AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Australia: ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯ ಕನಸು ಚೂರು ಚೂರು..!

T20 World Cup 2024: ಕ್ರಿಕೆಟ್ ಇತಿಹಾಸದಲ್ಲಿ ಯಾವುದೇ ತಂಡ ಮೂರು ಸ್ವರೂಪಗಳಲ್ಲೂ ಏಕ ಕಾಲಕ್ಕೆ ಚಾಂಪಿಯನ್ ಪಟ್ಟ ಅಲಂಕರಿಸಿಲ್ಲ. ಅಂದರೆ ಟೆಸ್ಟ್, ಏಕದಿನ ಮತ್ತು ಟಿ20 ವಿಶ್ವಕಪ್​ನಲ್ಲಿ ಬ್ಯಾಕ್ ಟು ಬ್ಯಾಕ್ ವಿಶ್ವ ಚಾಂಪಿಯನ್ ಪಟ್ಟಕ್ಕೇರಿಲ್ಲ. ಅಂತಹದೊಂದು ವಿಶೇಷ ಸಾಧನೆ ಮಾಡುವ ಅವಕಾಶ ಆಸ್ಟ್ರೇಲಿಯಾ ತಂಡದ ಮುಂದಿತ್ತು. ಆದರೀಗ ಭಾರತ ಮತ್ತು ಅಫ್ಘಾನಿಸ್ತಾನ್ ತಂಡಗಳು ಸೇರಿ ಈ ಕನಸನ್ನು ನುಚ್ಚು ನೂರು ಮಾಡಿದೆ.

ಝಾಹಿರ್ ಯೂಸುಫ್
|

Updated on: Jun 25, 2024 | 4:17 PM

Share
T20 World Cup 2024: ಟಿ20 ವಿಶ್ವಕಪ್​ 2024 ರಲ್ಲಿ ಚಾಂಪಿಯನ್ ಪಟ್ಟಕ್ಕೇರಬೇಕೆಂಬ ಆಸ್ಟ್ರೇಲಿಯಾ (Australia) ತಂಡದ ಕನಸು ಸೂಪರ್-8 ಸುತ್ತಿನಲ್ಲೇ ಕಮರಿದೆ. ಮೊದಲ ಸುತ್ತಿನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಆಸೀಸ್ ಪಡೆ, ದ್ವಿತೀಯ ಸುತ್ತಿನಲ್ಲಿ ಅಫ್ಘಾನಿಸ್ತಾನ್ ಮತ್ತು ಭಾರತ ವಿರುದ್ಧ ಸೋಲನುಭವಿಸಿದೆ. ಈ ಸೋಲಿನೊಂದಿಗೆ ಆಸ್ಟ್ರೇಲಿಯಾ ತಂಡ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ.

1 / 6
ಈ ಹೊರಬೀಳುವಿಕೆಯೊಂದಿಗೆ ಆಸ್ಟ್ರೇಲಿಯಾ ತಂಡದ ಬಹುದೊಡ್ಡ ಕನಸು ಕೂಡ ನುಚ್ಚು ನೂರಾಗಿದೆ. ಅಂದರೆ ಕ್ರಿಕೆಟ್ ಇತಿಹಾಸದಲ್ಲೇ ಒಂದೇ ಬಾರಿ ಮೂರು ಸ್ವರೂಪಗಳಲ್ಲಿ ಯಾವುದೇ ತಂಡ ವಿಶ್ವ ಚಾಂಪಿಯನ್ ಆಗಿರಲಿಲ್ಲ. ಈ ಬಾರಿ ಆಸೀಸ್ ಪಡೆಗೆ ಅಂತಹದೊಂದು ವಿಶ್ವ ದಾಖಲೆ ನಿರ್ಮಿಸುವ ಅವಕಾಶವಿತ್ತು. ಅಲ್ಲದೆ ಅದನ್ನೇ ಸಾಧಿಸಿಯೇ ತೀರುತ್ತೇವೆ ಎಂಬ ಆತ್ಮ ವಿಶ್ವಾಸವಿತ್ತು.

2 / 6
ಆಸ್ಟ್ರೇಲಿಯಾ ತಂಡವು 2023 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಚಾಂಪಿಯನ್​ ಪಟ್ಟಕ್ಕೇರಿದ್ದರು. ಇಂಗ್ಲೆಂಡ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು 209 ರನ್​ಗಳಿಂದ ಸೋಲಿಸಿ ಆಸ್ಟ್ರೇಲಿಯಾ ಟೆಸ್ಟ್ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು.

3 / 6
ಇನ್ನು 2023 ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲೂ ಭಾರತ ತಂಡಕ್ಕೆ ಸೋಲುಣಿಸಿ ಆಸ್ಟ್ರೇಲಿಯಾ ವಿಶ್ವ ಚಾಂಪಿಯನ್ ಅಲಂಕರಿಸಿತ್ತು. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು 6 ವಿಕೆಟ್​ಗಳಿಂದ ಮಣಿಸಿ ಆಸ್ಟ್ರೇಲಿಯಾ ಟ್ರೋಫಿ ಎತ್ತಿ ಹಿಡಿದಿತ್ತು.

4 / 6
ಅದರಂತೆ 2024 ರ ಟಿ20 ವಿಶ್ವಕಪ್​ನಲ್ಲೂ ಚಾಂಪಿಯನ್ ಪಟ್ಟ ಅಲಂಕರಿಸುವ ವಿಶ್ವಾಸದೊಂದಿಗೆ ಆಸೀಸ್ ಪಡೆ ಕೆರಿಬಿಯನ್ ದ್ವೀಪಕ್ಕೆ ಆಗಮಿಸಿದ್ದರು. ಈ ಮೂಲಕ ಮೂರು ಸ್ವರೂಪಗಳಲ್ಲೂ ಏಕಾಧಿಪತ್ಯ ಸ್ಥಾಪಿಸುವ ವಿಶ್ವಾಸದಲ್ಲಿತ್ತು. ಆದರೆ ದ್ವಿತೀಯ ಸುತ್ತಿನಲ್ಲಿ ಆಸ್ಟ್ರೇಲಿಯಾ ಪಾಲಿಗೆ ಅಫ್ಘಾನಿಸ್ತಾನ್ ಕಂಟಕವಾಗಿ ಮಾರ್ಪಟ್ಟಿದೆ. ಸೂಪರ್-8 ಸುತ್ತಿನಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ 2 ಅಂಕ ಪಡೆದಿದ್ದ ಅಫ್ಘಾನ್ನರು, ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಮಣಿಸಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವನ್ನು ವಿಶ್ವಕಪ್ ಟೂರ್ನಿಯಿಂದಲೇ ಹೊರದಬ್ಬಿದೆ.

5 / 6
ಇದರೊಂದಿಗೆ ಒಂದೇ ಬಾರಿ ಮೂರು ಸ್ವರೂಪದ ಟೂರ್ನಿಯಲ್ಲೂ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸುವ ಆಸ್ಟ್ರೇಲಿಯಾ ತಂಡದ ಬಹು ದೊಡ್ಡ ಕನಸು ಕೂಡ ಕಮರಿದೆ. ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಕ್ಕ ಈ ಅವಕಾಶ ಕೈ ಚೆಲ್ಲಿಕೊಂಡಿರುವ ಆಸ್ಟ್ರೇಲಿಯಾ ಈ ಸಾಧನೆ ಮಾಡಲು ಮತ್ತೊಮ್ಮೆ ಐಸಿಸಿಯ ಮೂರು ಟೂರ್ನಿಗಳಲ್ಲೂ ಬ್ಯಾಕ್ ಟು ಬ್ಯಾಕ್ ಚಾಂಪಿಯನ್ ಪಟ್ಟಕ್ಕೇರಬೇಕಿದೆ. ಆದರೆ ಸದ್ಯದ ಮಟ್ಟಿಗೆ ಇದು ಅಸಾಧ್ಯ ಎಂದೇ ಹೇಳಬಹುದು.

6 / 6
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!