
ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವಿಶ್ವ ದಾಖಲೆಯನ್ನು ನಿರ್ಮಿಸಿರುವುದು ಆಸ್ಟ್ರೇಲಿಯಾ ದಾಂಡಿಗರು. ಅದು ಕೂಡ ಇಂಗ್ಲೆಂಡ್ ನೀಡಿದ 205 ರನ್ಗಳ ಗುರಿಯನ್ನು ಕೇವಲ 28.2 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ..!

ಹೌದು, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 200+ ರನ್ಗಳ ಗುರಿಯನ್ನು ಚೇಸ್ ಮಾಡಿದ ವಿಶ್ವ ದಾಖಲೆ ಇದೀಗ ಆಸ್ಟ್ರೇಲಿಯಾ ತಂಡದ ಪಾಲಾಗಿದೆ. ಪರ್ತ್ನಲ್ಲಿ ನಡೆದ ಆ್ಯಶಸ್ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ 205 ರನ್ಗಳ ಗುರಿಯನ್ನು ಆಸೀಸ್ ಪಡೆ ಕೇವಲ 28.2 ಓವರ್ಗಳಲ್ಲಿ ಚೇಸ್ ಮಾಡಿದ್ದಾರೆ.

ಅಂದರೆ ಕೇವಲ 170 ಎಸೆತಗಳಲ್ಲಿ ಆಸ್ಟ್ರೇಲಿಯಾ ತಂಡ 205 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 200 ಪ್ಲಸ್ ಗುರಿ ಬೆನ್ನತ್ತಿ ಗೆದ್ದ ವಿಶ್ವ ದಾಖಲೆ ಆಸ್ಟ್ರೇಲಿಯಾ ತಂಡದ ಹೆಸರಿಗೆ ಸೇರ್ಪಡೆಯಾಯಿತು.

ಇದಕ್ಕೂ ಮುನ್ನ ಈ ದಾಖಲೆ ಭರ್ಜರಿ ಇಂಗ್ಲೆಂಡ್ ತಂಡದ ಹೆಸರಿನಲ್ಲಿತ್ತು. 2022 ರಲ್ಲಿ ನಾಟಿಂಗ್ಹ್ಯಾಮ್ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ನೀಡಿದ 299 ರನ್ಗಳ ಗುರಿಯನ್ನು ಇಂಗ್ಲೆಂಡ್ 50 ಓವರ್ಗಳಲ್ಲಿ ಚೇಸ್ ಮಾಡಿ ಇತಿಹಾಸ ನಿರ್ಮಿಸಿದ್ದರು.

ಇದೀಗ ಪ್ರತಿ ಓವರ್ಗೆ 7.23 ಸರಾಸರಿಯನ್ನು ರನ್ ಗಳಿಸಿ 205 ರನ್ಗಳ ಗುರಿಯನ್ನು ಕೇವಲ 28.2 ಓವರ್ಗಳಲ್ಲಿ ಬೆನ್ನತ್ತುವ ಮೂಲಕ ಆಸ್ಟ್ರೇಲಿಯಾ ತಂಡವು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಟೆಸ್ಟ್ ಇತಿಹಾಸದಲ್ಲೇ 200+ ರನ್ ಗುರಿಯನ್ನು ಅತೀ ವೇಗವಾಗಿ ಚೇಸ್ ಮಾಡಿದ ವಿಶ್ವ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.