ಆಯ್ಕೆ ಮಾಡಲಾಗಿದ್ದ 15 ಸದಸ್ಯರಲ್ಲಿ ಐವರು ಆಟಗಾರರು ಚಾಂಪಿಯನ್ಸ್​ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ತಂಡದಲ್ಲಿ ಐದು ಬದಲಾವಣೆ ಕಂಡು ಬಂದಿದೆ. ಹೀಗೆ ಆಸೀಸ್ ಪಡೆಯಿಂದ ಹೊರಬಿದ್ದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

1 / 8
ಪ್ಯಾಟ್ ಕಮಿನ್ಸ್: ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಪಾದದ ನೋವಿನ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಬಾರಿ ತಂಡವನ್ನು ಸ್ಟೀವ್ ಸ್ಮಿತ್ ಮುನ್ನಡೆಸಲಿದ್ದಾರೆ.

2 / 8
ಜೋಶ್ ಹ್ಯಾಝಲ್​ವುಡ್​: ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ. ಕಣಕಾಲಿನ ಹಿ೦ಭಾಗದ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸಲು ವಿಳಂಬವಾಗಲಿದ್ದು, ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

3 / 8
ಮಿಚೆಲ್ ಮಾರ್ಷ್: ಆಸ್ಟ್ರೇಲಿಯಾ ತಂಡದ ಆಲ್​ರೌಂಡರ್ ಮಿಚೆಲ್ ಮಾರ್ಷ್ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸಹ ಮುಂಬರುವ ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯರಾಗಿದ್ದಾರೆ.

4 / 8
ಮಿಚೆಲ್ ಸ್ಟಾರ್ಕ್​: ಆಸ್ಟ್ರೇಲಿಯಾ ತಂಡದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಹ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಣಕ್ಕಿಳಿಯುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಟೂರ್ನಿಯಿಂದ ಹಿಂದೆ ಸರಿದಿದ್ದು, ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಕ್ರಿಕೆಟ್ ಆಸ್ಟ್ರೇಲಿಯಾ ನಿರಾಕರಿಸಿದೆ.

5 / 8
ಮಾರ್ಕಸ್ ಸ್ಟೊಯಿನಿಸ್: ಆಸೀಸ್ ಪಡೆಯ ಆಲ್​ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಅಚ್ಚರಿ ಎಂಬಂತೆ ಕೆಲ ದಿನಗಳ ಹಿಂದೆ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮಾರ್ಕಸ್ ಸ್ಟೊಯಿನಿಸ್ ಕಾಣಿಸಿಕೊಳ್ಳುವುದಿಲ್ಲ.

6 / 8
ಇದೀಗ ಈ ಐವರ ಸ್ಥಾನಕ್ಕೆ ಬದಲಿಯಾಗಿ ಜೇಕ್ ಫ್ರೇಸರ್ ಮೆಕ್​ಗುರ್ಕ್​, ತನ್ವೀರ್ ಸಂಘ, ಸೆನ್ಸರ್ ಜಾನ್ಸನ್, ಬೆನ್ ದ್ವಾರ್ಶುಯಿಸ್ ಹಾಗು ಶಾನ್ ಅಬಾಟ್ ಆಯ್ಕೆಯಾಗಿದ್ದಾರೆ. ಅದರಂತೆ ಚಾಂಪಿಯನ್ಸ್ ಟ್ರೋಫಿಗಾಗಿ ಪರಿಷ್ಕೃತ ಆಸ್ಟ್ರೇಲಿಯಾ ತಂಡ ಈ ಕೆಳಗಿನಂತಿದೆ...

7 / 8
ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಜೇಕ್ ಫ್ರೇಸರ್ ಮೆಕ್‌ಗುರ್ಕ್, ಆರೋನ್ ಹಾರ್ಡಿ, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ತನ್ವೀರ್ ಸಂಘ, ಮ್ಯಾಥ್ಯೂ ಶಾರ್ಟ್, ಆ್ಯಡಂ ಝಂಪಾ, ಶಾನ್ ಅಬಾಟ್, ಅಲೆಕ್ಸ್ ಕ್ಯಾರಿ , ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್.

8 / 8
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 