AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯ ಜಯ ಜಯ ಜಯ ಜಯಯೇ… ಆಸ್ಟ್ರೇಲಿಯಾ ದಾಖಲೆಯ ಜಯಭೇರಿ

West Indies vs Australia: ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯನ್ನು ಆಸ್ಟ್ರೇಲಿಯಾ 5-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ 3 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು 2ನೇ ಮತ್ತು 3ನೇ ಟಿ20 ಪಂದ್ಯಗಳಲ್ಲಿ ಕ್ರಮವಾಗಿ 8 ಮತ್ತು 6 ವಿಕೆಟ್​ಗಳ ಗೆಲುವು ದಾಖಲಿಸಿತ್ತು. ಹಾಗೆಯೇ 4ನೇ ಟಿ20 ಪಂದ್ಯದಲ್ಲಿ 3 ವಿಕೆಟ್​ಗಳ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ಇದೀಗ 5ನೇ ಟಿ20 ಪಂದ್ಯವನ್ನೂ 3 ವಿಕೆಟ್​ಗಳಿಂದ ಗೆದ್ದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Jul 29, 2025 | 9:31 AM

Share
ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಜಯಭೇರಿ ಬಾರಿಸಿದೆ. ಸೇಂಟ್ ಕಿಟ್ಸ್​ನ ವಾರ್ನರ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

1 / 5
ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಶೆರ್ಫೆನ್ ರದರ್​ಫೋರ್ಡ್​ 35 ರನ್​ ಬಾರಿಸಿ ತಂಡಕ್ಕೆ ಆಸರೆಯಾದರು. ಇನ್ನು ಶಿಮ್ರಾನ್ ಹೆಟ್ಮೆಯರ್ 31 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 52 ರನ್ ಚಚ್ಚಿದರು. ಈ ಅರ್ಧಶತಕದ ನೆರವಿನೊಂದಿಗೆ ವೆಸ್ಟ್ ಇಂಡೀಸ್ ತಂಡವು 19.4 ಓವರ್​ಗಳಲ್ಲಿ 170 ರನ್​ಗಳಿಸಿ ಆಲೌಟ್ ಆಯಿತು.

2 / 5
171 ರನ್​ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕನಾಗಿ ಕಣಕ್ಕಿಳಿದ ಗ್ಲೆನ್ ಮ್ಯಾಕ್ಸ್​ವೆಲ್ ಶೂನ್ಯಕ್ಕೆ ಔಟಾದರೆ, ಜೋಶ್ ಇಂಗ್ಲಿಸ್ 10 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಮಿಚೆಲ್ ಮಾರ್ಷ್ 14 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದ್ದರು. 

3 / 5
ಈ ಹಂತದಲ್ಲಿ ಜೊತೆಗೂಡಿದ ಕ್ಯಾಮರೋನ್ ಗ್ರೀನ್ ಹಾಗೂ ಟಿಮ್ ಡೇವಿಡ್ ಸ್ಫೋಟಕ ಇನಿಂಗ್ಸ್ ಆಡಿದರು. ಪರಿಣಾಮ ಗ್ರೀನ್​ ಬ್ಯಾಟ್​ನಿಂದ 18 ಎಸೆತಗಳಲ್ಲಿ 32 ರನ್ ಮೂಡಿಬಂತು. ಅತ್ತ ಟಿಮ್ ಡೇವಿಡ್ 12 ಎಸೆತಗಳಲ್ಲಿ 4 ಸಿಕ್ಸ್, 1 ಫೋರ್​ನೊಂದಿಗೆ 30 ರನ್ ಚಚ್ಚಿದರು. ಆ ಬಳಿಕ ಬಂದ ಮಿಚೆಲ್ ಓವನ್ 17 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 37 ರನ್ ಬಾರಿಸಿದರು.

4 / 5
ಈ ಮೂಲಕ ಆಸ್ಟ್ರೇಲಿಯಾ ತಂಡವು 17 ಓವರ್​ಗಳಲ್ಲಿ 173 ರನ್​ಗಳಿಸಿ 3 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಇದೇ ಮೊದಲ ಬಾರಿಗೆ 5-0 ಅಂತರದಿಂದ ಟಿ20 ಸರಣಿ ಗೆದ್ದ ದಾಖಲೆ ಬರೆದಿದೆ. ಅಂದರೆ ಈವರೆಗೆ ಆಸೀಸ್ ಪಡೆ ಯಾವುದೇ ತಂಡದ ವಿರುದ್ಧ 5-0 ಅಂತರದಿಂದ ಟಿ20 ಸರಣಿ ಗೆದ್ದಿರಲಿಲ್ಲ. ಇದೀಗ ವೆಸ್ಟ್ ಇಂಡೀಸ್ ತಂಡವನ್ನು ವೈಟ್ ವಾಶ್ ಮಾಡುವ ಮೂಲಕ ಆಸ್ಟ್ರೇಲಿಯಾ ಹೊಸ ಇತಿಹಾಸ ನಿರ್ಮಿಸಿದೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ