AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋರ್ಚುಗಲ್ ಪರ ಕಣಕ್ಕಿಳಿಯಲಿದ್ದಾರೆ ಆಸ್ಟ್ರೇಲಿಯಾ ಕ್ರಿಕೆಟಿಗ!

Moises Henriques: ಮೊಯ್ಸೆಸ್ ಹೆನ್ರಿಕ್ಸ್ ಆಸ್ಟ್ರೇಲಿಯಾ ಕ್ರಿಕೆಟ್ ಕಂಡಂತಹ ಅತ್ಯುತ್ತಮ ಆಲ್​ರೌಂಡರ್​ಗಳಲ್ಲಿ ಒಬ್ಬರು. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೆನ್ರಿಕ್ಸ್​ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಇದಾಗ್ಯೂ ಅವರು ಬಿಗ್ ಬ್ಯಾಷ್ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್ ತಂಡವನ್ನು ಮುನ್ನಡೆಸಿ ಬ್ಯಾಕ್-ಟು-ಬ್ಯಾಕ್ ಚಾಂಪಿಯನ್ ಪಟ್ಟ ತಂದುಕೊಡುವಲ್ಲಿ ಯಶಸ್ವಿಯಾಗಿದ್ದರು. ಹಾಗೆಯೇ 2016 ರ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿಯೂ ಪ್ರಮುಖ ಪಾತ್ರವಹಿಸಿದ್ದರು.

ಝಾಹಿರ್ ಯೂಸುಫ್
|

Updated on: Jun 30, 2026 | 2:14 PM

Share
ಆಸ್ಟ್ರೇಲಿಯಾದ ಆಲ್-ರೌಂಡರ್ ಮೊಯ್ಸೆಸ್ ಹೆನ್ರಿಕ್ಸ್ ಪೋರ್ಚುಗಲ್ ಪರ ಹೊಸ ಇನಿಂಗ್ಸ್ ಆರಂಭಿಸಲು ನಿರ್ಧರಿಸಿದ್ದಾರೆ. ಅಂದರೆ ಆಸ್ಟ್ರೇಲಿಯಾ ಕ್ರಿಕೆಟ್ ತೊರೆದು, ಪೋರ್ಚುಗಲ್ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಮುಂದಾಗಿದ್ದಾರೆ. ಅದರಂತೆ ಮುಂಬರುವ ಆಗಸ್ಟ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಅರ್ಹತಾ ಪಂದ್ಯದಲ್ಲಿ ಮೊಯ್ಸೆಸ್ ಹೆನ್ರಿಕ್ಸ್ ಪೋರ್ಚುಗಲ್ ಪರ ಕಣಕ್ಕಿಳಿಯಲಿದ್ದಾರೆ. (PC: getty images)

1 / 5
ಮೊಯ್ಸೆಸ್ ಹೆನ್ರಿಕ್ಸ್ ಅವರು ಫೆಬ್ರವರಿ 1, 1987 ರಂದು ಪೋರ್ಚುಗಲ್‌ನ ಫಂಚಲ್‌ನಲ್ಲಿ ಜನಿಸಿದ್ದರು. ಆದರೆ ಅವರು ಚಿಕ್ಕ ಮಗುವಾಗಿದ್ದಾಗಲೇ ಅವರ ಕುಟುಂಬವು ಆಸ್ಟ್ರೇಲಿಯಾಕ್ಕೆ ವಲಸೆ ಹೋಗಿತ್ತು. ಹೀಗಾಗಿ ಅವರು ಆಸ್ಟ್ರೇಲಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದರು. (PC: getty images)

2 / 5
ಇದೀಗ ಆಸ್ಟ್ರೇಲಿಯಾ ತಂಡದಿಂದ ಹೊರಬಿದ್ದಿರುವ ಮೊಯ್ಸೆಸ್ ಹೆನ್ರಿಕ್ಸ್ ತಮ್ಮ ಮೂಲ ದೇಶದ ಪರ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ 2028ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಯುರೋಪ್ ಸಬ್-ರೀಜನಲ್ ಕ್ವಾಲಿಫೈಯರ್ಸ್  ಪಂದ್ಯಾವಳಿಯಲ್ಲಿ ಪೋರ್ಚುಗಲ್ ಪರ ಹೆನ್ಸಿಕ್ ಕಣಕ್ಕಿಳಿಯಲಿದ್ದಾರೆ. (PC: getty images)

3 / 5
ಐಸಿಸಿ ನಿಯಮಾವಳಿಗಳ ಪ್ರಕಾರ, ಪೂರ್ಣ ಪ್ರಮಾಣದ ಸದಸ್ಯ ರಾಷ್ಟ್ರದಿಂದ ಅಸೋಸಿಯೇಟ್ ಸದಸ್ಯ ರಾಷ್ಟ್ರಕ್ಕೆ  ಬದಲಾಗಲು ಬೇಕಾದ ಕಡ್ಡಾಯ 3 ವರ್ಷಗಳ 'ಸ್ಟ್ಯಾಂಡ್-ಡೌನ್' ಅವಧಿಯನ್ನು ಹೆನ್ರಿಕ್ಸ್ ಈಗಾಗಲೇ ಪೂರೈಸಿದ್ದಾರೆ. ಈ ಕಾರಣದಿಂದಾಗಿ ಅವರು ತಮ್ಮ ಜನ್ಮ ನೀಡಿದ ದೇಶದ ಪರವಾಗಿ ಆಡಲು ಈಗ ಸಂಪೂರ್ಣ ಅರ್ಹರಾಗಿದ್ದಾರೆ. (PC: getty images)

4 / 5
ಆಸ್ಟ್ರೇಲಿಯಾ ಪರವಾಗಿ ಮೊಯ್ಸೆಸ್ ಹೆನ್ರಿಕ್ಸ್ ಒಟ್ಟು 44 ಅಂತರರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 636 ರನ್ ಹಾಗೂ 17 ವಿಕೆಟ್​ಗಳನ್ನು ಪಡೆದಿದ್ದಾರೆ. ಇನ್ನು ಕೊನೆಯ ಬಾರಿಗೆ ಅವರು ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದು 2021 ರಲ್ಲಿ. ಇದೀಗ ದೇಶ ಬದಲಾವಣೆಯ 'ಸ್ಟ್ಯಾಂಡ್-ಡೌನ್' ಅವಧಿ ಮುಗಿಸಿರುವ ಮೊಯ್ಸೆಸ್ ಹೆನ್ರಿಕ್ಸ್ ಪೋರ್ಚುಗಲ್ ಪರ ಕಣಕ್ಕಿಳಿಯಲು ಅರ್ಹತೆ ಪಡೆದುಕೊಂಡಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಹೆನ್ರಿಕ್ ಪೋರ್ಚುಗಲ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. (PC: X.com)

5 / 5
Follow Us
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!

ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!

ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು

ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!

ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?

ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ

ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು

ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ

ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!