- TV9 Kannada Kannada News Photos Cricket Photos Australian cricketer Moises Henriques to play for Portugal
ಪೋರ್ಚುಗಲ್ ಪರ ಕಣಕ್ಕಿಳಿಯಲಿದ್ದಾರೆ ಆಸ್ಟ್ರೇಲಿಯಾ ಕ್ರಿಕೆಟಿಗ!
Moises Henriques: ಮೊಯ್ಸೆಸ್ ಹೆನ್ರಿಕ್ಸ್ ಆಸ್ಟ್ರೇಲಿಯಾ ಕ್ರಿಕೆಟ್ ಕಂಡಂತಹ ಅತ್ಯುತ್ತಮ ಆಲ್ರೌಂಡರ್ಗಳಲ್ಲಿ ಒಬ್ಬರು. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಹೆನ್ರಿಕ್ಸ್ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಇದಾಗ್ಯೂ ಅವರು ಬಿಗ್ ಬ್ಯಾಷ್ ಲೀಗ್ನಲ್ಲಿ ಸಿಡ್ನಿ ಸಿಕ್ಸರ್ಸ್ ತಂಡವನ್ನು ಮುನ್ನಡೆಸಿ ಬ್ಯಾಕ್-ಟು-ಬ್ಯಾಕ್ ಚಾಂಪಿಯನ್ ಪಟ್ಟ ತಂದುಕೊಡುವಲ್ಲಿ ಯಶಸ್ವಿಯಾಗಿದ್ದರು. ಹಾಗೆಯೇ 2016 ರ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿಯೂ ಪ್ರಮುಖ ಪಾತ್ರವಹಿಸಿದ್ದರು.
Updated on: Jun 30, 2026 | 2:14 PM

ಆಸ್ಟ್ರೇಲಿಯಾದ ಆಲ್-ರೌಂಡರ್ ಮೊಯ್ಸೆಸ್ ಹೆನ್ರಿಕ್ಸ್ ಪೋರ್ಚುಗಲ್ ಪರ ಹೊಸ ಇನಿಂಗ್ಸ್ ಆರಂಭಿಸಲು ನಿರ್ಧರಿಸಿದ್ದಾರೆ. ಅಂದರೆ ಆಸ್ಟ್ರೇಲಿಯಾ ಕ್ರಿಕೆಟ್ ತೊರೆದು, ಪೋರ್ಚುಗಲ್ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಮುಂದಾಗಿದ್ದಾರೆ. ಅದರಂತೆ ಮುಂಬರುವ ಆಗಸ್ಟ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಮೊಯ್ಸೆಸ್ ಹೆನ್ರಿಕ್ಸ್ ಪೋರ್ಚುಗಲ್ ಪರ ಕಣಕ್ಕಿಳಿಯಲಿದ್ದಾರೆ. (PC: getty images)

ಮೊಯ್ಸೆಸ್ ಹೆನ್ರಿಕ್ಸ್ ಅವರು ಫೆಬ್ರವರಿ 1, 1987 ರಂದು ಪೋರ್ಚುಗಲ್‌ನ ಫಂಚಲ್‌ನಲ್ಲಿ ಜನಿಸಿದ್ದರು. ಆದರೆ ಅವರು ಚಿಕ್ಕ ಮಗುವಾಗಿದ್ದಾಗಲೇ ಅವರ ಕುಟುಂಬವು ಆಸ್ಟ್ರೇಲಿಯಾಕ್ಕೆ ವಲಸೆ ಹೋಗಿತ್ತು. ಹೀಗಾಗಿ ಅವರು ಆಸ್ಟ್ರೇಲಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದರು. (PC: getty images)

ಇದೀಗ ಆಸ್ಟ್ರೇಲಿಯಾ ತಂಡದಿಂದ ಹೊರಬಿದ್ದಿರುವ ಮೊಯ್ಸೆಸ್ ಹೆನ್ರಿಕ್ಸ್ ತಮ್ಮ ಮೂಲ ದೇಶದ ಪರ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಅದರಂತೆ 2028ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನ ಯುರೋಪ್ ಸಬ್-ರೀಜನಲ್ ಕ್ವಾಲಿಫೈಯರ್ಸ್ ಪಂದ್ಯಾವಳಿಯಲ್ಲಿ ಪೋರ್ಚುಗಲ್ ಪರ ಹೆನ್ಸಿಕ್ ಕಣಕ್ಕಿಳಿಯಲಿದ್ದಾರೆ. (PC: getty images)

ಐಸಿಸಿ ನಿಯಮಾವಳಿಗಳ ಪ್ರಕಾರ, ಪೂರ್ಣ ಪ್ರಮಾಣದ ಸದಸ್ಯ ರಾಷ್ಟ್ರದಿಂದ ಅಸೋಸಿಯೇಟ್ ಸದಸ್ಯ ರಾಷ್ಟ್ರಕ್ಕೆ ಬದಲಾಗಲು ಬೇಕಾದ ಕಡ್ಡಾಯ 3 ವರ್ಷಗಳ 'ಸ್ಟ್ಯಾಂಡ್-ಡೌನ್' ಅವಧಿಯನ್ನು ಹೆನ್ರಿಕ್ಸ್ ಈಗಾಗಲೇ ಪೂರೈಸಿದ್ದಾರೆ. ಈ ಕಾರಣದಿಂದಾಗಿ ಅವರು ತಮ್ಮ ಜನ್ಮ ನೀಡಿದ ದೇಶದ ಪರವಾಗಿ ಆಡಲು ಈಗ ಸಂಪೂರ್ಣ ಅರ್ಹರಾಗಿದ್ದಾರೆ. (PC: getty images)

ಆಸ್ಟ್ರೇಲಿಯಾ ಪರವಾಗಿ ಮೊಯ್ಸೆಸ್ ಹೆನ್ರಿಕ್ಸ್ ಒಟ್ಟು 44 ಅಂತರರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 636 ರನ್ ಹಾಗೂ 17 ವಿಕೆಟ್ಗಳನ್ನು ಪಡೆದಿದ್ದಾರೆ. ಇನ್ನು ಕೊನೆಯ ಬಾರಿಗೆ ಅವರು ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದು 2021 ರಲ್ಲಿ. ಇದೀಗ ದೇಶ ಬದಲಾವಣೆಯ 'ಸ್ಟ್ಯಾಂಡ್-ಡೌನ್' ಅವಧಿ ಮುಗಿಸಿರುವ ಮೊಯ್ಸೆಸ್ ಹೆನ್ರಿಕ್ಸ್ ಪೋರ್ಚುಗಲ್ ಪರ ಕಣಕ್ಕಿಳಿಯಲು ಅರ್ಹತೆ ಪಡೆದುಕೊಂಡಿದ್ದಾರೆ. ಅದರಂತೆ ಮುಂಬರುವ ಟಿ20 ವಿಶ್ವಕಪ್ ಅರ್ಹತಾ ಸುತ್ತಿನಲ್ಲಿ ಹೆನ್ರಿಕ್ ಪೋರ್ಚುಗಲ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. (PC: X.com)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



