- Kannada News Photo gallery Cricket photos Australia walk into an ODI series without Steve Smith and Glenn Maxwell
ಏಕದಿನ ಕ್ರಿಕೆಟ್ನಲ್ಲಿ ಗ್ಲೆನ್ ಮ್ಯಾಕ್ಸ್ವೆಲ್, ಸ್ಟೀವ್ ಸ್ಮಿತ್ ಯುಗಾಂತ್ಯ
Steve Smith and Glenn Maxwell: ಏಕದಿನ ಕ್ರಿಕೆಟ್ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಯುಗಾಂತ್ಯವಾಗಿದೆ. ಇಬ್ಬರು ಆಟಗಾರರು ಈಗಾಗಲೇ ನಿವೃತ್ತಿ ಘೋಷಿಸಿದ್ದು, ಅದರಂತೆ ಇದೀಗ ಪ್ರಮುಖ ಆಟಗಾರರಿಬ್ಬರು ಇಲ್ಲದೆ ಆಸ್ಟ್ರೇಲಿಯಾ ತಂಡ ಸೌತ್ ಆಫ್ರಿಕಾ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ಕೈರ್ನ್ಸ್ನ ಕಝೆಲಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
Updated on: Aug 19, 2025 | 10:31 AM

ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ನಡುವಣ ಏಕದಿನ ಸರಣಿ ಇಂದಿನಿಂದ (ಆಗಸ್ಟ್ 19) ಶುರುವಾಗಿದೆ. ಈ ಸರಣಿಯಲ್ಲಿ ಸ್ಟೀವ್ ಸ್ಮಿತ್ ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಕಾಣಿಸಿಕೊಳ್ಳುವುದಿಲ್ಲ ಎಂಬುದು ವಿಶೇಷ. ಅಂದರೆ ಆಸ್ಟ್ರೇಲಿಯಾ ಪರ ದಶಕಗಳ ಕಾಲ ಏಕದಿನ ಪಂದ್ಯಗಳನ್ನಾಡಿದ್ದ ಸ್ಮಿತ್ ಹಾಗೂ ಮ್ಯಾಕ್ಸ್ವೆಲ್ ಇಲ್ಲದೆ ಇದೇ ಮೊದಲ ಬಾರಿ ಆಸೀಸ್ ಪಡೆ ಕಣಕ್ಕಿಳಿಯುತ್ತಿದೆ. ಇದರಿಂದಿಗೆ ಏಕದಿನ ಕ್ರಿಕೆಟ್ನಲ್ಲಿ ಸ್ಟಾರ್ ಆಟಗಾರಿಬ್ಬರ ಯುಗಾಂತ್ಯವಾದಂತಾಗಿದೆ.

ಆಸ್ಟ್ರೇಲಿಯಾ ಪರ 170 ಏಕದಿನ ಪಂದ್ಯಗಳನ್ನಾಡಿರುವ ಸ್ಟೀವ್ ಸ್ಮಿತ್ 155 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 12 ಶತಕ ಹಾಗೂ 35 ಅರ್ಧಶತಕಗಳೊಂದಿಗೆ ಒಟ್ಟು 5800 ರನ್ ಕಲೆಹಾಕಿದ್ದಾರೆ. ಇನ್ನು ಸ್ಮಿತ್ ಅವರನ್ನು ಕಳೆದ ಟಿ20 ವಿಶ್ವಕಪ್ ವೇಳೆ ಆಯ್ಕೆಗೆ ಪರಿಗಣಿಸಲಾಗಿಲ್ಲ. ಇದಾಗ್ಯೂ ಅವರು ಟಿ20 ಮತ್ತು ಟೆಸ್ಟ್ ತಂಡಗಳಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಅದರಂತೆ ಮುಂಬರುವ ದಿನಗಳಲ್ಲಿ ಸ್ಮಿತ್ ಆಸ್ಟ್ರೇಲಿಯಾ ಟೆಸ್ಟ್ ತಂಡದಲ್ಲಿ ಮಾತ್ರ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಇನ್ನು ಆಸ್ಟ್ರೇಲಿಯಾ ಪರ ಈವರೆಗೆ 149 ಏಕದಿನ ಪಂದ್ಯಗಳನ್ನಾಡಿರುವ ಗ್ಲೆನ್ ಮ್ಯಾಕ್ಸ್ವೆಲ್ 136 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 3149 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 3990 ರನ್ ಕಲೆಹಾಕಿದ್ದಾರೆ. ಇದರ ನಡುವೆ ಒಂದು ದ್ವಿಶತಕ ಹಾಗೂ 4 ಶತಕ ಮತ್ತು 23 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಹಾಗೆಯೇ ಬೌಲಿಂಗ್ ಮೂಲಕ ಕೂಡ ಕೊಡುಗೆ ನೀಡಿರುವ ಗ್ಲೆನ್ ಮ್ಯಾಕ್ಸ್ವೆಲ್ 119 ಇನಿಂಗ್ಸ್ಗಳಲ್ಲಿ ಚೆಂಡೆಸೆದಿದ್ದು, ಈ ವೇಳೆ 4002 ಎಸೆತಗಳಲ್ಲಿ 3644 ರನ್ ನೀಡುವ ಮೂಲಕ ಒಟ್ಟು 77 ವಿಕೆಟ್ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಮ್ಯಾಕ್ಸ್ವೆಲ್ ಆಸ್ಟ್ರೇಲಿಯಾ ಪರ ಏಕದಿನ ಕ್ರಿಕೆಟ್ನಲ್ಲಿ 3 ಸಾವಿರ ರನ್ ಹಾಗೂ 50 ಕ್ಕಿಂತ ಹೆಚ್ಚು ವಿಕೆಟ್ ಪಡೆದ ಆಲ್ರೌಂಡರ್ಗಳಲ್ಲಿ ಗುರುತಿಸಿಕೊಂಡಿದ್ದಾರೆ.

ಸದ್ಯ ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿರುವ ಗ್ಲೆನ್ ಮ್ಯಾಕ್ಸ್ವೆಲ್ 2026ರ ಟಿ20 ವಿಶ್ವಕಪ್ ಆಡುವ ವಿಶ್ವಾಸದಲ್ಲಿದ್ದಾರೆ. ಈ ವಿಶ್ವಕಪ್ನೊಂದಿಗೆ 36 ವರ್ಷದ ಮ್ಯಾಕ್ಸಿ ಚುಟುಕು ಕ್ರಿಕೆಟ್ಗೆ ಗುಡ್ ಬೈ ಹೇಳುವ ನಿರೀಕ್ಷೆಯಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್ ಆಸ್ಟ್ರೇಲಿಯಾ ಪರ ಮ್ಯಾಕ್ಸ್ವೆಲ್ ಆಡಲಿರುವ ಕೊನೆಯ ಟೂರ್ನಿ ಆಗಿರಲಿದೆ.




