David Warner: ನಿವೃತ್ತಿ ದಿನಾಂಕ ಘೋಷಿಸಿದ ಡೇವಿಡ್ ವಾರ್ನರ್
TV9 Web | Updated By: ಝಾಹಿರ್ ಯೂಸುಫ್
Updated on:
Jun 03, 2023 | 6:17 PM
David Warner Retirement: WTC ನಲ್ಲಿ ಮತ್ತು ಆ್ಯಶಸ್ ಸರಣಿಯಲ್ಲಿ ರನ್ ಗಳಿಸಲು ಸಾಧ್ಯವಾದರೆ ಹಾಗೂ ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನ್ ವಿರುದ್ಧ ಆಡಲು ಅವಕಾಶ ಪಡೆದರೆ ಮತ್ತೆ ನಾನು ಯಾವುದೇ ಸರಣಿಯನ್ನು ಆಡುವುದಿಲ್ಲ ಎಂದು ವಾರ್ನರ್ ಖಚಿತಪಡಿಸಿದ್ದಾರೆ.
1 / 7
ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ತಮ್ಮ ನಿವೃತ್ತಿ ದಿನಾಂಕವನ್ನು ಬಹಿರಂಗಪಡಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕೂ ಮುನ್ನ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ವಾರ್ನರ್, ಮುಂದಿನ ವರ್ಷ ನಿವೃತ್ತಿ ನೀಡುವುದಾಗಿ ಘೋಷಿಸಿದ್ದಾರೆ.
2 / 7
2024 ರಲ್ಲಿ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ್ ನಡುವಣ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಒಂದು ಪಂದ್ಯವು ಸಿಡ್ನಿ ಮೈದಾನದಲ್ಲಿ ನಡೆಯಲಿದ್ದು, ಆ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಲು ಬಯಸಿದ್ದೇನೆ ಎಂದು ವಾರ್ನರ್ ತಿಳಿಸಿದ್ದಾರೆ.
3 / 7
ಇದಾಗ್ಯೂ ಸೀಮಿತ ಓವರ್ಗಳಲ್ಲಿ ಮುಂದುವರೆಯುವುದಾಗಿ ತಿಳಿಸಿದರುವ ವಾರ್ನರ್, 2024 ರಲ್ಲಿ ವೆಸ್ಟ್ ಇಂಡೀಸ್ ಮತ್ತು USA ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನಲ್ಲೂ ಕಣಕ್ಕಿಳಿಯುವ ಇರಾದೆ ಹೊಂದಿದ್ದೇನೆ. ಆ ವಿಶ್ವಕಪ್ನ ಆಸ್ಟ್ರೇಲಿಯಾ ತಂಡದ ಕೊನೆಯ ಪಂದ್ಯ ನನ್ನ ಅಂತಿಮ ಪಂದ್ಯವಾಗಿರಲಿದೆ ಎಂದಿದ್ದಾರೆ.
4 / 7
ನಾನು ನನ್ನ ಕುಟುಂಬಕ್ಕೆ ಋಣಿಯಾಗಿದ್ದೇನೆ. ನನಗೆ WTC ನಲ್ಲಿ ಮತ್ತು ಆ್ಯಶಸ್ ಸರಣಿಯಲ್ಲಿ ರನ್ ಗಳಿಸಲು ಸಾಧ್ಯವಾದರೆ ಹಾಗೂ ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನ್ ವಿರುದ್ಧ ಆಡಲು ಅವಕಾಶ ಪಡೆದರೆ, ವೆಸ್ಟ್ ಇಂಡೀಸ್ ಸರಣಿಯನ್ನು ಆಡುವುದಿಲ್ಲ ಎಂಬುದನ್ನು ಖಚಿತಪಡಿಸುತ್ತೇನೆ.
5 / 7
ಈ ಮೂಲಕ ಮುಂದಿನ ಜನವರಿ 3 ರಿಂದ ಶುರುವಾಗಲಿರುವ ಪಾಕ್ ವಿರುದ್ಧದ ಪಂದ್ಯದದೊಂದಿಗೆ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳುವುದಾಗಿ ವಾರ್ನರ್ ಸ್ಪಷ್ಟಪಡಿಸಿದ್ದಾರೆ.
6 / 7
ಸದ್ಯ 36 ವರ್ಷದ ಡೇವಿಡ್ ವಾರ್ನರ್ 102 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 187 ಇನಿಂಗ್ಸ್ನಲ್ಲಿ ಬ್ಯಾಟ್ ಬೀಸಿರುವ ಅವರು ಒಟ್ಟು 8158 ರನ್ ಕಲೆಹಾಕಿದ್ದಾರೆ.
7 / 7
ಇದೀಗ ಟೀಮ್ ಇಂಡಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಕ್ಕಾಗಿ ಸಜ್ಜಾಗುತ್ತಿರುವ ವಾರ್ನರ್ ಅವರ ಮುಂದಿನ ಗುರಿ ಪ್ರತಿಷ್ಠಿತ ಆ್ಯಶಸ್ ಸರಣಿ. ಜೂನ್ 16 ರಿಂದ ಶುರುವಾಗಲಿರುವ ಇಂಗ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ತಂಡಕ್ಕೆ ಗೆಲುವು ತಂದುಕೊಡುವ ಆತ್ಮ ವಿಶ್ವಾಸದಲ್ಲಿದ್ದಾರೆ ಹಿರಿಯ ಆಟಗಾರ.
Published On - 4:07 pm, Sat, 3 June 23