IND vs AUS: ಆರಂಭಿಕ ಆಘಾತಕ್ಕೀಡಾಗಿರುವ ಟೀಮ್ ಇಂಡಿಯಾಗೆ ಮಳೆಯೇ ಆಸರೆ..!

Australia vs India, 3rd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಬ್ರಿಸ್ಬೇನ್​ನಲ್ಲಿ ನಡೆಯುತ್ತಿದೆ. ಪರ್ತ್​ನಲ್ಲಿ ನಡೆದ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​​ಗಳ ಜಯ ಸಾಧಿಸಿದೆ. ಇನ್ನು ಅಡಿಲೇಡ್​ನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ಮುನ್ನಡೆ ಸಾಧಿಸಲಿದೆ.

IND vs AUS: ಆರಂಭಿಕ ಆಘಾತಕ್ಕೀಡಾಗಿರುವ ಟೀಮ್ ಇಂಡಿಯಾಗೆ ಮಳೆಯೇ ಆಸರೆ..!
Follow us
ಝಾಹಿರ್ ಯೂಸುಫ್
|

Updated on: Dec 16, 2024 | 1:11 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಅಂತ್ಯವಾಗಿದೆ. ಮಳೆಯೊಂದಿಗಿನ ಕಣ್ಣಾ ಮುಚ್ಚಾಲೆಯೊಂದಿಗೆ ಶುರುವಾದ ಮೂರನೇ ದಿನದಾಟದ ಆರಂಭದಲ್ಲೇ ಆಸ್ಟ್ರೇಲಿಯಾ ತಂಡವು ಮಿಚೆಲ್ ಸ್ಟಾರ್ಕ್ (18), ನಾಥನ್ ಲಿಯಾನ್ (2) ಹಾಗೂ ಅಲೆಕ್ಸ್ ಕ್ಯಾರಿ (70)ಯ ವಿಕೆಟ್ ಕಳೆದುಕೊಂಡಿತು.

ಇದರೊಂದಿಗೆ ಆಸ್ಟ್ರೇಲಿಯಾ ತಂಡದ ಪ್ರಥಮ ಇನಿಂಗ್ಸ್​ 445 ರನ್​​ಗಳಿಗೆ ಕೊನೆಗೊಂಡಿತು. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಮಿಚೆಲ್ ಸ್ಟಾರ್ಕ್ ಮೊದಲ ಓವರ್​ನಲ್ಲೇ ಆಘಾತ ನೀಡಿದ್ದರು.

ಮೊದಲ ಓವರ್​ನ 2ನೇ ಎಸೆತದಲ್ಲಿ ಯಶಸ್ವಿ ಜೈಸ್ವಾಲ್ (4) ವಿಕೆಟ್ ಕಬಳಿಸಿ ಸ್ಟಾರ್ಕ್ ಆಸ್ಟ್ರೇಲಿಯಾಗೆ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಶುಭ್​ಮನ್ ಗಿಲ್ (1) ಕೂಡ ಸ್ಟಾರ್ಕ್ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 3 ರನ್​ಗಳಿಸಿ ಜೋಶ್ ಹ್ಯಾಝಲ್​ವುಡ್ ಎಸೆತದಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದರು. ಆ ಬಳಿಕ ಬಂದ ರಿಷಭ್ ಪಂತ್ 9 ರನ್​​ಗಳಿಸಿ ಬಂದ ವೇಗದಲ್ಲೇ ಹಿಂತಿರುಗಿದರು.

ಇದರ ನಡುವೆ ಹಲವು ಬಾರಿ ಪಂದ್ಯಕ್ಕೆ ಮಳೆಯ ಅಡಚಣೆಯನ್ನುಂಟು ಮಾಡಿತು. ಇದಾಗ್ಯೂ ಉತ್ತಮ ದಾಳಿ ಸಂಘಟಿಸಿದ ಆಸ್ಟ್ರೇಲಿಯಾ ಬೌಲರ್​ಗಳು 17 ಓವರ್​ಗಳಲ್ಲಿ 51 ರನ್​ ನೀಡಿ 4 ವಿಕೆಟ್ ಕಬಳಿಸಿದರು.

18ನೇ ಓವರ್​ ಆರಂಭಕ್ಕೂ ಮುನ್ನ ಮತ್ತೆ ಮಳೆ ಬರಲಾರಂಭಿಸಿದರಿಂದ ಅಂಪೈರ್ ದಿನದಾಟವನ್ನು ಅಂತ್ಯಗೊಳಿಸಲು ನಿರ್ಧರಿಸಿದರು. ಅದರಂತೆ ಮೂರನೇ ದಿನದಾಟದ ಅಂತ್ಯಕ್ಕೆ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 51 ರನ್ ಕಲೆಹಾಕಿದೆ. ಕ್ರೀಸ್​ನಲ್ಲಿ ಕೆಎಲ್ ರಾಹುಲ್ (33) ಹಾಗೂ ರೋಹಿತ್ ಶರ್ಮಾ (0) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಸಂಕ್ಷಿಪ್ತ ಸ್ಕೋರ್ ವಿವರ:

ಆಸ್ಟ್ರೇಲಿಯಾ– 445 (ಪ್ರಥಮ ಇನಿಂಗ್ಸ್)

ಟ್ರಾವಿಸ್ ಹೆಡ್ (152), ಸ್ಟೀವ್ ಸ್ಮಿತ್ (101), ಅಲೆಕ್ಸ್ ಕ್ಯಾರಿ (70).

ಭಾರತ– 51/4 (17)

ಕೆಎಲ್ ರಾಹುಲ್ (33*), ರಿಷಭ್ ಪಂತ್ (9).

ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: ಪಾಕಿಸ್ತಾನ್ ಪರ ಕಣಕ್ಕಿಳಿದ ಇಬ್ಬರು ಹಿಂದೂ ಕ್ರಿಕೆಟಿಗರು ಯಾರು ಗೊತ್ತಾ?

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖ್ವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

ಅಧಿಕಾರದಲ್ಲಿರೋದು ಮುಸ್ಲಿಂ ಓಲೈಕೆಯ ಹಿಂದೂ ವಿರೋಧಿ ಸರ್ಕಾರ: ಯತ್ನಾಳ್
ಅಧಿಕಾರದಲ್ಲಿರೋದು ಮುಸ್ಲಿಂ ಓಲೈಕೆಯ ಹಿಂದೂ ವಿರೋಧಿ ಸರ್ಕಾರ: ಯತ್ನಾಳ್
150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ವಿಜಯೇಂದ್ರ ಆಗ್ರಹ
150 ಕೋಟಿ ಆಮಿಷ ಆರೋಪವನ್ನು ಸಿಬಿಐಗೆ ವಹಿಸಲಿ: ವಿಜಯೇಂದ್ರ ಆಗ್ರಹ
ಚೌಲಗೆರೆ ಬಳಿ ಹೊಸ ಟೋಲ್​ಗೆ ತೀವ್ರ ವಿರೋಧ, ಹೆದ್ದಾರಿ ತಡೆದು ಪ್ರತಿಭಟನೆ
ಚೌಲಗೆರೆ ಬಳಿ ಹೊಸ ಟೋಲ್​ಗೆ ತೀವ್ರ ವಿರೋಧ, ಹೆದ್ದಾರಿ ತಡೆದು ಪ್ರತಿಭಟನೆ
ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ: ಆರ್ ಅಶೋಕ
ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ: ಆರ್ ಅಶೋಕ
Assembly Session: ಚರ್ಚೆಯಾಗುತ್ತಿವೆ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು
Assembly Session: ಚರ್ಚೆಯಾಗುತ್ತಿವೆ ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳು
ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರ್ಪಡಿಸದ ಸಿಎಂ ಮತ್ತು ಡಿಸಿಎಂ
ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರ್ಪಡಿಸದ ಸಿಎಂ ಮತ್ತು ಡಿಸಿಎಂ
ಮಾಯೋಟ್​ನಲ್ಲಿ ಚಿಡೋ ಚಂಡಮಾರುತದ ಅಬ್ಬರ, ಸಾವಿರಕ್ಕೂ ಅಧಿಕ ಮಂದಿ ಸಾವು
ಮಾಯೋಟ್​ನಲ್ಲಿ ಚಿಡೋ ಚಂಡಮಾರುತದ ಅಬ್ಬರ, ಸಾವಿರಕ್ಕೂ ಅಧಿಕ ಮಂದಿ ಸಾವು
Video: ಪೊಲೀಸ್​ ವಾಹನ ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ವ್ಯಕ್ತಿ
Video: ಪೊಲೀಸ್​ ವಾಹನ ಡಿಕ್ಕಿ ರಭಸಕ್ಕೆ ಗಾಳಿಯಲ್ಲಿ ಹಾರಿ ಬಿದ್ದ ವ್ಯಕ್ತಿ
ಬೆಂಗಳೂರು: ಇಡೀ ಮೊಬೈಲ್​ ಅಂಗಡಿಯನ್ನೇ ದೋಚಿದ ಖದೀಮರು! ವಿಡಿಯೋ ನೋಡಿ
ಬೆಂಗಳೂರು: ಇಡೀ ಮೊಬೈಲ್​ ಅಂಗಡಿಯನ್ನೇ ದೋಚಿದ ಖದೀಮರು! ವಿಡಿಯೋ ನೋಡಿ
ಪಾಸಿಟಿವಿಟಿ ಬಿಟ್ಟು ವೈಲೆಂಟ್ ಆದ ಗೌತಮಿ ಜಾಧವ್; ರಜತ್​ಗೆ ಕೊಟ್ಟರು ಠಕ್ಕರ್
ಪಾಸಿಟಿವಿಟಿ ಬಿಟ್ಟು ವೈಲೆಂಟ್ ಆದ ಗೌತಮಿ ಜಾಧವ್; ರಜತ್​ಗೆ ಕೊಟ್ಟರು ಠಕ್ಕರ್