AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಇತಿಹಾಸದಲ್ಲೇ ಅತ್ಯಂತ ಹೀನಾಯವಾಗಿ ಸೋತ ಆಸ್ಟ್ರೇಲಿಯಾ

Pakistan vs Australia: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲೂ ಪಾಕಿಸ್ತಾನ್ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 207 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಕೇವಲ 96 ರನ್​ಗಳಿಗೆ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on:Feb 02, 2026 | 2:53 PM

Share
ಟಿ20 ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾ ತಂಡವು 222 ಪಂದ್ಯಗಳನ್ನಾಡಿದೆ. ಈ ಇನ್ನೂರ ಇಪ್ಪೆರಡು ಮ್ಯಾಚ್​ಗಳಲ್ಲಿ ಆಸೀಸ್ ಪಡೆ 122 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಸೋತಿರುವುದು ಕೇವಲ 90 ಪಂದ್ಯಗಳಲ್ಲಿ ಮಾತ್ರ. ಈ ತೊಂಬತ್ತು ಪಂದ್ಯಗಳಲ್ಲಿ ಅತ್ಯಂತ ಹೀನಾಯವಾಗಿ ಸೋತಿರುವುದು ಪಾಕಿಸ್ತಾನ್ ವಿರುದ್ಧ.

1 / 5
ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತು. ಈ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ 208 ರನ್​ಗಳ ಕಠಿಣ ಗುರಿ ನೀಡಿದ್ದರು.

2 / 5
ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಮೊಹಮ್ಮದ್ ನವಾಝ್ ಅವರ ಸ್ಪಿನ್ ದಾಳಿಗೆ ತತ್ತರಿಸಿದೆ. ಪರಿಣಾಮ 16.5 ಓವರ್​ಗಳಲ್ಲಿ ಕೇವಲ 96 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು ಬರೋಬ್ಬರಿ 111 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

3 / 5
ವಿಶೇಷ ಎಂದರೆ ಇದು ಟಿ20 ಕ್ರಿಕೆಟ್ ಇತಿಹಾಸದಲ್ಲೇ ಆಸ್ಟ್ರೇಲಿಯಾ ತಂಡದ ಅತ್ಯಂತ ಹೀನಾಯ ಸೋಲು. ಅಂದರೆ ಈವರೆಗೆ ಟಿ20 ಕ್ರಿಕೆಟ್​ನಲ್ಲಿ ಆಸೀಸ್ ಪಡೆ 100 ಕ್ಕಿಂತ ಹೆಚ್ಚಿನ ರನ್​ಗಳ ಅಂತರದಿಂದ ಪರಾಜಯಗೊಂಡಿರಲಿಲ್ಲ. ಇದಕ್ಕೂ ಮುನ್ನ 2005 ರಲ್ಲಿ ಇಂಗ್ಲೆಂಡ್ ವಿರುದ್ಧ 100 ರನ್​ಗಳಿಂದ ಸೋತಿದ್ದು ಹೀನಾಯ ಸೋಲಾಗಿತ್ತು.

4 / 5
ಆದರೆ ಈ ಬಾರಿ ಪಾಕಿಸ್ತಾನ್ ಪಡೆ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಕಾಡೆ ಮಲಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಬರೋಬ್ಬರಿ 111 ರನ್​ಗಳ ಅಂತರದಿಂದ ಸೋಲುಣಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅತ್ತ ನೂರಕ್ಕಿಂತ ಹೆಚ್ಚಿನ ರನ್​ಗಳ ಅಂತರದ ಸೋಲು ಕಾಣದೇ ಟಿ20 ಕ್ರಿಕೆಟ್​ನಲ್ಲಿ ಪಾರುಪತ್ಯ ಮೆರೆದಿದ್ದ ಆಸ್ಟ್ರೇಲಿಯಾ ತಂಡವು ಹೀನಾಯ ಸೋಲಿನೊಂದಿಗೆ ಭಾರೀ ಮುಖಭಂಗ ಅನುಭವಿಸಿದೆ.

5 / 5

Published On - 7:21 am, Mon, 2 February 26

Follow Us
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್

ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ

ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ

ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ

15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್

TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್

ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ

ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು

ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA

ಚಾಟ್‌ಜಿಪಿಟಿ ಬಳಸಿ ಬುಕ್ ಬರೆಯಲು ರೆಡಿಯಾದ ಆಟೋ ಡ್ರೈವರ್