Australia T20 Squad: ಆಸ್ಟ್ರೇಲಿಯಾ ಟಿ20 ತಂಡ ಪ್ರಕಟ: ನಾಯಕತ್ವ ಬದಲಾವಣೆ..!
TV9 Web | Updated By: ಝಾಹಿರ್ ಯೂಸುಫ್
Updated on:
Feb 06, 2024 | 10:53 AM
Australian vs New Zealand: ನ್ಯೂಝಿಲೆಂಡ್ ವಿರುದ್ಧ ಟಿ20 ಸರಣಿಗಾಗಿ ಕ್ರಿಕೆಟ್ ಆಸ್ಟ್ರೇಲಿಯಾ 15 ಸದಸ್ಯರ ಬಳಗವನ್ನು ಆಯ್ಕೆ ಮಾಡಿದೆ. ಆದರೆ ಈ ತಂಡವನ್ನು ಪ್ಯಾಟ್ ಕಮುನ್ಸ್ ಮುನ್ನಡೆಸುತ್ತಿಲ್ಲ ಎಂಬುದು ವಿಶೇಷ. ಅಂದರೆ ಏಕದಿನ ವಿಶ್ವಕಪ್ ಗೆದ್ದ ನಾಯಕನಾಗಿರುವ ಕಮಿನ್ಸ್ ಅವರನ್ನು ಈ ಬಾರಿ ಕೇವಲ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಲಾಗಿದೆ.
1 / 5
ನ್ಯೂಝಿಲೆಂಡ್ ವಿರುದ್ದದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಮಿಚೆಲ್ ಮಾರ್ಷ್ ಮುನ್ನಡೆಸಲಿರುವುದು ವಿಶೇಷ. ಅಂದರೆ ಆಸ್ಟ್ರೇಲಿಯಾ ತಂಡದ ಯಶಸ್ವಿ ನಾಯಕನಾಗಿ ಗುರುತಿಸಿಕೊಂಡಿರುವ ಪ್ಯಾಟ್ ಕಮಿನ್ಸ್ ಈ ಬಾರಿ ಕೇವಲ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.
2 / 5
ಪ್ಯಾಟ್ ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡವು ಏಕದಿನ ವಿಶ್ವಕಪ್ ಮತ್ತು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅನ್ನು ಗೆದ್ದುಕೊಂಡಿತ್ತು. ಇದಾಗ್ಯೂ ಟಿ20 ತಂಡದ ನಾಯಕತ್ವದಿಂದ ಕಮಿನ್ಸ್ ಅವರನ್ನು ಕೈ ಬಿಡಲಾಗಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ತಂಡವು ಮಿಚೆಲ್ ಮಾರ್ಷ್ ಮುಂದಾಳತ್ವದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ.
3 / 5
ಇನ್ನು ಈ ತಂಡದಲ್ಲಿ ಹಿರಿಯ ಆಟಗಾರರಾದ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಮ್ಯಾಥ್ಯೂ ವೇಡ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ತಂಡದಲ್ಲಿ ಏಕೈಕ ಸ್ಪಿನ್ನರ್ ಆಗಿ ಆ್ಯಡಂ ಝಂಪಾ ಕಾಣಿಸಿಕೊಂಡಿದ್ದಾರೆ.
4 / 5
ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ನಡುವಣ ಟಿ20 ಸರಣಿಯು ಫೆಬ್ರವರಿ 21 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯಕ್ಕೆ ವೆಲ್ಲಿಂಗ್ಟನ್ನ ಸ್ಕೈ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಫೆಬ್ರವರಿ 23 ರಂದು ಆಕ್ಲೆಂಡ್ನಲ್ಲಿ ಎರಡನೇ ಪಂದ್ಯ ನಡೆಯಲಿದೆ. ಇನ್ನು ಈ ಸರಣಿಯ ಕೊನೆಯ ಪಂದ್ಯವು ಫೆಬ್ರವರಿ 25 ರಂದು ಆಕ್ಲೆಂಡ್ನ ಈಡನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ. ಅದರಂತೆ ಈ ಸರಣಿಗಾಗಿ ಆಯ್ಕೆಯಾದ ಆಸ್ಟ್ರೇಲಿಯಾ ತಂಡ ಈ ಕೆಳಗಿನಂತಿದೆ.
5 / 5
ಆಸ್ಟ್ರೇಲಿಯಾ ಟಿ20 ತಂಡ: ಮಿಚೆಲ್ ಮಾರ್ಷ್ (ನಾಯಕ), ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್ , ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್ , ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್ , ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.