IND vs AUS: 38 ಓವರ್​ಗಳಲ್ಲಿ ಟೀಮ್ ಇಂಡಿಯಾಗೆ ಕಠಿಣ ಗುರಿ

|

Updated on: Dec 30, 2024 | 9:50 AM

Australia vs India Test: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 295 ರನ್​ಗಳಿಂದ ಜಯ ಸಾಧಿಸಿದರೆ, ದ್ವಿತೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ 10 ವಿಕೆಟ್​​ಗಳ ಗೆಲುವು ದಾಖಲಿಸಿತು. ಇನ್ನು ಮೂರನೇ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡಿದೆ. ಇದೀಗ ಉಭಯ ತಂಡಗಳು ನಾಲ್ಕನೇ ಪಂದ್ಯವನ್ನು ಗೆಲ್ಲುವ ಶತಪ್ರಯತ್ನದಲ್ಲಿದೆ.

1 / 6
ಮೆಲ್ಬೋರ್ನ್​ನ ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಇನ್ನೂ 222 ರನ್​ಗಳನ್ನು ಕಲೆಹಾಕಬೇಕಿದೆ. ದ್ವಿತೀಯ ಇನಿಂಗ್ಸ್​ನಲ್ಲಿ 340 ರನ್​​ಗಳ ಗುರಿ ಪಡೆದಿರುವ ಟೀಮ್ ಇಂಡಿಯಾ ಟೀ ವಿರಾಮದ ವೇಳೆಗೆ 3 ವಿಕೆಟ್ ಕಳೆದುಕೊಂಡು 112 ರನ್ ಕಲೆಹಾಕಿದೆ.

2 / 6
ಇನ್ನು ಕೊನೆಯ ದಿನದಾಟದಲ್ಲಿ 38 ಓವರ್​​ಗಳು ಬಾಕಿಯಿದ್ದು, ಅದರೊಳಗೆ ಟೀಮ್ ಇಂಡಿಯಾ 228 ರನ್​ಗಳನ್ನು ಕಲೆಹಾಕಿದರೆ 4ನೇ ಟೆಸ್ಟ್ ಪಂದ್ಯವನ್ನು ಗೆಲ್ಲಬಹುದು. ಅಂದರೆ ಈ ಪಂದ್ಯವನ್ನು ಗೆಲ್ಲಬೇಕಿದ್ದರೆ ಟೀಮ್ ಇಂಡಿಯಾ ಬ್ಯಾಟರ್​ಗಳು ಇನ್ನು ಪ್ರತಿ ಓವರ್​ಗೆ 6 ರ ಸರಾಸರಿಯಲ್ಲಿ ರನ್​ಗಳಿಸಬೇಕು.

3 / 6
ಸದ್ಯ ಕ್ರೀಸ್​ನಲ್ಲಿ ಅರ್ಧಶತಕ ಬಾರಿಸಿರುವ ಯಶಸ್ವಿ ಜೈಸ್ವಾಲ್ (63) ಹಾಗೂ ರಿಷಭ್ ಪಂತ್ (28) ಬ್ಯಾಟಿಂಗ್ ಮಾಡುತ್ತಿದ್ದು, ಈ ಇಬ್ಬರು ಚಹಾ ವಿರಾಮದ ಬಳಿಕ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದರೆ ಪಂದ್ಯವನ್ನು ಗೆಲ್ಲುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಇನ್ನು ಗೆಲ್ಲಲು ಸಾಧ್ಯವಾಗದಿದ್ದರೆ ಭಾರತ ತಂಡವು ಪಂದ್ಯವನ್ನು ಡ್ರಾ ಮಾಡಿಕೊಡಿಕೊಳ್ಳಲು ಪ್ರಯತ್ನಿಸಲಿದೆ.

4 / 6
ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ (140) ಅವರ ಭರ್ಜರಿ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿತು.

5 / 6
ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ವಾಷಿಂಗ್ಟನ್ ಸುಂದರ್ (50) ಅರ್ಧಶತಕ ಬಾರಿಸಿದರೆ, ಯುವ ದಾಂಡಿಗ ನಿತೀಶ್ ಕುಮಾರ್ ರೆಡ್ಡಿ (114) ಭರ್ಜರಿ ಶತಕ ಸಿಡಿಸಿದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​​ನಲ್ಲಿ 369 ರನ್ ಕಲೆಹಾಕಿತು.

6 / 6
ಮೊದಲ ಇನಿಂಗ್ಸ್​ನಲ್ಲಿನ 105 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 234 ರನ್​ಗಳಿಗೆ ಆಲೌಟ್ ಆಗಿದೆ. ಇದೀಗ ಮೊದಲ ಇನಿಂಗ್ಸ್​ ಹಿನ್ನಡೆಯೊಂದಿಗೆ ಟೀಮ್ ಇಂಡಿಯಾ ಕೊನೆಯ ದಿನದಾಟದಲ್ಲಿ 340 ರನ್​ಗಳ ಗುರಿ ಪಡೆದಿದ್ದು, ಈ ಗುರಿ ಬೆನ್ನತ್ತಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ.

Published On - 9:46 am, Mon, 30 December 24